ಐಪಿಎಲ್‌ನಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ರಿಷಭ್ ಪಂತ್ ಕಣಕ್ಕೆ?

ಐಪಿಎಲ್‌ನಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ರಿಷಭ್ ಪಂತ್ ಕಣಕ್ಕೆ?

ರಿಷಭ್ ಪಂತ್ ಈ ಬಾರಿ ಐಪಿಎಲ್‌ನಲ್ಲಿ ಆಡುತ್ತಾರಾ?. ಈ ಪ್ರಶ್ನೆ ಈಗ ಅಭಿಮಾನಿಗಳಲ್ಲಿ ಮೂಡಿದೆ. ಪಂತ್ ಇದೀಗ ಫಿಟ್ನೆಸ್ ಮರಳಿ ಪಡೆಯಲು ಕಠಿಣ ಪರಿಶ್ರಮದಲ್ಲಿದ್ದಾರೆ. ಐಪಿಎಲ್ ಆರಂಭದ ವೇಳೆ ಅವರು ಸಂಪೂರ್ಣ ಫಿಟ್ ಆಗಲಿದ್ದಾರೆ. ಆದರೂ ಕೂಡಾ ದೀರ್ಘಾವಧಿಯವರೆಗೆ ವಿಕೆಟ್ ಕೀಪಿಂಗ್ ಮಾಡುವುದು ಅನುಮಾನ ಎನ್ನಲಾಗಿದೆ. ಇದೇ ಕಾರಣದಿಂದ ರಿಷಭ್ ಪಂತ್ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಳಸಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಯೋಚಿಸಿದೆ ಎಂಬ ಮಾತು ಕೇಳಿಬರುತ್ತಿದೆ.

ಇದನ್ನೂ ಓದಿ: ಧೋನಿ ಚೆನ್ನೈ ಸೂಪರ್ ಕಿಂಗ್ಸ್ ಟೀಂನ ಕ್ಯಾಪ್ಟನ್ ಆಗಿರ್ತಾರಾ? – ಮಾಹಿ ನಿವೃತ್ತಿ ಘೋಷಿಸಿದರೆ ಸಿಎಸ್‌ಕೆಯನ್ನು ಯಾರು ಲೀಡ್ ಮಾಡ್ತಾರೆ?

ಐಪಿಎಲ್ ಸೀಸನ್ 17 ರ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ಆಟಗಾರರ ಪಟ್ಟಿಯನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. ಇದಾದ ಬಳಿಕ ಆಟಗಾರರ ಹರಾಜು ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಡೆಲ್ಲಿ ಕ್ಯಾಪಿಟಲ್ಸ್ ಪರ ರಿಷಭ್ ಪಂತ್ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ. ಪಂತ್ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿಯುವುದು ಖಚಿತ. ಆದರೆ ಫೀಲ್ಡಿಂಗ್ ವೇಳೆ ಮತ್ತೋರ್ವ ಆಟಗಾರ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡುವ ಸಾಧ್ಯತೆಯಿದೆ. ಒಟ್ಟಿನಲ್ಲಿ ಈ ಬಾರಿಯ ಐಪಿಎಲ್ ಮೂಲಕ ರಿಷಭ್ ಪಂತ್ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳುವುದು ಬಹುತೇಕ ಖಚಿತವಾಗಿದೆ. ಇದೀಗ ಅವರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿ ಡೇವಿಡ್ ವಾರ್ನರ್ ಅವರೇ ಮುಂದುವರೆಯಲಿದ್ದಾರೆ.

ಇನ್ನು ಈ ಬಾರಿಯ ಐಪಿಎಲ್ ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರೋವ್ಮನ್ ಪೊವೆಲ್, ಮುಸ್ತಫಿಜುರ್ ರೆಹಮಾನ್, ರಿಲೀ ರೌಸ್ಸೊ ಸೇರಿದಂತೆ ಒಟ್ಟು 11 ಆಟಗಾರರನ್ನು ಬಿಡುಗಡೆ ಮಾಡಿದೆ. ಹೀಗಾಗಿ ಈ ಸಲ ಡೆಲ್ಲಿ ತಂಡದಲ್ಲಿ ಬಹುತೇಕ ಹೊಸ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ಐಪಿಎಲ್ ಸೀಸನ್ 17 ರ ಮಿನಿ ಹರಾಜು ಪ್ರಕ್ರಿಯೆ ಡಿಸೆಂಬರ್ 19 ರಂದು ದುಬೈನಲ್ಲಿ ನಡೆಯಲಿದೆ. ಈ ಹರಾಜಿಗಾಗಿ ಒಟ್ಟು 1166 ಆಟಗಾರರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.

Sulekha