ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ – ವಯೋಸಹಜ ಕಾಯಿಲೆಯಿಂದ ವಿಧಿವಶ

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ – ವಯೋಸಹಜ ಕಾಯಿಲೆಯಿಂದ ವಿಧಿವಶ

ಖ್ಯಾತ ಪರಿಸರವಾದಿ, ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ.  

 ಉಸಿರಾಟದ ತೊಂದರೆಯಿಂದ  ಬಳಲುತ್ತಿದ್ದ 114 ವರ್ಷದ ತಿಮ್ಮಕ್ಕನಿಗೆ  ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್​​ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಆದರೆ ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು. ಸಾಲು ಮರದ ತಿಮ್ಮಕ್ಕ ಎಂದೇ ಪ್ರಸಿದ್ಧರಾಗಿದ್ದ ಇವರಿಗೆ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಸಿಕ್ಕಿತ್ತು. 

ಸಾಲುಮರದ ತಿಮ್ಮಕ್ಕ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು. ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪುರಸ್ಕಾರ ಪಡೆದಾಗ ಆಗಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರನ್ನು ಆಶೀರ್ವದಿಸಿದ್ದರು. 

Kishor KV