ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ – ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಕಾದಾಟ

ಭರವಸೆಯ ಆಟಗಾರರಾದ ನಾಯಕ ಜಿತೇಶ್ ಶರ್ಮಾ ಹಾಗೂ ಮಯಾಂಕ್ ಅಗರ್‌ವಾಲ್ ಅವರು ಜವಾಬ್ದಾರಿಯುತ ಆಟದ ನೆರವಿನಿಂದ 18ನೇ ಆವೃತ್ತಿಯ ಐಪಿಎಲ್‌ನ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್‌ಸಿಬಿ ಜಯ ಸಾಧಿಸಿದೆ. ಈ ಮೂಲಕ ಆರ್‌ಸಿಬಿ ಕ್ವಾಲಿಫೈಯರ್ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಕಾದಾಟ ನಡೆಸಲಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಎಲ್‌ಎಸ್‌ಜಿ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 227 ರನ್ ಸೇರಿಸಿತು. ಇದಕ್ಕುರವಾಗಿ ಬ್ಯಾಟ್ ಮಾಡಿದ ಆರ್‌ಸಿಬಿ 18.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 230 ರನ್ ಕಲೆ ಹಾಕಿ ಅಬ್ಬರಿಸಿತು. ಈ ಮೂಲಕ ಆರ್‌ಸಿಬಿ 2 ಪೂರ್ಣ ಅಂಕಗಳನ್ನು ಕಲೆ ಹಾಕಿದ್ದು, 19 ಅಂಕಗಳೊಂದಿಗೆ ಅಗ್ರ ಎರಡನೇ ಸ್ಥಾನ ಪಡೆದಿದೆ. ಇನ್ನು ಆರ್‌ಸಿಬಿ ಐಪಿಎಲ್ ಇತಿಹಾದ ಮೂರನೇ ದೊಡ್ಡ ಮೊತ್ತವನ್ನು ಚೇಸ್ ಮಾಡಿದ ಹಿರಿಮೆಯನ್ನು ತನ್ನದಾಗಿಸಿಕೊಂಡಿದೆ.
ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ತಂಡದ ಆರಂಭ ಭರ್ಜರಿಯಾಗಿತ್ತು. ಆರಂಭಿಕ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಭರ್ಜರಿ ಜೊತೆಯಾವನ್ನು ನೀಡಿತು. ಈ ಜೋಡಿ ಮೊದಲ ವಿಕೆಟ್‌ಗೆ 5.4 ಓವರ್‌ಗಳಲ್ಲಿ 61 ರನ್ ಸೇರಿಸಿತು. ಫಿಲ್ ಸಾಲ್ಟ್ 6 ಬೌಂಡರಿ ನೆರವಿನಿಂದ 30 ರನ್ ಬಾರಿಸಿದರು. ರಜತ್ ಪಾಟಿದಾರ್ 14 ರನ್ ಬಾರಿಸಿ ಔಟ್ ಆದರು. ಲಿಯಾಮ್ ಲಿವಿಂಗ್‌ಸ್ಟೋನ್ ಬಂದು ಹೋಗುವ ಸಂಪ್ರದಾಯವನ್ನು ಮುಗಿಸಿದರು. ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 30 ಎಸೆತಗಳಲ್ಲಿ 10 ಬೌಂಡರಿ ನೆರವಿನಿಂದ 54 ರನ್ ಸಿಡಿಸಿದರು. ಈ ಮೂಲಕ ವಿರಾಟ್ ಅಬ್ಬರಿಸಿದರು. ಮಯಾಂಕ್, ಜಿತೇಶ್ ಜುಗಲ್‌ಬಂಧಿ 123 ರನ್‌ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಆರ್‌ಸಿಬಿ ತಂಡಕ್ಕೆ ಮಯಾಂಕ್ ಅಗರ್‌ವಾಲ್ ಹಾಗೂ ಜಿತೇಶ್ ಶರ್ಮಾ ಸೊಗಸಾದ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಎಲ್‌ಎಸ್‌ಜಿ ಬೌಲರ್‌ಗಳು ವಿಫಲರಾದರು. ಈ ಜೋಡಿ 45 ಎಸೆತಗಳಲ್ಲಿ ಅಜೇಯ 107 ರನ್ ಸೇರಿಸಿತು. ನಾಯಕ ಜಿತೇಶ್ ಶರ್ಮಾ 8 ಬೌಂಡರಿ, 6 ಸಿಕ್ಸರ್ ಸಹಾಯದಿಂದ ಅಜೇಯ 6 ಸಿಕ್ಸರ್ ಬಾರಿಸಿ ಗೆಲುವಿನಲ್ಲಿ ಮಿಂಚಿದರು. ಇನ್ನು ಕನ್ನಡಿಗ ಮಯಾಂಕ್ ಅಗರ್‌ವಾಲ್ 5 ಬೌಂಡರಿ ಸಹಾಯದಿಂದ ಅಜೇಯ 41 ರನ್ ಬಾರಿಸಿದರು
ರಿಷಭ್ ಪಂತ್ ಶತಕ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಎಲ್‌ಎಸ್‌ಜಿ ತಂಡದ ಆರಂಭ ಸಾಧಾರಣವಾಗಿತ್ತು. ಆರಂಭಿಕ ಮ್ಯಾಥ್ಯೂ ಬ್ರೀಟ್ಜ್ಕೆ 14 ರನ್‌ಗಳಿಗೆ ಔಟ್ ಆದರು. ಮೊದಲ ವಿಕೆಟ್‌ಗೆ ಮ್ಯಾಥ್ಯೂ ಬ್ರೀಟ್ಜ್ಕೆ ಹಾಗೂ ಮಿಚೆಲ್ ಮಾರ್ಷ್ 25 ರನ್‌ಗಳ ಜೊತೆಯಾಟ ನೀಡಿತು. ಎರಡನೇ ವಿಕೆಟ್‌ಗೆ ಮಿಚೆಲ್ ಮಾರ್ಷ್ ಹಾಗೂ ರಿಷಭ್ ಪಂತ್ ಜೋಡಿ 78 ಎಸೆತಗಳಲ್ಲಿ 152 ರನ್ ಸೇರಿಸಿತು. ಮಿಚೆಲ್ ಮಾರ್ಷ್ 4 ಬೌಂಡರಿ, 5 ಸಿಕ್ಸರ್ ಸಹಾಯದಿಂದ 67 ರನ್ ಬಾರಿಸಿ ಮಿಂಚಿದರು.