ಸಿಕ್ಸರ್‌ನಿಂದ ಅರ್ಧಶತಕ ಗಳಿಸಿದ ಹಿಟ್‌ಮ್ಯಾನ್ ವಿಶ್ವದಾಖಲೆ – ಗೇಲ್ ದಾಖಲೆ ಮುರಿದ ರೋಹಿತ್ ಶರ್ಮಾ
ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ ಬಾರಿಸುವ ಮೂಲಕ ವಿಶ್ವದಾಖಲೆಯೊಂದನ್ನ ನಿರ್ಮಿಸಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲೇ ಅತಿಹೆಚ್ಚು ಸಿಕ್ಸರ್ ಬಾರಿಸಿದ ವಿಶ್ವದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಆರಂಭದಿಂದಲೇ ಹಿಟ್‌ಮ್ಯಾನ್ ಅಬ್ಬರಿಸಲು ಶುರು ಮಾಡಿದರು. ಅಬ್ಬರದ ಬ್ಯಾಟಿಂಗ್ ಮಾಡಿದ ರೋಹಿತ್, ತಮ್ಮ ಅಲ್ಪ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಿಡಿಸಿದರು. ಈ ಮೂಲಕ ವಿಶ್ವಕಪ್ ಇತಿಹಾಸದಲ್ಲಿ ಅಪರೂಪದ ದಾಖಲೆಯನ್ನು ಬರೆದರು. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 29 ಎಸೆತಗಳಲ್ಲಿ 47 ರನ್ ಸಿಡಿಸಿ ವಿಕೆಟ್ ಒಪ್ಪಿಸಿದ್ದಾರೆ. ಈ ನಡುವೆ ವಿಶ್ವಕಪ್ ಇತಿಹಾಸದಲ್ಲಿ ಅಪರೂಪದ ದಾಖಲೆಯನ್ನು ರೋಹಿತ್ ಶರ್ಮಾ ಬರೆದರು. ಕಿವೀಸ್ ವಿರುದ್ಧ 4 ಬೃಹತ್ ಸಿಕ್ಸರ್ ಸಿಡಿಸಿದ ಹಿಟ್ಮ್ಯಾನ್ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರರ ಪೈಕಿ ಕ್ರಿಸ್ ಗೇಲ್ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ್ದಾರೆ.
2015 ರಿಂದ ಏಕದಿನ ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಪರ ಆಡುತ್ತಿರುವ ರೋಹಿತ್, ಈ ಮೂರು ಆವೃತ್ತಿಗಳಲ್ಲಿ 27 ಪಂದ್ಯಗಳನ್ನಾಡಿದ್ದು, ಇದುವರೆಗೆ ಬರೋಬ್ಬರಿ 50 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ.
ವಿಶ್ವಕಪ್ ಟೂರ್ನಿಯಲ್ಲಿ 49 ಸಿಕ್ಸರ್ ಸಿಡಿಸಿದ್ದ ಕ್ರಿಸ್‌ಗೇಲ್ 2ನೇ ಸ್ಥಾನದಲ್ಲಿದ್ದರೆ, 43 ಸಿಕ್ಸರ್ ಬಾರಿಸಿದ್ದ ಗ್ಲೇನ್ ಮ್ಯಾಕ್ಸ್‌ವೆಲ್ 3ನೇ ಸ್ಥಾನ, ತಲಾ 37 ಸಿಕ್ಸರ್ ಬಾರಿಸಿದ್ದ ಎಬಿಡಿ ವಿಲಿಯರ್ಸ್ ಮತ್ತು ಡೇವಿಡ್ ವಾರ್ನರ್ ಕ್ರಮವಾಗಿ 4 ಮತ್ತು 5ನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಒಟ್ಟು 4 ಸಿಕ್ಸರ್ ಬಾರಿಸಿರುವ ರೋಹಿತ್ ಶರ್ಮಾ ಒಟ್ಟು 51 ಸಿಕ್ಸರ್‌ಗಳೊಂದಿಗೆ ನಂ.1 ಸ್ಥಾನದಲ್ಲಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶುಭ್‌ಮನ್ ಗಿಲ್ ಕೂಡಾ ಚೆನ್ನಾಗಿಯೇ ಸ್ಕೋರ್ ಕಲೆಹಾಕಿದ್ದಾರೆ. ಭರ್ಜರಿ ಹಾಫ್ ಸೆಂಚೂರಿ ಹೊಡೆದಿರುವ ಗಿಲ್ ನಂತರ ಇಂಜುರಿಯಿಂದ ನಿರ್ಗಮಿಸಿದರು. ಇನ್ನು ವಿರಾಟ್ ಕೊಹ್ಲಿ ಕೂಡಾ ಅರ್ಧಶತಕ ಭಾರಿಸಿ ಅಭಿಮಾನಿಗಳ ಸಂಭ್ರಮಕ್ಕೆ ಕಾರಣರಾದರು.