‘ರಿಷಬ್ ಪಂತ್ ಆರೋಗ್ಯ ಸ್ಥಿರವಾಗಿದೆ. ಭಯಪಡುವ ಅಗತ್ಯವಿಲ್ಲ’ – ಬಿಸಿಸಿಐ

‘ರಿಷಬ್ ಪಂತ್ ಆರೋಗ್ಯ ಸ್ಥಿರವಾಗಿದೆ. ಭಯಪಡುವ ಅಗತ್ಯವಿಲ್ಲ’ – ಬಿಸಿಸಿಐ

ಟೀಮ್ ಇಂಡಿಯಾ ಆಟಗಾರ ರಿಷಬ್ ಪಂತ್ ಆರೋಗ್ಯ ಸ್ಥಿರವಾಗಿದೆ. ಭಯಪಡುವ ಅಗತ್ಯವಿಲ್ಲ ಎಂದು ಬಿಸಿಸಿಐ ಮಾಧ್ಯಮ ವರದಿ ಬಿಡುಗಡೆಗೊಳಿಸಿದೆ. ರಿಷಭ್ ಪಂತ್ ಹಣೆಗೆ ಎರಡು ಸ್ಟಿಚ್ ಹಾಕಲಾಗಿದೆ. ಅವರ ಬಲ ಮೊಣಕಾಲಿನ ಬಳಿ ಗಾಯಗಳಾಗಿದ್ದು, ಮೂಳೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಬಲ ಮಣಿಕಟ್ಟು, ಪಾದ, ಪಾದದ ಬೆರಳಿಗೆ ಗಾಯವಾಗಿದೆ. ಬೆನ್ನಿನಲ್ಲೂ ಸುಟ್ಟ ಗಾಯಗಳಿರುವುದು ಎಕ್ಸ್-ರೇ ರಿಪೋರ್ಟ್ ನಿಂದ ತಿಳಿದುಬಂದಿದೆ. ‘ಪಂತ್ ಅವರ ಸ್ಥಿತಿ ಈಗ ಉತ್ತಮವಾಗಿದೆ. ಇತರ ಪರೀಕ್ಷೆಗಳು ಮತ್ತು ಸ್ಕ್ಯಾನ್‌ಗಳು ನಡೆಯುತ್ತಿವೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈಶಾ ಹೇಳಿದ್ದಾರೆ. ಶಾ ತಮ್ಮ ಹೇಳಿಕೆಯಲ್ಲಿ, ‘ಪಂತ್ ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಪಂತ್ ಅವರ ಆರೋಗ್ಯ ಸ್ಥಿತಿಯನ್ನು ಗಮನಿಸಲಾಗುತ್ತಿದ್ದು, ಯಾವುದೇ ರೀತಿಯ ನೆರವು ನೀಡಲು ಸಿದ್ಧ ಎಂದು ಹೇಳಿದ್ದಾರೆ. ಅಲ್ಲದೆ ಪಂತ್ ಅವರ ಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ಇದನ್ನೂ ಓದಿ:  ಭೀಕರ ರಸ್ತೆ ಅಪಘಾತ – ಕ್ರಿಕೆಟರ್ ರಿಷಭ್ ಪಂತ್ ಗೆ ಗಂಭೀರ ಗಾಯ

ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಬ್ ಪಂತ್ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು. ದೆಹಲಿಯಿಂದ ರೂರ್ಕಿಗೆ ಪ್ರಯಾಣಿಸುತ್ತಿದ್ದಾಗ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿತ್ತು. ತಕ್ಷಣ ಪಂತ್ ಅವರನ್ನು ಡೆಹ್ರಾಡೂನ್ನ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೂಡ ನೀಡಲಾಗಿದೆ. ಪಂತ್ ಅವರ ಆರೋಗ್ಯ ಸ್ಥಿತಿ ಕುರಿತು ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡಿದೆ. ‘ಪಂತ್ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಜೀವಕ್ಕೆ ಯಾವುದೇ ಅಪಾಯವಿಲ್ಲ’ ಎಂದು ಹೇಳಿಕೆಯಲ್ಲಿ ಉಲ್ಲೇಖವಾಗಿದೆ. ‘ಪಂತ್ ಅವರ ಸ್ಥಿತಿ ಈಗ ಉತ್ತಮವಾಗಿದೆ. ಇತರ ಪರೀಕ್ಷೆಗಳು ಮತ್ತು ಸ್ಕ್ಯಾನ್‌ಗಳು ನಡೆಯುತ್ತಿವೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈಶಾ ಹೇಳಿದ್ದಾರೆ.

ಮತ್ತೊಂದೆಡೆ, ಅಪಘಾತದ ಸಮಯದಲ್ಲಿ ಪಂತ್ ಸೀಟ್ ಬೆಲ್ಟ್ ಧರಿಸಿದ್ರಾ ಎಂಬುದು ಸ್ಪಷ್ಟವಾಗಿಲ್ಲ. ಈ ಅವಘಡ ಸಂಭವಿಸುವ ವೇಳೆ ರಿಷಬ್ ಪಂತ್ ಮಾತ್ರ ಕಾರಿನಲ್ಲಿದ್ದು, ಅವರೇ ಕಾರನ್ನು ಓಡಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹೊತ್ತಿ ಉರಿಯುತ್ತಿದ್ದ ಕಾರಿನ ಗಾಜುಗಳನ್ನು ಒಡೆದು ರಿಷಬ್ ಪಂತ್ ಹೊರಗೆ ಬಂದಿದ್ದಾರೆ ಎನ್ನಲಾಗಿದೆ. ರಾತ್ರಿ ಪ್ರಯಾಣದ ಕಾರಣ ಕೊಂಚ ತೂಕಡಿಕೆಯಾಗಿದ್ದು, ಕ್ಷಣಾರ್ಧದಲ್ಲಿ ಅಪಘಾತ ಸಂಭವಿಸಿದೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಅಪಘಾತದಿಂದ ರಿಷಬ್ ಪಂತ್ ಶೀಘ್ರ ಗುಣಮುಖರಾಗಲಿ ಎಂದು ಕ್ರಿಕೆಟಿಗರು ಹಾಗೂ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

suddiyaana