ಕ್ರಿಕೆಟ್ ದೇವರ ವಿಶ್ವ ದಾಖಲೆ ಮುರಿದ ರೋಹಿತ್ ಶರ್ಮಾ – ಸಚಿನ್ ತೆಂಡೂಲ್ಕರ್ ರೆಕಾರ್ಡ್ ಬ್ರೇಕ್ ಮಾಡಿದ ಹಿಟ್‌ಮ್ಯಾನ್

ಕ್ರಿಕೆಟ್ ದೇವರ ವಿಶ್ವ ದಾಖಲೆ ಮುರಿದ ರೋಹಿತ್ ಶರ್ಮಾ – ಸಚಿನ್ ತೆಂಡೂಲ್ಕರ್ ರೆಕಾರ್ಡ್ ಬ್ರೇಕ್ ಮಾಡಿದ ಹಿಟ್‌ಮ್ಯಾನ್

ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ವಿಶ್ವ ಕ್ರಿಕೆಟ್‌ನಲ್ಲಿ ವಿಶೇಷ ಮೈಲಿಗಲ್ಲು ಸಾಧಿಸಿದ್ದಾರೆ. ಶ್ರೀಲಂಕಾ ವಿರುದ್ಧ 22 ರನ್ ಗಳಿಸಿ ದಾಖಲೆಯ ಸರದಾರನಾಗಿ ಮೆರೆದಿದ್ದಾರೆ. ‘ಹಿಟ್‌ಮ್ಯಾನ್’ ಶರ್ಮಾ ಏಕದಿನ ಮಾದರಿಯಲ್ಲಿ 10,000 ರನ್ ಕ್ಲಬ್ ಸೇರಿದ್ದಾರೆ. ಈ ಮೂಲಕ ವೇಗವಾಗಿ 10 ಸಾವಿರ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದನ್ನೂ ಓದಿ: ಏಷ್ಯಾಕಪ್ ಫೈನಲ್ ಪಂದ್ಯ ಸ್ಥಳ ಬದಲಾವಣೆ ಸಾಧ್ಯತೆ – ಕೊಲಂಬೋದಲ್ಲಿ ಬದಲು ಕ್ಯಾಂಡಿಯಲ್ಲಿ ನಡೆಯಲಿದೆ ಫೈನಲ್ ಮ್ಯಾಚ್

ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 10 ಸಾವಿರ ರನ್ ಪೂರೈಸಿದ ಬ್ಯಾಟರ್‌ಗಳ ಪಟ್ಟಿಗೆ ಹಿಟ್ ಮ್ಯಾನ್ ರೋಹಿತ್ ಶರ್ಮಾ ಸೇರಿದ್ದಾರೆ. ಏಷ್ಯಾ ಕಪ್ ಟೂರ್ನಿಯ ಕೊಲಂಬೊದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ 10 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ವೇಗವಾಗಿ 10 ಸಾವಿರ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕಾಣಿಸಿಕೊಂಡಿದ್ದರು. ತೆಂಡೂಲ್ಕರ್ 259 ಏಕದಿನ ಇನಿಂಗ್ಸ್‌ಗಳ ಮೂಲಕ 10000 ರನ್ ಪೂರೈಸಿದ್ದರು. ಇದೀಗ ಕೇವಲ 241 ಏಕದಿನ ಇನಿಂಗ್ಸ್‌ಗಳ ಮೂಲಕ ರೋಹಿತ್ ಶರ್ಮಾ 10 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ವೇಗವಾಗಿ 10 ಸಾವಿರ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ವಿಶ್ವ ದಾಖಲೆ ಬರೆದಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ ಎಂಬುದು ವಿಶೇಷ. ಕಿಂಗ್ ಕೊಹ್ಲಿ ಕೇವಲ 205 ಇನಿಂಗ್ಸ್‌ಗಳ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ 10 ಸಾವಿರ ರನ್ ಪೂರೈಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

Sulekha