ಟಾಸ್ ಗೆದ್ದ ಡೆಲ್ಲಿಯಿಂದ ಬೌಲಿಂಗ್ ಆಯ್ಕೆ – ಮೊದಲು ಬ್ಯಾಟಿಂಗ್ ಶುರುಮಾಡಿದ RCB

ಟಾಸ್ ಗೆದ್ದ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಐಪಿಎಲ್ 2026 ರ 26 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಪಂದ್ಯವನ್ನು ತಮ್ಮ ತವರು ಮೈದಾನವಾದ MA ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಿದೆ. ಈ ಪಂದ್ಯದಲ್ಲಿ, ಆರ್ಸಿಬಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಗುರಿಯನ್ನು ಹೊಂದಿದೆ. ಏತನ್ಮಧ್ಯೆ, ದೆಹಲಿ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಸೋಲುಗಳಿಂದ ಹೊರಬರಲು ಪ್ರಯತ್ನಿಸಲಿದೆ.
ಇದನ್ನೂ ಓದಿ: ಬಳ್ಳಾರಿಯಲ್ಲಿ ಪ್ಯಾರಾಚೂಟ್ ತರಬೇತಿ ವೇಳೆ 50 ಅಡಿ ಎತ್ತರದಿಂದ ಬಿದ್ದು ಇಬ್ಬರು ಸೈನಿಕರು!
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇದುವರೆಗೆ 33 ಪಂದ್ಯಗಳನ್ನು ಆಡಿವೆ. ಈ ಅವಧಿಯಲ್ಲಿ ಆರ್ಸಿಬಿ 20 ಪಂದ್ಯಗಳನ್ನು ಗೆದ್ದಿದ್ದರೆ, ಡೆಲ್ಲಿ ಕೇವಲ 12 ಪಂದ್ಯಗಳನ್ನು ಗೆದ್ದಿದೆ.ಟಾಸ್ ಗೆದ್ದ ಡೆಲ್ಲಿ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದ್ದು, ಬೃಹತ್ ಮೊತ್ತ ಕಲೆ ಹಾಕುವ ಜೋಷ್ನಲ್ಲಿದೆ.

ನೋಡಿರಿ

