ಪರಿಷ್ಕೃತಗೊಂಡ ಶಾಲಾ ಪಠ್ಯಪುಸ್ತಕ – ಚಕ್ರವರ್ತಿ ಸೂಲಿಬೆಲೆ ಪಠ್ಯ ಕೈಬಿಟ್ಟ ಸರ್ಕಾರ

ಪರಿಷ್ಕೃತಗೊಂಡ ಶಾಲಾ ಪಠ್ಯಪುಸ್ತಕ – ಚಕ್ರವರ್ತಿ ಸೂಲಿಬೆಲೆ ಪಠ್ಯ ಕೈಬಿಟ್ಟ ಸರ್ಕಾರ

ಬೆಂಗಳೂರು: ಬಿಜೆಪಿ ನೇತೃತ್ವದ ಸರ್ಕಾರ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿ ಕೆಲವು ಪಾಠಗಳನ್ನು ಸೇರಿಸಿತ್ತು. ತನ್ನ ಸಿದ್ಧಾಂತಕ್ಕೆ ಒಗ್ಗದ ಕೆಲವು ಪಾಠಗಳನ್ನು ಆಗಿನ ಸರ್ಕಾರ ಕೈಬಿಟ್ಟಿತ್ತು. ಇದೀಗ ಹೊಸ ಸರ್ಕಾರ ಕೂಡ ಇದೇ ಪ್ರವೃತ್ತಿಯನ್ನು ಮುಂದುವರಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯ ಪುಸ್ತಕಕ್ಕೆ ಸೇರ್ಪಡಿಸಲಾಗಿದ್ದ ಕೆಲ ಪಠ್ಯಗಳನ್ನು ಕೈಬಿಡಲು ನಿರ್ಧರಿಸಿತ್ತು. ಅದರಂತೆ ಚಕ್ರವರ್ತಿ ಸೂಲಿಬೆಲೆ ಅವರ ‘ತಾಯಿ ಭಾರತೀಯ ಅಮರಪುತ್ರರುʼ ಪಠ್ಯವನ್ನು ಸಂಪೂರ್ಣವಾಗಿ ಕೈಬಿಟ್ಟಿದೆ.

ಇದನ್ನೂ ಓದಿ: ಜುಲೈ 1 ರಿಂದಲೇ ಶ್ರೀರಂಗಪಟ್ಟಣದ ಗಣಂಗೂರು ಬಳಿ ಟೋಲ್ ಪ್ಲಾಜಾ ಓಪನ್ – ಟೋಲ್ ರೇಟ್ ಕೇಳಿದ್ರೆ ಬೆಚ್ಚಿ ಬೀಳ್ತೀರಾ..!

ಪರಿಷ್ಕೃತ ಪಠ್ಯ ಪುಸ್ತಕದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್‌ ಸರ್ಕಾರ, 2022-23 ನೇ ಸಾಲಿನಲ್ಲಿ 1 ರಿಂದ 10ನೇ ತರಗತಿ ಕನ್ನಡ ಭಾಷಾ ಮತ್ತು 6 ರಿಂದ 10ನೇ ತರಗತಿಗಳ ಸಮಾಜ ವಿಜ್ಞಾನ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗಿದೆ.  2023-24ನೇ ಶೈಕ್ಷಣಿಕ ಸಾಲಿಗೆ ಮುದ್ರಿಸಿ ಎಲ್ಲಾ ಶಾಲೆಗಳಿಗೆ ಸರಬರಾಜು ಮಾಡಲಾಗಿದೆ ಎಂದು ತಿಳಿಸಿದೆ.

ಬಿಜೆಪಿ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲಾಗಿತ್ತು. ಅದನ್ನು ಕಾಂಗ್ರೆಸ್‌ ಸರ್ಕಾರ ಮತ್ತೆ ಪರಿಷ್ಕರಿಸಿದೆ. 10 ನೇ ತರಗತಿಯ ಕನ್ನಡ ಭಾಷಾ ವಿಷಯದಲ್ಲಿದ್ದ ಚಕ್ರವರ್ತಿ ಸೂಲಿಬೆಲೆ ಪಠ್ಯ ಕೈಬಿಟ್ಟಿದೆ. ಜೊತೆಗೆ ಕನ್ನಡದಲ್ಲಿ 9 ಹೊಸ ಪಠ್ಯಗಳನ್ನು ಸೇರ್ಪಡೆ ಮಾಡಿದೆ. ಸಮಾಜ ವಿಜ್ಞಾನದಲ್ಲಿ 9 ಪಠ್ಯಗಳ ಪರಿಷ್ಕರಣೆ ಮತ್ತು ತಿದ್ದುಪಡಿ ಮಾಡಲಾಗಿದೆ.

suddiyaana