ಕನ್ನಡದ ಖ್ಯಾತ ಸಾಹಿತಿ, ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ವಿಧಿವಶ

ಕನ್ನಡದ ಖ್ಯಾತ ಸಾಹಿತಿ, ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ವಿಧಿವಶ

ಕನ್ನಡದ ಖ್ಯಾತ ಹಿರಿಯ ಸಾಹಿತಿ, ಕವಿ, ನಾಟಕ ರಚನೆಕಾರರು ಹಾಗೂ ಹೆಚ್‌ಎಸ್‌ವಿ ಎಂದೇ ಚಿರಪರಿಚಿತರಾಗಿರುವ ಹೆಚ್.ಎಸ್ ವೆಂಕಟೇಶಮೂರ್ತಿ ಇಂದು ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಬಿಜಿಎಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಫಾರಿನ್ ಪ್ಲೇಯರ್ಸ್ ಕೈ ಕೊಟ್ಟಿದ್ರಿಂದ ಯಾವ ಟೈಂಗೆ ಹೆಚ್ಚು ನಷ್ಟ?

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಗ್ರಾಮದ ಮಧ್ಯಮವರ್ಗದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದರು. ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದರು. ನಂತರ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ 1973ರಲ್ಲಿ ನೇಮಕಗೊಂಡರು. ಕನ್ನಡದಲ್ಲಿ `ಕಥನ ಕವನಗಳು’ ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದಿದ್ದಾರೆ. 2000ರಲ್ಲಿ ನಿವೃತ್ತರಾದ ಅವರು ಈಗ ಬೆಂಗಳೂರಿನಲ್ಲಿ ನೆಲೆಸಿದ್ದರು.

ಕನ್ನಡದಲ್ಲಿ 100ಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಅವರು, ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಜೊತೆಗೆ ಮಕ್ಕಳಿಗಾಗಿ ಕವಿತೆ, ನಾಟಕ, ಕಥೆಗಳನ್ನು ಬರೆದಿದ್ದಾರೆ. ಇವರು ಅನುವಾದಿಸಿದ ಕಾಳಿದಾಸನ ಋತುಸಂಹಾರ ಕಾವ್ಯಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪುರಸ್ಕಾರವನ್ನು ನೀಡಿ ಗೌರವಿಸಿದೆ. ಇಂದು ಹೆಚ್.ಎಸ್ ವೆಂಕಟೇಶಮೂರ್ತಿ ಅವರು ನಮ್ಮನ್ನಗಲಿರುವುದು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

Shwetha M

Leave a Reply

Your email address will not be published. Required fields are marked *