ಕಂದಕಕ್ಕೆ ಉರುಳಿ ಬಿದ್ದ ಕ್ರೂಸರ್ ವಾಹನ – 7 ಮಂದಿ ಕಾರ್ಮಿಕರು ಸಾವು
ಜಮ್ಮು ಮತ್ತು ಕಾಶ್ಮೀರ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್ ವಾಹನವೊಂದು ಚಾಲಕ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದ್ದು, ಏಳು ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಕಿಶ್ತ್ವಾರದಲ್ಲಿ ನಡೆದಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ 5 ದಿನ ಆರ್ಭಟಿಸಲಿದ್ದಾನೆ ವರುಣಾ – ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಅಧಿಕಾರಿಗಳ ಪ್ರಕಾರ, ಬುಧವಾರ ಮುಂಜಾನೆ ದಂಗದೂರು ಪವರ್ ಪ್ರಾಜೆಕ್ಟ್‌ನ 10 ಕಾರ್ಮಿಕರನ್ನು ಕ್ರೂಸರ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ದಂಗದೂರು ಅಣೆಕಟ್ಟಿನ ಬಳಿ ಚಾಲಕನ ನಿಯಂತ್ರ ತಪ್ಪಿ ವಾಹನ ಕಂದಕಕ್ಕೆ ಉರುಳಿ ಬಿದ್ದಿದೆ. ಅವಘಡದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ವಾಹನ ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ ಸಾವು-ನೋವು ಸಂಭವಿಸಿದೆ. ಈ ಸ್ಥಳದಲ್ಲಿ ಹೆಚ್ಚಾಗಿ ಅಪಘಾತ ಸಂಭವಿಸುತ್ತದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.