ಲೋಕಸಭೆ ಚುನಾವಣೆಯಲ್ಲಿ ಕ್ರಿಕೆಟರ್ ಮೊಹಮ್ಮದ್ ಶಮಿಗೆ ಬಿಜೆಪಿ ಟಿಕೆಟ್‌? – ಯಾವ ಕ್ಷೇತ್ರದಿಂದ ಸ್ವರ್ಧೆ?

ಲೋಕಸಭೆ ಚುನಾವಣೆಯಲ್ಲಿ ಕ್ರಿಕೆಟರ್ ಮೊಹಮ್ಮದ್ ಶಮಿಗೆ ಬಿಜೆಪಿ ಟಿಕೆಟ್‌? – ಯಾವ ಕ್ಷೇತ್ರದಿಂದ ಸ್ವರ್ಧೆ?

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಿಂದ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್‌ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಪ್ರಮುಖ ಎದುರಾಳಿಯಾಗಿರುವ ಬಿಜೆಪಿ, ಕಳೆದ ಲೋಕಸಭೆ ಚುನಾವಣೆಗಿಂತ ಹೆಚ್ಚಿನ ಸೀಟುಗಳಲ್ಲಿ ಗೆಲ್ಲುವ ಗುರಿ ಹೊಂದಿದೆ. ಅದಕ್ಕಾಗಿ ವಿವಿಧ ರಂಗಗಳ ಪ್ರಸಿದ್ಧ ಹಾಗೂ ಜನಪ್ರಿಯ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡು, ಅವರಿಗೆ ಟಿಕೆಟ್ ನೀಡುವ ಪ್ರಯತ್ನ ನಡೆಸುತ್ತಿದೆ. ಇದೀಗ ಮೊಹಮ್ಮದ್‌ ಶಮಿಗೆ ಬಿಜೆಪಿ ಟಿಕೆಟ್‌ ಕೊಡಲು ಪ್ಲಾನ್‌ ಮಾಡಿದೆ.

ಇದನ್ನೂ ಓದಿ: ರೆಬೆಲ್ ಲೇಡಿ ಸುಮಲತಾ ಕಾಂಗ್ರೆಸ್ಸಿಗರ ವಿರುದ್ಧ ಸಿಟ್ಟಾಗಿರೋದೇಕೆ..? ಸಚಿವ ಚಲುವರಾಯಸ್ವಾಮಿ ಕೊಟ್ಟ ತಿರುಗೇಟು ಏನು..?

ಉತ್ತರ ಪ್ರದೇಶ ಮೂಲದವರಾದ ಮೊಹಮ್ಮದ್ ಶಮಿ ಅವರು ಬಂಗಾಳದ ತಂಡದ ಪರ ರಣಜಿ ಟ್ರೋಫಿ ಪಂದ್ಯಗಳನ್ನಾಡಿದ್ದಾರೆ. ಈಗಲೂ ದೇಶಿಯ ಕ್ರಿಕೆಟ್ ನಲ್ಲಿ ಬಂಗಾಳವನ್ನೇ ಶಮಿ ಪ್ರತಿನಿಧಿಸುತ್ತಿದ್ದಾರೆ. ಇದೀಗ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಅವರನ್ನು ಬಿಜೆಪಿ ಸೆಳೆದು, ಟಿಕೆಟ್ ನೀಡಲು ನಿರ್ಧರಿಸಿದೆ ಎನ್ನಲಾಗಿದೆ.  ವರದಿ ಪ್ರಕಾರ ಬಿಜೆಪಿ ನಾಯಕರು ಈಗಾಗಲೇ ಶಮಿ ಜೊತೆ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದ್ರೆ ಶಮಿ ಈವರೆಗೂ ಫೈನಲ್ ಮಾಡಿಲ್ಲ.

ಕಳೆದ ಏಕದಿನ ವಿಶ್ವಕಪ್ ನಲ್ಲಿ ಅತ್ಯದ್ಭುತ ಬೌಲಿಂಗ್ ನಿಂದ ಕಮಾಲ್ ಮಾಡಿದ್ದ ಶಮಿ ಬಳಿಕ ಗಾಯದ ಕಾರಣದಿಂದ ಯಾವುದೇ ಕ್ರಿಕೆಟ್ ಆಡಿಲ್ಲ. ಇತ್ತೀಚೆಗಷ್ಟೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಮಿ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಸರ್ಜರಿಗೆ ಒಳಗಾಗಿದ್ದ ಶಮಿ ಅವರಿಗೆ ಮೋದಿ ಅವರು ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದರು.

Shwetha M