ಕಟೀಲ್, ಸದಾನಂದಗೌಡರ ಭಾವಚಿತ್ರಕ್ಕೆ ಚಪ್ಪಲಿ ಹಾರ – ಕರಾವಳಿಯ‌ಲ್ಲಿ ಕೇಸರಿ ನಾಯಕರ‌ ಮೇಲೆ‌ ಸಿಟ್ಟೇಕೆ?

ಕಟೀಲ್, ಸದಾನಂದಗೌಡರ ಭಾವಚಿತ್ರಕ್ಕೆ  ಚಪ್ಪಲಿ ಹಾರ – ಕರಾವಳಿಯ‌ಲ್ಲಿ ಕೇಸರಿ ನಾಯಕರ‌ ಮೇಲೆ‌ ಸಿಟ್ಟೇಕೆ?

ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಬಿಜೆಪಿ ಇನ್ನೂ ಕೂಡ ಈ ಶಾಕ್‌ನಿಂದ ಹೊರಬಂದಿಲ್ಲ. ಇದರ ಬೆನ್ನಲ್ಲೇ ಕರಾವಳಿಯಲ್ಲಿ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಸ್ಟೋಟವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಸ್‌ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಹಾಗೂ ಡಿವಿ ಸದಾನಂದ ಗೌಡ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಶ್ರದ್ಧಾಂಜಲಿ ಬರೆದು ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ದೆಹಲಿಗೆ ಹೋಗಲು ಸಿದ್ಧರಾಮಯ್ಯ ಸಿದ್ಧತೆ – ನಾನು ಹೋಗಲ್ಲ ಎಂದು ಡಿಕೆಶಿ ಹೇಳಿದ್ದು ಯಾಕೆ?

‘ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ’ ಅಂತ ಬ್ಯಾನರ್ ನಲ್ಲಿ ಬರೆಯಲಾಗಿದ್ದು, ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಬ್ಯಾನರ್ ಅಳವಡಿಕೆ ಮಾಡಿದ್ದಾರೆ. ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಪುತ್ತೂರಿನಲ್ಲಿ ಕಾರ್ಯಕರ್ತರ ತೀವ್ರ ಆಕ್ರೋಶಕ್ಕೆ ತುತ್ತಾಗಿರೋ ಬಿಜೆಪಿ, ಹಿಂದೂ ಕಾರ್ಯಕರ್ತರ ಕಡೆಗಣನೆ ಆರೋಪ ಕೂಡ ಹೊತ್ತಿದೆ.

ಪುತ್ತೂರು ಸೇರಿದಂತೆ ರಾಜ್ಯದಾದ್ಯಂತ ಬಿಜೆಪಿ ಸೋಲಲು ನಳಿನ್ ಕುಮಾರ್ ಕಟೀಲ್ ಅವರ ವೈಯಕ್ತಿಕ ಹಿತಾಸಕ್ತಿ ಮತ್ತು ಅಸಮರ್ಥ ನಾಯಕತ್ವವೇ ಕಾರಣ ಎಂದು ಕಳೆದ ಕೆಲ ಸಮಯದಿಂದ ಸ್ವತಃ ಬಿಜೆಪಿ ಕಾರ್ಯಕರ್ತರೇ ಸಾಮಾಜಿಕ ಜಾಲತಾಣ ಸೇರಿದಂತೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಅದರ ಮುಂದುವರಿದ ಭಾಗವಾಗಿ ಕಿಡಿಗೇಡಿಗಳು ನಳಿನ್ ಕುಮಾರ್ ಕಟೀಲ್ ಮತ್ತು ಸಂಸದ ಡಿವಿ ಸದಾನಂದ ಗೌಡ ಅವರ ಫೋಟೋ ಇರುವ ಬ್ಯಾನರ್ ಹಾಕಿ ಶ್ರದ್ದಾಂಜಲಿ ವಿಕೃತಿ ಮೆರೆದಿದ್ದಾರೆ.

suddiyaana