ಬೆಂಗಳೂರು ಕಂಬಳಕ್ಕೆ ಅದ್ಧೂರಿ ತೆರೆ – ಕನೆಹಲಗೆ ವಿಭಾಗದಲ್ಲಿ ಗೆದ್ದ ಕಾಂತಾರದ ಜೋಡಿ ಕೋಣ

ಬೆಂಗಳೂರು ಕಂಬಳಕ್ಕೆ ಅದ್ಧೂರಿ ತೆರೆ – ಕನೆಹಲಗೆ ವಿಭಾಗದಲ್ಲಿ ಗೆದ್ದ ಕಾಂತಾರದ ಜೋಡಿ ಕೋಣ

ಬೆಂಗಳೂರು: ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ನಡೆದ ಬೆಂಗಳೂರು ಕಂಬಳಕ್ಕೆ ಅದ್ಧೂರಿ ತೆರೆ ಬಿದ್ದಿದೆ. ತುಳುನಾಡಿನ ಸಾಂಸ್ಕೃತಿಕ ಕ್ರೀಡೆಗೆ ಜನರಿಂದ ಸಖತ್ ರೆಸ್ಪಾನ್ಸ್ ವ್ಯಕ್ತವಾಗಿದೆ. ಲಕ್ಷಾಂತರ ಜನರು ಎರಡು ದಿನಗಳ ಕರಾವಳಿ ಕಂಬಳವನ್ನ ಕಣ್ತುಂಬಿಕೊಂಡಿದ್ದಾರೆ. 6 ವಿಭಾಗಗಳಲ್ಲಿ ನಡೆದ ಸ್ಪರ್ಧೆಯಲ್ಲಿ 158 ಜೊತೆ ಕಂಬಳದ ಕೋಣಗಳು ಭಾಗಿಯಾಗಿದ್ದವು. ಶನಿವಾರ ಬೆಳಗ್ಗೆ ಆರಂಭವಾಗಿದ್ದ ಕಂಬಳಕ್ಕೆ ಸೋಮವಾರ ಬೆಳಗ್ಗಿನ ಜಾವ 4 ವೇಳೆಗೆ ತೆರೆ ಬಿದ್ದಿದೆ.

ಇದನ್ನೂ ಓದಿ: ಬೆಂಗಳೂರು ಕಂಬಳ ಆಯೋಜಕರಿಗೆ ಬಿಗ್‌ ಶಾಕ್‌ – ಭಾರಿ ದಂಡ ವಿಧಿಸಿದ ಬಿಬಿಎಂಪಿ

ಬೆಂಗಳೂರಿನಲ್ಲಿ ನಡೆದ 2 ದಿನಗಳ ಕಾಲ ನಡೆದ ರಾಜ ಮಹಾರಾಜ ಜೋಡುಕರೆ ಕಂಬಳದ ಫಲಿತಾಂಶ ಬಂದಿದೆ. ಕೂಟದಲ್ಲಿ ಒಟ್ಟು 159 ಜೊತೆ ಕೋಣಗಳು ಸ್ಪರ್ಧಿಸಿವೆ. ಅದರಲ್ಲಿ ಕನೆಹಲಗೆ ವಿಭಾಗದಲ್ಲಿ 7 ಜೊತೆ ಕೋಣಗಳು ಭಾಗವಹಿಸಿದ್ದು ಕಾಂತಾರ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಕೋಣಗಳಾದ “ಅಪ್ಪು- ಕಿಟ್ಟು” ಗೆದ್ದಿರುವುದು ವಿಶೇಷವಾಗಿದೆ.

ಇನ್ನುಳಿದಂತೆ ಅಡ್ಡ ಹಲಗೆಯಲ್ಲಿ 6 ಜೊತೆ, ಹಗ್ಗ ಹಿರಿಯದಲ್ಲಿ 21 ಜೊತೆ, ನೇಗಿಲು ಹಿರಿಯಲ್ಲಿ 32 ಜೊತೆ, ಹಗ್ಗ ಕಿರಿಯದಲ್ಲಿ 31 ಜೊತೆ, ನೇಗಿಲು ಕಿರಿಯದಲ್ಲಿ 62 ಜೊತೆ ಕೋಣಗಳು ಕಂಬಳದ ಕರೆಗಿಳಿದು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದವು. ಪುತ್ತೂರಿನ ಶಾಸಕ ಅಶೋಕ ಕುಮಾರ್ ರೈ ಅವರ ನೇತೃತ್ವದಲ್ಲಿ ನಡೆದ ಈ ಕಂಬಳ ಮಹೋತ್ಸವ ಕೇವಲ ಕರಾವಳಿ ಭಾಗದ ಮಾತ್ರವಲ್ಲದೆ ಬೆಂಗಳೂರಿನ ಲಕ್ಷಾಂತರ ಮಂದಿಯೂ ನೋಡಿ ಆನಂದಿಸಿದರು. ತಾರಾ ಚಿತ್ರನಟರಾದ ಉಪೇಂದ್ರ, ರಿಷಬ್ ಶೆಟ್ಟಿ ಸೇರಿದಂತೆ ಅನೇಕ ಚಿತ್ರನಟರು, ಗಣ್ಯರು ಕಂಬಳ ವೀಕ್ಷಿಸಿ ಸಂತಸಪಟ್ಟರು.

ಇನ್ನೂ ಕಂಬಳ ಅದ್ದೂರಿ ತೆರೆ ವಿಚಾರ ಸಂಬಂಧ ಕಂಬಳ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ರೈ ಮಾತನಾಡಿ, ಬೆಂಗಳೂರು ಕಂಬಳ 100ಕ್ಕೆ 100 ಯಶಸ್ವಿಯಾಗಿದೆ. ಕಂಬಳವನ್ನ 9 ರಿಂದ 10 ಲಕ್ಷ ವೀಕ್ಷಣೆ ಮಾಡಿದ್ದಾರೆ. ದೊಡ್ಡ ಯಶಸ್ಸು ಸಿಕ್ಕಿದೆ. ಇದಕ್ಕೆ ಶ್ರಮಿಸಿದ ಎಲ್ಲಾರಿಗೂ ಧನ್ಯವಾದ ಎಂದರು.

ಬೆಂಗಳೂರು ಕಂಬಳದ ಫಲಿತಾಂಶ ಹೀಗಿದೆ….

ಕನೆಹಲಗೆ

  • ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್ “ಬಿ”
  • ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್

( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )

ಅಡ್ಡ ಹಲಗೆ

  • ಪ್ರಥಮ: ಎಸ್. ಎಮ್. ಎಸ್ ಫ್ಯಾಮಿಲಿ ಬೆಂಗಳೂರು
  • ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ

  • ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ

  • ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಸಿ”
  • ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ
  • ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
  • ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್

ಹಗ್ಗ ಕಿರಿಯ

  • ಪ್ರಥಮ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ
  • ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್
  • ದ್ವಿತೀಯ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ “ಎ”
  • ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ನೇಗಿಲು ಹಿರಿಯ

ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆ ಕುಡಿಯ

  • ಓಡಿಸಿದವರು: ಸರಪಾಡಿ ಧನಂಜಯ ಗೌಡ
  • ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ
  • ಓಡಿಸಿದವರು: ಪಟ್ಟೆ ಗುರು ಚರಣ್

ನೇಗಿಲು ಕಿರಿಯ

  • ಪ್ರಥಮ: ಜೈ ತುಳುನಾಡು ಪುತ್ತೂರು ಬೊಟ್ಯಾಡಿ ಕಿಶೋರ್ ಭಂಡಾರಿ
  • ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ
  • ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಶೆಟ್ಟಿ
  • ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

Shwetha M