ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ 5 ಕೋಟಿ ರೂಪಾಯಿ ಬಹುಮಾನ

ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ 5 ಕೋಟಿ ರೂಪಾಯಿ ಬಹುಮಾನ

ಸೌತ್ ಆಫ್ರಿಕಾದಲ್ಲಿ ನಡೆದ ಅಂಡರ್ 19 ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್​ ಅನ್ನು ತನ್ನದಾಗಿಸಿಕೊಂಡಿತು. ವಿಶ್ವಕಪ್ ಗೆದ್ದುಕೊಂಡ ಬೆನ್ನಲ್ಲೇ ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಬಿಸಿಸಿಐ 5 ಕೋಟಿ ರೂಪಾಯಿ ಪ್ರೋತ್ಸಾಹ ಧನ ಘೋಷಿಸಿದೆ.

ಇದನ್ನೂ ಓದಿ:  ಟೀಮ್ ಇಂಡಿಯಾ ಆಟಗಾರರಿಗೆ ಧೋನಿ ಸರ್‌ಪ್ರೈಸ್ -–ಡ್ರೆಸ್ಸಿಂಗ್ ರೂಮ್‌ನಲ್ಲಿ ಫುಲ್ ಜೋಶ್

ಈ ಬಗ್ಗೆ ಟ್ವೀಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ‘ಭಾರತೀಯ ಮಹಿಳಾ ಕ್ರಿಕೆಟ್ ಮುನ್ನುಗ್ಗುತ್ತಿದೆ. ಈ ವಿಶ್ವಕಪ್ ವಿಜಯೋತ್ಸವವು ಮಹಿಳಾ ಕ್ರಿಕೆಟ್‌ನ ಸ್ಥಾನಮಾನವನ್ನು ಮತ್ತಷ್ಟು ಎತ್ತರಕ್ಕೇರಿಸಿದೆ. ಈ ಸಂತೋಷದ ಘಳಿಗೆಯಲ್ಲಿ ಇಡೀ ತಂಡ ಮತ್ತು ಸಹಾಯಕ ಸಿಬ್ಬಂದಿಗೆ 5 ಕೋಟಿಯನ್ನು ಘೋಷಿಸುತ್ತಿರುವುದು ಸಂತೋಷದಾಯಕ ವಿಷಯ’ ಎಂದು ಟ್ವೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲದೆ ವಿಶ್ವಕಪ್ ವಿಜೇತ ತಂಡವನ್ನು ಭಾರತ-ನ್ಯೂಜಿಲೆಂಡ್ ನಡುವಣ 3ನೇ ಟಿ20 ಪಂದ್ಯದ ವೇಳೆ ಗೌರವಿಸಲಾಗುವುದು ಎಂದು ಬಿಸಿಸಿಐ ತಿಳಿಸಿದೆ. ಇನ್ನು ಚೊಚ್ಚಲ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಭಾರತೀಯ ಮಹಿಳಾ ಕ್ರೀಡಾಪಟುಗಳು ಉತ್ತಮ ಆಟವಾಡಿದ್ದಾರೆ. ಅವರ ಯಶಸ್ಸು ಮುಂದಿನ ಕ್ರಿಕೆಟಿಗರಿಗೆ ಸ್ಫೂರ್ತಿ ನೀಡುತ್ತದೆ. ವಿಜೇತ ತಂಡದ ಮುಂದಿನ ಪ್ರಯತ್ನಕ್ಕೆ ಶುಭವಾಗಲಿ ಎಂದು ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ.

suddiyaana