ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳ ಕನಸು ಭಗ್ನ – ರೋಚಕ ಪಂದ್ಯ ಗೆದ್ದು ಕ್ವಾಲಿಫೈಯರ್​​ 2ಗೆ ಎಂಟ್ರಿ ಕೊಟ್ಟ ರಾಜಸ್ಥಾನ್

ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳ ಕನಸು ಭಗ್ನ – ರೋಚಕ ಪಂದ್ಯ ಗೆದ್ದು ಕ್ವಾಲಿಫೈಯರ್​​ 2ಗೆ ಎಂಟ್ರಿ ಕೊಟ್ಟ ರಾಜಸ್ಥಾನ್

ಆರ್‌ಸಿಬಿ ಹಾಗೂ ರಾಜಸ್ಥಾನ ರಾಯಲ್ಸ್‌ ನಡುವೆ ನಡೆದ ಎಲಿಮಿನೇಟರ್‌ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಆರ್‌ಸಿಬಿ ಸೋಲು ಕಂಡಿದ್ದು, ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳ ಕನಸು ಭಗ್ನಗೊಂಡಿದೆ.

ಇದನ್ನೂ ಓದಿ: ಡ್ರೈವಿಂಗ್ ಲೈಸೆನ್ಸ್‌ಗೆ ಹೊಸ ನಿಯಮ! – ಜೂನ್ 1 ರಿಂದ RTO ಎದುರು ಟೆಸ್ಟ್ ಮಾಡಬೇಕಿಲ್ಲ!

ನರೇಂದ್ರ ಮೋದಿ ಇಂಟರ್​ ನ್ಯಾಷನಲ್​ ಕ್ರಿಕೆಟ್​​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಆರಂಭಿಸಿದ ವಿರಾಟ್‌ ಕೊಹ್ಲಿ ಮತ್ತು ನಾಯಕ ಡುಪ್ಲೆಸಿಸ್‌ ಮೊದಲ ವಿಕೆಟಿಗೆ 37 ರನ್‌ ಕಲೆ ಹಾಕಿದರು. 17 ರನ್‌ ಗಳಿಸಿದ್ದಾಗ ಈ ವೇಳೆ ಸಿಕ್ಸ್‌ ಸಿಡಿಸಲು ಹೋಗಿ ಡುಪ್ಲೇಸಿಸ್‌ ಪೊವೆಲ್‌ ಹಿಡಿದ ಅತ್ಯುತ್ತಮ ಕ್ಯಾಚ್‌ಗೆ ಬಲಿಯಾದರು. ಉತ್ತಮವಾಗಿ ಆಡುತ್ತಿದ್ದ ಕೊಹ್ಲಿ 33 ರನ್‌ (24 ಎಸೆತ, 3 ಬೌಂಡರಿ, 1 ಸಿಕ್ಸ್‌) ಸಿಕ್ಸ್‌ ಸಿಡಿಸಲು ಹೋಗಿ ವಿಕೆಟ್‌ ಒಪ್ಪಿಸಿದರು.

ಮೂರನೇ ವಿಕೆಟಿಗೆ ರಜತ್‌ ಪಾಟೀದರ್‌ ಮತ್ತು ಕ್ಯಾಮರೂನ್‌ ಗ್ರೀನ್‌ 31 ಎಸೆತಗಳಲ್ಲಿ 41 ರನ್‌ ಜೊತೆಯಾಟವಾಡಿ ಸ್ವಲ್ಪ ಚೇತರಿಕೆ ನೀಡಿದರು. ಮ್ಯಾಕ್ಸ್‌ವೆಲ್‌ ಮತ್ತೆ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದರು.  ಕ್ಯಾಮರೂನ್‌ ಗ್ರೀನ್‌ 27 ರನ್‌ (21 ಎಸೆತ, 2 ಬೌಂಡರಿ, 1 ಸಿಕ್ಸ್‌), ರಜತ್‌ ಪಾಟೀದರ್‌ 34 ರನ್‌ (22 ಎಸೆತ, 2 ಬೌಂಡರಿ, 2 ಸಿಕ್ಸ್‌), ಮಹಿಪಾಲ್ ಲೋಮ್ರೋರ್ 32 ರನ್‌(17 ಎಸೆತ, 2 ಬೌಂಡರಿ, 2 ಸಿಕ್ಸ್‌) ಸಿಡಿಸಿ ಔಟಾದರು. ಅಂತಿಮವಾಗಿ 8 ವಿಕೆಟ್‌ ನಷ್ಟಕ್ಕೆ 172 ರನ್‌ಗಳಿಸಿತು.

ಆರ್‌ಸಿಬಿಯ 173 ರನ್‌ಗಳ ಸವಾಲನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್‌ ಇನ್ನು 6 ಎಸೆತ ಇರುವಂತೆಯೇ 6 ವಿಕೆಟ್‌ ನಷ್ಟಕ್ಕೆ 174 ರನ್‌ ಹೊಡೆದು ಜಯ ಸಾಧಿಸಿತು. ಟಾಪ್‌ ಆರ್ಡರ್‌ ಬ್ಯಾಟರ್‌ಗಳ ವೈಫಲ್ಯ, ಕಳಪೆ ಬೌಲಿಂಗ್‌ ಮತ್ತು ಫೀಲ್ಡಿಂಗ್‌ಗೆ ಆರ್‌ಸಿಬಿ ಬೆಲೆ ತೆತ್ತಿದೆ.

ಮೊದಲ ವಿಕೆಟಿಗೆ ಯಶಸ್ವಿ ಜೈಸ್ವಾಲ್‌ ಮತ್ತು ಟಾಮ್ ಕ್ಯಾಡ್ಮೋರ್ 33 ಎಸೆತಗಳಲ್ಲಿ 46 ರನ್‌ ಹೊಡೆದರು. ಟಾಮ್ ಕ್ಯಾಡ್ಮೋರ್ 20 ರನ್‌ ಗಳಿಸಿ ಔಟಾದರೆ ಯಶಸ್ವಿ ಜೈಸ್ವಾಲ್‌ 45 ರನ್‌(30 ಎಸೆತ, 8 ಬೌಂಡರಿ) ಹೊಡೆದು ವಿಕೆಟ್‌ ಒಪ್ಪಿಸಿದರು. ನಾಯಕ ಸಂಜು ಸ್ಯಾಮ್ಸನ್‌ 17 ರನ್‌ ಸಿಡಿಸಿ ಔಟಾದರು.

112 ರನ್‌ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ರಾಜಸ್ಥಾನ ವಿರಾಟ್‌ ಕೊಹ್ಲಿ ಅವರ ಅತ್ಯುತ್ತಮ ಥ್ರೋನಿಂದಾಗಿ 4ನೇ ವಿಕೆಟ್‌ ಕಳೆದುಕೊಂಡಿತು. 8 ರನ್‌ ಗಳಿಸಿದ್ದ ಧ್ರುವ್ ಜುರೆಲ್ ಎರಡನೇ ರನ್‌ ಓಡುವಾಗ ರನೌಟ್‌ಗೆ ಬಲಿಯಾದರು. ಕೊನೆಯಲ್ಲಿ ಹೆಟ್ಮೇಯರ್‌ 26 ರನ್‌(14 ಎಸೆತ, 3 ಬೌಂಡರಿ, 1 ಸಿಕ್ಸರ್‌) ಮತ್ತು ಪೊವೆಲ್‌ ಔಟಾಗದೇ 16 ರನ್‌ ಹೊಡೆದ ಪರಿಣಾಮ ರಾಜಸ್ಥಾನ ಪಂದ್ಯವನ್ನು ಗೆದ್ದುಕೊಂಡಿತು.

Shwetha M