ಗೃಹಲಕ್ಷ್ಮಿ ಯೋಜನೆ ಹಣ ಮೃತರ ಹೆಸರಿಗೆ ಜಮೆ! – ದಕ್ಷಿಣ ಕನ್ನಡದಲ್ಲಿ ಬಡ ಮಹಿಳೆಯರ ಹೆಸರಲ್ಲಿ ಕೋಟಿ ಕೋಟಿ ಲೂಟಿ?

ಗೃಹಲಕ್ಷ್ಮಿ ಯೋಜನೆ ಹಣ ಮೃತರ ಹೆಸರಿಗೆ ಜಮೆ! – ದಕ್ಷಿಣ ಕನ್ನಡದಲ್ಲಿ ಬಡ ಮಹಿಳೆಯರ ಹೆಸರಲ್ಲಿ ಕೋಟಿ ಕೋಟಿ ಲೂಟಿ?

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯಲ್ಲಿ ಹಣ ದುರುಪಯೋಗದ ಪ್ರಕರಣಗಳು ಬೆಳಕಿಗೆ ಬಂದಿವೆ. ಮೃತಪಟ್ಟ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ಹಣ ಜಮಾ ಆಗುತ್ತಿರುವ ಶಾಕಿಂಗ್‌ ವಿಚಾರ ಬೆಳಕಿಗೆ ಬಂದಿದೆ. ಬರೋಬ್ಬರಿ 22 ಕೋಟಿ ರೂಪಾಯಿ ವರ್ಗಾಯಿಸಿರುವ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ವಿಜಯ್‌ ಬಗ್ಗೆ ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಗೇಟ್‌ಪಾಸ್!‌ – ಟೀಕೆ ಬೆನ್ನಲ್ಲೇ ಸಿಎಂ ವಿಶೇಷ ಕರ್ತವ್ಯಾಧಿಕಾರಿ ಹುದ್ದೆ ಹಿಂಪಡೆದ ದಳಪತಿ!

ಗೃಹಲಕ್ಷ್ಮೀ ಯೋಜನೆಯ ಹಣದಲ್ಲಿ ಅಕ್ರಮ ನಡೆಯುತ್ತಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿವೆ. ಇತ್ತೀಚೆಗಷ್ಟೇ ಹಾವೇರಿಯಲ್ಲಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ಹಣ ಜಮಾ ಆಗುತ್ತಿದ್ದು, ಕೆಲವರು ಎಟಿಎಂ ಕಾರ್ಡ್‌ ಮೂಲಕ ಹಣ ತೆಗೆಯುತ್ತಿರುವುದು ಪತ್ತೆಯಾಗಿತ್ತು. ಇದೀಗ ದಕ್ಷಿಣ ಕನ್ನಡದಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಗೃಹಲಕ್ಷ್ಮಿ ಯೋಜನೆಯಡಿ ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಬರೋಬ್ಬರಿ 22 ಕೋಟಿ ರುಪಾಯಿ ವರ್ಗಾಯಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಖಾತರಿ ಯೋಜನೆಗಳ ಅನುಷ್ಠಾನ ಪರಿಶೀಲನಾ ಸಮಿತಿ ಸಭೆಯಲ್ಲಿ ಈ ವಿಷಯ ಬಹಿರಂಗಗೊಂಡಿದೆ. ಈ ಹಣವನ್ನು ಹಿಂಪಡೆಯಲು ತಕ್ಷಣ ಕ್ರಮಗಳನ್ನು ತೆಗೆದು ಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ನಿಷ್ಕ್ರಿಯ ಖಾತೆಗಳಿಗೆ ಹಣವನ್ನು ನಿರಂತರವಾಗಿ ವರ್ಗಾಯಿಸುವ ಬಗ್ಗೆ ರಾಜ್ಯ ಕಚೇರಿಯಿಂದ ಮಾಹಿತಿ ಬಂದಿದೆ. ದಾಖಲೆಗಳಲ್ಲಿ ಹಲವು ವ್ಯತ್ಯಾಸವಿರುವುದು ಪತ್ತೆಯಾಗಿದೆ. ಇದಲ್ಲದೆ ಕೆಲವು ಜೀವಂತ ಫಲಾನುಭವಿಗಳನ್ನು ಇಲಾಖೆಯ ದಾಖಲೆಗಳಲ್ಲಿ ಮೃತಪಟ್ಟವರು ಎಂದು ಗುರುತಿಸಿರುವ ಗಂಭೀರ ಎಡವಟ್ಟೂ ಕಂಡು ಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ಗೃಹ ಲಕ್ಷ್ಮಿ ಯೋಜನೆಯಡಿ 4,25,759 ರೇಷನ್ ಕಾರ್ಡ್ ಹೊಂದಿದವರು ಇದ್ದು, ಇದುವರೆಗೆ 3,82,178 ಫಲಾನುಭವಿಗಳು ನೋಂದಾಯಿಸಿದ್ದಾರೆ.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆ ಎನಿಸಿಕೊಂಡಿರುವ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಸರ್ಕಾರ ಕೆಲವು ದಿನಗಳ ಹಿಂದೆ ಹೊಸ ಸೂಚನೆ ನೀಡಿತ್ತು. ಯೋಜನೆಯ ದುರ್ಬಳಕೆ ತಡೆಯಲು ಸರ್ಕಾರ ಮುಖ್ಯ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಇನ್ನುಮುಂದೆ ಫಲಾನುಭವಿಗಳು ಜೀವಿತ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಲಿದೆ. ಮರಣ ಹೊಂದಿರುವ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತಿರುವುದನ್ನು ತಪ್ಪಿಸಲು ಜೀವಿತ ಪ್ರಮಾಣ ಪತ್ರ ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿತ್ತು.

ಜೀವಿತ ಪ್ರಮಾಣ ಪತ್ರ ಸಲ್ಲಿಕೆ ಬಗ್ಗೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ಎಂಎಲ್‌ಸಿ ದಿನೇಶ್ ಗೂಳಿಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸೂಚಿಸಿದ್ದರು. ಅಲ್ಲದೆ ಈ ಬಗ್ಗೆ ಲಿಖಿತ ಮನವಿಯನ್ನೂ ಸಲ್ಲಿಸಿದ್ದರು.

ರಾಜ್ಯದಲ್ಲಿ ಸುಮಾರು 1.24 ಕೋಟಿಗೂ ಅಧಿಕ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿದ್ದಾರೆ. ಯೋಜನೆ ಜಾರಿದಾಗಾಗಿನಿಂದ ಸರ್ಕಾರ ಈವರೆಗೆ ಫಲಾನುಭವಿಗಳಿಗೆ ಸುಮಾರು 57,300 ಕೋಟಿ ರುಪಾಯಿ ವಿತರಿಸಿದೆ. ಅದಾಗ್ಯೂ ಈ ಯೋಜನೆಯನ್ನು ದುರುಪಯೋಗಪಡಿಸಲಾಗುತ್ತಿದೆ ಎನ್ನುವ ಆರೋಪ ಪದೇ ಪದೆ ಕೇಳಿ ಬರುತ್ತಿದೆ.

Shwetha M

Leave a Reply

Your email address will not be published. Required fields are marked *