‘ರಾಮಾಯಣ’ದಲ್ಲಿ ಸಾಯಿ ಪಲ್ಲವಿ ಸೀತೆ ಪಾತ್ರ ಮಾಡಿದ್ರೆ ಸಿನಿಮಾ ನೋಡಲ್ಲ ಎಂದ ಫ್ಯಾನ್ಸ್ – ಕಾರಣವೇನು ಗೊತ್ತಾ?

ರಾಮಾಯಣ ಬಾಲಿವುಡ್‌ನಲ್ಲಿ ತೆರೆ ಮೇಲೆ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ. ಈ ಚಿತ್ರದಲ್ಲಿ ದೊಡ್ಡ ಸ್ಟಾರ್ ಬಳಗವೇ ಇದೆ. ಈಗಾಗಲೇ ಚಿತ್ರದ ಶೂಟಿಂಗ್ ಆರಂಭವಾಗಿದ್ದು, ಸಿನಿಮಾ ಸೆಟ್‌ನ ಫೋಟೋಗಳು ರಿವೀಲ್ ಆಗಿದೆ. ಈ ಸಿನಿಮಾದಲ್ಲಿ ರಾಮನಾಗಿ ರಣಬೀರ್ ಕಪೂರ್ ಮಿಂಚುತ್ತಿದ್ದರೆ, ಸೀತೆಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಇದೀಗ ಸಾಯಿ ಪಲ್ಲವಿ ಸೀತೆಯಾಗಿ ನಟಿಸಿದ್ರೆ ನಾವು ಸಿನಿಮಾ ನೋಡಲ್ಲ ಅಂತಾ ಸಿನಿ ಪೇಕ್ಷಕರು ಹೇಳುತ್ತಿದ್ದಾರೆ.
ಇದನ್ನೂ ಓದಿ: ರಾಮಾಯಣ ಶೂಟಿಂಗ್‌ನ ಫೋಟೋ ಲೀಕ್ – ಶೂಟಿಂಗ್ ವೇಳೆ ಮೊಬೈಲ್ ನಿಷೇಧ
ದೊಡ್ಡ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿರುವ ರಾಮಾಯಣ ಸಿನಿಮಾ ನೋಡಲು ಪ್ರೇಕ್ಷಕರು ಕಾಯುತ್ತಿದ್ದಾರೆ. ಆದ್ರೆ ಇದೀಗ ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಳ್ಳುವುದು ಕೆಲ ಸಿನಿ ಪ್ರೇಕ್ಷಕರಿಗೆ ಇಷ್ಟವಿಲ್ಲವಂತೆ ಹೀಗಾಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಅಭಿಯಾನ ಶುರುಮಾಡಿದ್ದಾರೆ. ಸಾಯಿ ಪಲ್ಲವಿ ಸೀತೆಯಾಗಿ ನಟಿಸುವುದೇ ದೊಡ್ಡ ಕಾಮಿಡಿ.. ಸಾಯಿ ಪಲ್ಲವಿ ಸಿನಿಮಾದಲ್ಲಿ ನಟನೆ ಮಾಡಬಾರದು ಎಂದು ನೆಟ್ಟಿಗರು ಸಿನಿಮಾ ತಂಡಬ ಬಳಿ ಮನವಿ ಮಾಡ್ತಾ ಇದ್ದಾರೆ.
ಇನ್ನು ಸಾಯಿ ಪಲ್ಲವಿ ಸೀತೆಯಾಗಿ ನಟನೆ ಮಾಡಬಾರದು ಎಂದು ಹೇಳಲು ಬಲವಾದ ಕಾರಣವಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಂದಾಗ ಹಿಂದೂ ವಿರೋಧಿ ಹೇಳಿಕೆಯನ್ನು ಸಾಯಿ ಪಲ್ಲವಿ ನೀಡಿದ್ದರು. ಈ ಕಾರಣದಿಂದಾಗಿ ಭಾರೀ ವಿರೋಧವನ್ನು ಸೋಷಿಯಲ್ ಮೀಡಿಯಾದಲ್ಲಿ ಮಾಡಲಾಗುತ್ತಿದೆ.
ರಾಮಾಯಣ ಸಿನಿಮಾ ಮೂರು ಪಾರ್ಟ್ ನಲ್ಲಿ ಮೂಡಿ ಬರಲಿದ್ದು, ಒಟ್ಟು ಬಜೆಟ್ ಎಷ್ಟು, ಯಾರಿಗೆ ಎಷ್ಟು ಸಂಭಾವನೆ ನೀಡಲಾಗಿದೆ, ಅತೀ ಹೆಚ್ಚು ಸಂಭಾವನೆ ಪಡೆದ ನಟ ಯಾರು ಹೀಗೆ ಸಿನಿ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಅಧಿಕೃತವಾಗಿ ಚಿತ್ರತಂಡ ಹೇಳಿಕೊಳ್ಳದೇ ಇದ್ದರೂ, ನಟ, ನಟಿಯರು ಭರ್ಜರಿ ಸಂಭಾವನೆಯನ್ನೇ ಪಡೆದಿದ್ದಾರೆ.
ರಾಮನ ಪಾತ್ರದಲ್ಲಿ ಮಿಂಚಲಿರುವ ಬಾಲಿವುಡ್ ನಟ ರಣಬೀರ್ ಕಪೂರ್ ಬರೋಬ್ಬರಿ 75 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಮೂರು ಪಾರ್ಟ್ ಸೇರಿ ಇವರಿಗೆ 225 ಕೋಟಿ ರೂಪಾಯಿ ಸಂದಾಯವಾಗಲಿದೆಯಂತೆ. ನಟಿ ಸಾಯಿ ಪಲ್ಲವಿ 18 ಕೋಟಿ ರೂಪಾಯಿ ನೀಡಲಾಗುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದಾವುದೂ ಖಚಿತ ಮಾಹಿತಿ ಅಲ್ಲ ಎನ್ನುವುದು ನೆನಪಿನಲ್ಲಿಡಬೇಕಾದ ಸಂಗತಿ.
ಈ ನಡುವೆ ಸಿನಿಮಾಗಾಗಿ ರಣ್‌ಬೀರ್ ಹಳ್ಳಿಯಲ್ಲಿ ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದಾರೆ. ರಾಮನ ಅವತಾರದಲ್ಲಿ ಬರಲು ‘ಅನಿಮಲ್’ ಹೀರೋ ಭಾರೀ ತಯಾರಿ ಮಾಡಿಕೊಳ್ತಿದ್ದಾರೆ. ‘ದಂಗಲ್’ ಸಿನಿಮಾ ನಂತರ ರಾಮಾಯಣ ಚಿತ್ರಕ್ಕಾಗಿ ಡೈರೆಕ್ಟರ್ ಹ್ಯಾಟ್ ತೊಟ್ಟಿದ್ದಾರೆ ನಿತೇಶ್ ತಿವಾರಿ. ಚಿತ್ರತಂಡ ಕೂಡ ಪಾತ್ರಕ್ಕಾಗಿ ಏನೆಲ್ಲಾ ತಯಾರಿ ಮಾಡಲು ತಿಳಿಸಿದ್ದಾರೋ ಅದನ್ನು ಪ್ರಾಮಾಣಿಕವಾಗಿ ರಣ್‌ಬೀರ್ ಕಪೂರ್ ಮಾಡುತ್ತಿದ್ದಾರೆ. ‘ಆದಿಪುರುಷ್’ ಸಿನಿಮಾದಂತೆ ತಮ್ಮ ಸಿನಿಮಾ ಆಗಬಾರದು ಎಂದು ಎಚ್ಚರಿಕೆಯಿಂದ ರಣ್‌ಬೀರ್ ಹೆಜ್ಜೆ ಇಡುತ್ತಿದ್ದಾರೆ.