ರೇಣುಕಾಚಾರ್ಯ ಅಣ್ಣನ ಮಗ ಸಾವು ಪ್ರಕರಣ – ಕೊಲೆಯಲ್ಲ.. ಅಪಘಾತದಿಂದಲೇ ಸಾವು ಎಂದು ವರದಿ

ರೇಣುಕಾಚಾರ್ಯ ಅಣ್ಣನ ಮಗ ಸಾವು ಪ್ರಕರಣ  – ಕೊಲೆಯಲ್ಲ.. ಅಪಘಾತದಿಂದಲೇ ಸಾವು ಎಂದು ವರದಿ

ಹೊನ್ನಾಳಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ಪ್ರಕರಣ ಸಾಕಷ್ಟು ಅನುಮಾನಗಳನ್ನು ಮೂಡಿಸಿತ್ತು. ಇದು ಸಹಜ ಸಾವಲ್ಲ, ಕೊಲೆ ಎಂದು ಅನುಮಾನ ವ್ಯಕ್ತವಾಗಿತ್ತು. ಇದೀಗ ಈ ಕೇಸ್‌ ಕೊನೆಗೂ ಅಂತ್ಯ ಕಂಡಿದೆ. ಇದು ಕೊಲೆಯಲ್ಲ, ಅಪಘಾತದಿಂದ ಸಂಭವಿಸಿರುವ ಸಾವು ಅಂತಾ ತನಿಖೆಯಿಂದ ಬಯಲಾಗಿದೆ.

ಇದನ್ನೂ ಓದಿ: ಇನ್ನುಮುಂದೆ ವೀಸಾ ಇಲ್ಲದೇ ಭಾರತೀಯರು ಈ ದೇಶದಲ್ಲಿ 30 ದಿನ ಉಳಿಯಬಹುದು!

ಕಳೆದ ವರ್ಷ ನವೆಂಬರ್‌ ತಿಂಗಳಿನಲ್ಲಿ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್‌ ನಾಪತ್ತೆಯಾದ್ದರು. ಅದಾದ ಕೆಲ ದಿನಗಳಲ್ಲೇ ಚಂದ್ರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿತು. ಆಗ ರೇಣುಕಾಚಾರ್ಯ ಇದೊಂದು ಕೊಲೆ, ಉದ್ದೇಶ ಪೂರಕ ಘಟನೆಯಂತ ಹೆಚ್ಚಿನ ತನಿಖೆಗೆ ಕೇಳಿ ಪ್ರಕರಣ ಸಿಐಡಿಗೆ ನೀಡಲಾಗಿತ್ತು. ಬಳಿಕ ಸುದೀರ್ಘ ತನಿಖೆ ನಡೆಸಿದ ಸಿಐಡಿ ಪ್ರಕರಣದ ಅಂತಿಮ ಹಂತದ ವರದಿಯನ್ನು ಸಲ್ಲಿಕೆ ಮಾಡಿದೆ. ದಾವಣಗೆರೆಯ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳ ತಂಡ ವರದಿ ಸಲ್ಲಿಕೆ ಮಾಡಿದ್ದು, ಇದು ಕೊಲೆಯಿಂದ ಸಂಭವಿಸಿರೋ ಸಾವಲ್ಲ. ಅಪಘಾತದಿಂದ ಸಂಭವಿಸಿರೋ ಸಾವು ಎಂದು ಸಿಐಡಿ ವರದಿಯಲ್ಲಿ ಉಲ್ಲೇಖಿಸಿದೆ.

ಎಫ್‌ಎಸ್‌ಎಲ್ ಮತ್ತು ತಾಂತ್ರಿಕ ಸಾಕ್ಷ್ಯಗಳು ಇದೊಂದು ಅಪಘಾತ ಎಂದು ವರದಿ ನೀಡಿದ್ದು, ಪ್ರಕರಣ ಸ್ಪಷ್ಟ ಕಾರಣದೊಂದಿಗೆ ಮುಕ್ತಾಯಗೊಳಿಸಿದೆ ಎಂದು ವರದಿಯಾಗಿದೆ.

Shwetha M