ಶ್ರೇಯಸ್ ಮೈಕ್ಯಾಪ್ಟನ್ ಎಂದ ಪಾಂಡ್ಯ – ಗಿಲ್ನ ಸೈಡಿಗೆ ತಳ್ಳಿದ ರಿಷಭ್ ಪಂತ್
ಕ್ರಿಕೆಟ್ ಲೋಕದ ಇಂಟ್ರೆಸ್ಟಿಂಗ್ ಸುದ್ದಿಗಳು
ಅಂಡರ್-19 ಏಷ್ಯಾಕಪ್ 2026ರ ಎರಡನೇ ಸೆಮಿಫೈನಲ್ನಲ್ಲಿ ಇಂದು ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿವೆ. ಒಮಾನ್ನ ಅಲ್ ಅಮೆರತ್ ಮೈದಾನದಲ್ಲಿ ಪಂದ್ಯ ನಡೆಯುತ್ತಿದೆ. ಅಜೇಯವಾಗಿ ಸೆಮಿಫೈನಲ್ ತಲುಪಿರುವ ಅಫ್ಘಾನಿಸ್ತಾನ ತಂಡಕ್ಕೆ ಭಾರತ ಕಠಿಣ ಸವಾಲು ಎದುರಿಸುತ್ತಿದೆ. ಫೈನಲ್ ಪ್ರವೇಶಿಸುವುದು ಎರಡೂ ತಂಡಗಳ ಪ್ರಮುಖ ಗುರಿಯಾಗಿದೆ.
ಮುಂಬೈ ಇಂಡಿಯನ್ಸ್ ತಂಡಕ್ಕೆ ಅರ್ಷದೀಪ್ ಸಿಂಗ್ ಸೇರ್ಪಡೆಯಾಗಿರುವುದು ತಂಡದ ಬೌಲಿಂಗ್ ವಿಭಾಗಕ್ಕೆ ದೊಡ್ಡ ಬಲ ನೀಡಲಿದೆ ಅನ್ನೋ ಚರ್ಚೆ ಜೋರಾಗಿದೆ. ಈಗಾಗಲೇ ಜಸ್ಪ್ರೀತ್ ಬುಮ್ರಾ ಅವರಂತಹ ಅನುಭವಿ ವೇಗಿ ತಂಡದಲ್ಲಿದ್ದಾರೆ. ಇವರಿಬ್ಬರು ಒಟ್ಟಿಗೆ ಬೌಲಿಂಗ್ ಮಾಡಿದರೆ ಎದುರಾಳಿ ಬ್ಯಾಟರ್ಗಳಿಗೆ ಕಠಿಣ ಸವಾಲಾಗಬಹುದು. ಐಪಿಎಲ್ 2027ರಲ್ಲಿ ಈ ಜೋಡಿ ಹೇಗೆ ಮಿಂಚಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಹಾರ್ದಿಕ್ ಪಾಂಡ್ಯ ಪಂಜಾಬ್ ಕಿಂಗ್ಸ್ ಸೇರ್ಪಡೆಯಾದ ಬಳಿಕ ಮುಂಬೈ ಇಂಡಿಯನ್ಸ್ ತಂಡದ ಮುಂದಿನ ನಾಯಕ ಯಾರು ಎಂಬ ಚರ್ಚೆ ಶುರುವಾಗಿದೆ. ಮಾಜಿ ನಾಯಕ ರೋಹಿತ್ ಶರ್ಮಾ ಮತ್ತು ಉದಯೋನ್ಮುಖ ಆಟಗಾರ ತಿಲಕ್ ವರ್ಮಾ ನಾಯಕತ್ವದ ರೇಸ್ನಲ್ಲಿದ್ದಾರೆ. ಈಗ ಬಗ್ಗೆ ಪ್ರಾಂಚೈಸಿ ಮಾಹಿತಿ ಹಂಚಿಕೊಂಡಿದ್ದು ಮುಂಬೈ ಇಂಡಿಯನ್ಸ್ ಮುಂಬರುವ ಐಪಿಎಲ್ ಸೀಸನ್ ಅನ್ನು ಎದುರು ನೋಡುತ್ತಿದ್ದು, ತಂಡದ ನಾಯಕತ್ವದ ಆಯ್ಕೆಗಳನ್ನು ಅತ್ಯಂತ ನಿಗಾವಹಿಸಿ ಮತ್ತು ಸೂಕ್ಷ್ಮವಾಗಿ ಪರಿಶೀಲಿಸಲಿದೆ. ಈ ಕುರಿತಾದ ಅಧಿಕೃತ ಪ್ರಕಟಣೆಯನ್ನು ಸೂಕ್ತ ಸಮಯದಲ್ಲಿ ಮಾಡಲಾಗುವುದು ಎಂದು ಫ್ರಾಂಚೈಸಿ ತಿಳಿಸಿದೆ.
ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಜರ್ಸಿ ತೊಟ್ಟಿರುವ ಹಾರ್ದಿಕ್ ಪಾಂಡ್ಯ, ಕ್ಯಾಪ್ಟನ್ ಅಯ್ಯರ್ಗೆ ಸ್ಪೆಷಲ್ ಸಂದೇಶ ಕಳುಹಿಸಿದ್ದಾರೆ. ಸತ್ ಶ್ರೀ ಅಕಲ್. ನನ್ನ ನಾಯಕ ಶ್ರೇಯಸ್, ನನ್ನ ಕೋಚ್ ರಿಕಿ, ನನ್ನ ತಂಡ ಇಡೀ ಪಂಜಾಬ್. ನಾನು ನಿಮ್ಮ ಬೆನ್ನಿಗೆ ನಿಲ್ಲುತ್ತೇನೆ ಎಂದು ಹಾರ್ದಿಕ್ ಪಾಂಡ್ಯ ಬರೆದುಕೊಂಡಿದ್ದಾರೆ. ಈ ಮೂಲಕ ನಾಯಕ ಶ್ರೇಯಸ್ ಅಯ್ಯರ್ಗೆ ಹಾರ್ದಿಕ್ ಪಾಂಡ್ಯ ಬೆೆಂಬಲ ಕೊಟ್ಟಿದ್ದಾರೆ.
ಇದನ್ನೂ ಓದಿ: ಕಿಶನ್ ಓಪನರ್.. ನಂ.5ಗಾಗಿ ಫೈಟ್ – ಸಿರಾಜ್ ಗೆ ಕೊನೆಗೂ ಸಿಗುತ್ತಾ ಚಾನ್ಸ್?
ಐಪಿಎಲ್ ಟೂರ್ನಿಯಲ್ಲಿ ತಂಡಗಳ ಸಂಖ್ಯೆಯನ್ನು 10ರಿಂದ 12ಕ್ಕೆ ಹೆಚ್ಚಿಸುವ ಕುರಿತು ಚರ್ಚೆ ನಡೆಯುತ್ತಿದ್ದರೂ, ಸದ್ಯಕ್ಕೆ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. 2027ರ ಹರಾಜಿಗೂ ಮುನ್ನ ತಂಡಗಳ ಸಂಖ್ಯೆಯಲ್ಲಿ ಬದಲಾವಣೆ ಮಾಡುವ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ ಹೊಸ ಫ್ರಾಂಚೈಸಿಗಳ ಸೇರ್ಪಡೆ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಸದ್ಯ ನಿರಾಸೆಯಾಗಿದೆ.
ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ನ್ಯೂಜಿಲೆಂಡ್ ಪ್ರವಾಸಕ್ಕೆ ಸಿದ್ಧರಾಗುತ್ತಿದ್ದಾರೆ. ಸೈಡ್ ಸ್ಟ್ರೇನ್ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಪಂತ್, ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ಫಿಟ್ನೆಸ್ ಪರೀಕ್ಷೆ ಎದುರಿಸಲಿದ್ದಾರೆ. ಫಿಟ್ನೆಸ್ ಕ್ಲಿಯರೆನ್ಸ್ ಸಿಗುವ ನಿರೀಕ್ಷೆಯಿದ್ದು, ಅವರು ನ್ಯೂಜಿಲೆಂಡ್ಗೆ ಪ್ರಯಾಣಿಸಲಿದ್ದಾರೆ ಎಂದು ವರದಿಯಾಗಿದೆ.
ಐಪಿಎಲ್ 2027ರ ಮಿನಿ ಹರಾಜಿಗೂ ಮುನ್ನ ಬಾಂಗ್ಲಾದೇಶದ ಏಳು ಆಟಗಾರರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ ಎನ್ನುವ ವರದಿ ಹೊರಬಿದ್ದಿದೆ. ಈ ಹಿಂದೆ ಮುಸ್ತಫಿಜುರ್ ರಹಮಾನ್ ವಿಚಾರವಾಗಿ ವಿವಾದ ಉಂಟಾಗಿತ್ತು. ಇದೀಗ ಬಾಂಗ್ಲಾದೇಶದ ಆಟಗಾರರು ಹರಾಜಿನಲ್ಲಿ ಪಾಲ್ಗೊಳ್ಳಲು ಮುಂದಾಗಿರುವುದು ಕುತೂಹಲ ಮೂಡಿಸಿದೆ. ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು ನಡೆಯಲಿದೆ.
ಐಸಿಸಿ ಪ್ರಕಟಿಸಿರುವ ನೂತನ ಟೆಸ್ಟ್ ಬ್ಯಾಟರ್ಗಳ ರ್ಯಾಂಕಿಂಗ್ನಲ್ಲಿ ಭಾರತದ ನಾಯಕ ಶುಭಮನ್ ಗಿಲ್ ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ಟಾಪ್ 10ರಲ್ಲಿ ಸ್ಥಾನ ಪಡೆದಿದ್ದಾರೆ. ರಿಷಭ್ ಪಂತ್ ಎಂಟನೇ ಸ್ಥಾನದಲ್ಲಿದ್ದರೆ, ಶುಭಮನ್ ಗಿಲ್ ಹತ್ತನೇ ಸ್ಥಾನದಲ್ಲಿದ್ದಾರೆ. ಗಾಯದ ನಡುವೆಯೂ ಪಂತ್ ಅವರ ರ್ಯಾಂಕಿಂಗ್ ಗಮನ ಸೆಳೆದಿದೆ. ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಇದು ಸಂತಸದ ಸುದ್ದಿಯಾಗಿದೆ.
ಗ್ರೀಸ್ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಅನಿರುದ್ಧ್ ರವಿಚಂದರ್ ಹಾಗೂ ಕಾವ್ಯಾ ಮಾರನ್ ಅವರು ಹಸೆಮಣೆ ಏರಿದ್ದಾರೆ. ಈ ಮದುವೆಗೆ ಕುಟುಂಬದವರು, ಆಪ್ತರು ಹಾಗೂ ಕೆಲವೇ ಕೆಲವು ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು. ಮದುವೆ ಬಳಿಕ ಅನಿರುದ್ಧ್ ರವಿಚಂದರ್ ಅವರು ಮೊದಲ ಬಾರಿಗೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ದುವೆಯ ಸುಂದರ ಕ್ಷಣಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅನಿರುದ್ಧ್, ‘ನನ್ನ ಜೀವನದ ಏಕೈಕ ಮತ್ತು ಜೀವಮಾನದ ಪಯಣ (11.11)’ ಎಂದು ಶೀರ್ಷಿಕೆ ಬರೆದುಕೊಂಡಿದ್ದಾರೆ.
ಭಾರತ ವಿರುದ್ಧದ ಮುಂಬರುವ ಟೆಸ್ಟ್ ಸರಣಿಗೆ ನ್ಯೂಜಿಲೆಂಡ್ 14 ಆಟಗಾರರ ತಂಡ ಪ್ರಕಟಿಸಿದೆ. ಟಾಮ್ ಲಾಥಮ್ ತಂಡವನ್ನು ಮುನ್ನಡೆಸಲಿದ್ದಾರೆ. ರಚಿನ್ ರವೀಂದ್ರ ತಂಡಕ್ಕೆ ಮರಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪ್ರವೇಶದ ದೃಷ್ಟಿಯಿಂದ ಈ ಸರಣಿ ಎರಡೂ ತಂಡಗಳಿಗೆ ಮಹತ್ವದ್ದಾಗಿದೆ. ಭಾರತದ ವಿರುದ್ಧ ತವರಿನಲ್ಲಿ ಉತ್ತಮ ಪ್ರದರ್ಶನ ನೀಡಲು ನ್ಯೂಜಿಲೆಂಡ್ ಸಜ್ಜಾಗಿದೆ.

ನೋಡಿರಿ

