ಹಾರ್ದಿಕ್ ಪಾಂಡ್ಯ ಕನಸು ನುಚ್ಚು ನೂರು ಮಾಡಿದ ಬಿಸಿಸಿಐ – ಟಿ20 ವಿಶ್ವಕಪ್ ಟೂರ್ನಿಗೆ ರೋಹಿತ್ ಶರ್ಮಾ ಕ್ಯಾಪ್ಟನ್

ಹಾರ್ದಿಕ್ ಪಾಂಡ್ಯ ಕನಸು ನುಚ್ಚು ನೂರು ಮಾಡಿದ ಬಿಸಿಸಿಐ – ಟಿ20 ವಿಶ್ವಕಪ್ ಟೂರ್ನಿಗೆ ರೋಹಿತ್ ಶರ್ಮಾ ಕ್ಯಾಪ್ಟನ್

ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಕ್ಯಾಪ್ಟನ್ ಸ್ಥಾನದಿಂದ ರೋಹಿತ್ ಶರ್ಮಾರನ್ನು ಇಳಿಸಿ ನಾಯಕನ ಪಟ್ಟ ಪಡೆದಿದ್ದ ಹಾರ್ದಿಕ್ ಪಾಂಡ್ಯಗೆ ಬಿಸಿಸಿಐ ಬಿಗ್ ಶಾಕ್ ನೀಡಿದೆ. ವೆಸ್ಟ್ ಇಂಡೀಸ್ ಮತ್ತು ಯುಎಸ್​ಎ ಜಂಟಿಯಾಗಿ ಆಯೋಜಿಸುತ್ತಿರುವ ಟಿ20 ವಿಶ್ವಕಪ್​ ಟೂರ್ನಿಗೆ ಭಾರತ ತಂಡದ ಕ್ಯಾಪ್ಟನ್ ಆಗಿ ರೋಹಿತ್ ಶರ್ಮಾರನ್ನ ಆಯ್ಕೆ ಮಾಡಲಾಗಿದೆ. ಈ ಮೂಲಕ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುವ ಹಾರ್ದಿಕ್ ಪಾಂಡ್ಯ ಕನಸು ನುಚ್ಚುನೂರಾಗಿದೆ.

ಇದನ್ನೂ ಓದಿ:ಹಾರ್ದಿಕ್ ಪಾಂಡ್ಯ ರಿಜೆಕ್ಟ್ ಮಾಡಿದ್ದು ಕೊಹ್ಲಿ? – ವಿರಾಟ್ ಕೊಹ್ಲಿಗಾಗಿ ರೋಹಿತ್ ಶರ್ಮಾ ಬ್ಯಾಟಿಂಗ್ ? – ಇದಪ್ಪಾ ಸ್ನೇಹ ಅಂದ್ರೆ..!

ಕಳೆದ ಒಂದು ವರ್ಷದಿಂದ ಭಾರತ ಟಿ20 ತಂಡವನ್ನು ಪಾಂಡ್ಯ ಮುನ್ನಡೆಸುತ್ತಿದ್ದರು. ಹೀಗಾಗಿ ಟಿ20 ವಿಶ್ವಕಪ್​ನಲ್ಲೂ ಅವರೇ ನಾಯಕ ಎನ್ನಲಾಗಿತ್ತು. ಆದ್ರೆ ಬಿಸಿಸಿಐ ರೋಹಿತ್​ಗೆ ಮುಂದಾಳತ್ವ ನೀಡಿದೆ. ವಿಶ್ವಕಪ್ ಟೂರ್ನಿ ಜೂನ್ 1 ರಿಂದ ಶುರುವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಯುಎಸ್​ಎ ಜಂಟಿಯಾಗಿ ಆಯೋಜಿಸುತ್ತಿರುವ ಟಿ20 ವಿಶ್ವಕಪ್​ ಜೂನ್ 1 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಜೂನ್ 29 ರಂದು ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಇದರೊಂದಿಗೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಹಿಟ್​ಮ್ಯಾನ್ ಕಣಕ್ಕಿಳಿಯುವುದು ಖಚಿತವಾಗಿದೆ.

ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಒಂದು ವರ್ಷದಿಂದ ಟಿ20 ಕ್ರಿಕೆಟ್​ನಿಂದ ಹೊರಗುಳಿದಿದ್ದರು. ಆದರೆ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯ ಮೂಲಕ ಇಬ್ಬರೂ ಕೂಡ ಕಂಬ್ಯಾಕ್ ಮಾಡಿದ್ದರು. ಈ ಕಂಬ್ಯಾಕ್ ಬೆನ್ನಲ್ಲೇ ಇದೀಗ ರೋಹಿತ್ ಶರ್ಮಾಗೆ ಟಿ20 ನಾಯಕತ್ವ ಒಲಿದಿದೆ. ಅಷ್ಟೇ ಅಲ್ಲದೆ ಮುಂಬರುವ ಟಿ20 ವಿಶ್ವಕಪ್​ನಲ್ಲೂ ರೋಹಿತ್ ಶರ್ಮಾ ಮುಂದಾಳತ್ವದಲ್ಲೇ ಭಾರತ ತಂಡ ಕಣಕ್ಕಿಳಿಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಸ್ಪಷ್ಟಪಡಿಸಿದ್ದಾರೆ.

ಟಿ20 ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸುವುದು ಖಚಿತ. ಇನ್ನು ಇದುವರೆಗೆ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯರನ್ನು ಉಪನಾಯಕನಾಗಿ ಆಯ್ಕೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಹಾಗೆಯೇ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರೆಯಲಿದ್ದಾರೆ.

ಕೆಲ ತಿಂಗಳ ಹಿಂದೆಯಷ್ಟೇ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸಲಾಗಿತ್ತು. ಹಾರ್ದಿಕ್ ಪಾಂಡ್ಯರನ್ನು ನೂತನ ನಾಯಕನ್ನಾಗಿ ಆಯ್ಕೆ ಮಾಡಲಾಗಿತ್ತು. ಇದು ಹಿಟ್‌ಮ್ಯಾನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಬಿಸಿಸಿಐ ಕ್ರಮದಿಂದ ರೋಹಿತ್ ಶರ್ಮಾ ಅಭಿಮಾನಿಗಳಂತೂ ದಿಲ್ ಖುಷ್ ಆಗಿದ್ದಾರೆ.

Sulekha