ಸಮಂತಾಗೆ ಹೊಸ ಮಾದರಿಯ ಥೆರಪಿ! – 6 ತಿಂಗಳು ಕಷ್ಟ ಕಷ್ಟ..

ಸಮಂತಾಗೆ ಹೊಸ ಮಾದರಿಯ ಥೆರಪಿ! – 6 ತಿಂಗಳು ಕಷ್ಟ ಕಷ್ಟ..

ಸೌತ್ ಸಿನಿ ದುನಿಯಾದ ಮೋಸ್ಟ್ ಬ್ಯೂಟಿಫುಲ್ ನಟಿ ಸಮಂತಾ ರುತ್​ ಪ್ರಭು ಅವರು ಅನಾರೋಗ್ಯದ ಕಾರಣಕ್ಕೆ ಪದೇ ಪದೇ ಸುದ್ದಿಯಾಗುತ್ತಿದ್ದಾರೆ. ಸಮಂತಾ ಮಯೋಸೈಟೀಸ್ ಕಾಯಿಲೆಯಿಂದ ಬಳಲುತ್ತಿದ್ದು, ಕೆಲಕಾಲ ಆ ಕಾಯಿಲೆಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಸಮಂತಾ ಬದುಕಿನಲ್ಲಿ ಎಲ್ಲವೂ ಸರಿಯಾಯಿತು ಎನ್ನುವಾಗಲೇ ಮತ್ತೆ ಮಯೋಸೈಟೀಸ್ ಕಾಡಲಾರಂಭಿಸಿದೆ. ಇದರಿಂದಾಗಿ ಸಮಂತಾಗೆ ನೆಮ್ಮದಿಯೇ ಇಲ್ಲದಂತಾಗಿದೆ.

ಇದನ್ನೂ ಓದಿ: ಸಮಂತಾಗೆ ಮತ್ತೆ ಕೈ ಕೊಟ್ಟ ಆರೋಗ್ಯ.. 6 ತಿಂಗಳು ಅಮೆರಿಕದಲ್ಲಿ ಚಿಕಿತ್ಸೆ?

ಹೌದು, ಸಮಂತಾ ಮಯೋಸೈಟೀಸ್ ಕಾಯಿಲೆಯಿಂದ ಬಳಲುತ್ತಿದ್ದು, ಈ ಹಿಂದೆ ಹಲವು ತಿಂಗಳುಗಳ ಕಾಲ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟಿದ್ದರು. ಒಪ್ಪಿಕೊಂಡಿದ್ದ ಪ್ರಾಜೆಕ್ಟ್ ಗಳನ್ನು ಅವರು ಮುಗಿಸಿಕೊಡಬೇಕಿತ್ತು. ಹಾಗಾಗಿ ಆರು ತಿಂಗಳ ಕಾಲ ನೋವಿನಲ್ಲೇ ಕೆಲಸ ಮಾಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಟಿ ಸಮಂತಾ, ದಿನಕ್ಕೊಂದು ಪೋಸ್ಟ್ ಮಾಡಿ ತಮ್ಮ ಅಂತರಾಳದ ದುಗುಡಗಳನ್ನು ಅಭಿಮಾನಿಗಳ ಮುಂಚೆ ಬಿಚ್ಚಿಡುತ್ತಿದ್ದಾರೆ.ಇನ್ನೂ ಸಾಧ್ಯವಿಲ್ಲ ಅನಿಸಿ, ಒಂದಷ್ಟು ಪ್ರಾಜೆಕ್ಟ್ ಗಳಿಗೆ ತೆಗೆದುಕೊಂಡಿದ್ದ ಅಡ್ವಾನ್ಸ್ ವಾಪಸ್ಸು ಮಾಡಿ ಮತ್ತೆ ಆರೋಗ್ಯದ ಕಡೆ ಗಮನ ಹರಿಸಿದ್ದಾರೆ.

ಡಿವೋರ್ಸ್ ನಂತರ ಒಂದಲ್ಲಾ ಒಂದು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಸಮಂತಾ ಸೂಕ್ತ ಚಿಕಿತ್ಸೆಗಾಗಿ ಅಮೆರಿಕಾಗೆ ಹಾರಿದ್ದಾರೆ. ತಮ್ಮ ಆರೋಗ್ಯ ಸುಧಾರಣೆಗೆ ಹೊಸ ಮಾದರಿಯ ಥೆರಪಿಯೊಂದನ್ನ ಮಾಡಿಸುತ್ತಿದ್ದಾರೆ. ಚ್‌ಬಿಓಟಿ ಹೆಸರಿನ ಚಿಕಿತ್ಸೆಯನ್ನು ಸ್ಯಾಮ್ ಪಡೆದುಕೊಳ್ಳುತ್ತಿದ್ದಾರೆ.

ಎಚ್‌ಬಿಓಟಿ ಎಂದರೆ ಹೈಪರ್‌ಬ್ಯಾರಿಕ್ ಆಕ್ಸಿಜನ್ ಥೆರಪಿ ಎಂದರ್ಥ. ಈ ಚಿಕಿತ್ಸಾ ವಿಧಾನದಲ್ಲಿ ವ್ಯಕ್ತಿಗೆ ಪ್ರತ್ಯೇಕವಾಗಿ ಶುದ್ಧ ಆಮ್ಲಜನಕವನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನ ವೇಗದಲ್ಲಿ ನೀಡಲಾಗುತ್ತದೆ. ಈ ಥೆರಪಿ ಮಾಡಿಸಲು ವಿಶೇಷವಾದ ಕೋಣೆ ಅಥವಾ ಚೇಂಬರ್‌ಗಳನ್ನು ನಿರ್ಮಿಸಿ ಅದರಲ್ಲಿ ಚಿಕಿತ್ಸೆ ಪಡೆಯುವವರನ್ನು ಕೂರಿಸಿ ಅಥವಾ ಮಲಗಿಸಿ ವೇಗವಾಗಿ ಶುದ್ಧ ಆಮ್ಲಜನಕವನ್ನು ಅವರ ದೇಹಕ್ಕೆ ಹರಿಸಲಾಗುತ್ತದೆ. ಈ ಚಿಕಿತ್ಸೆಯಿಂದ ಶ್ವಾಸಕೋಶಗಳು ಹೆಚ್ಚು ಆಮ್ಲಜನಕವನ್ನು ಹೀರಿಕೊಳ್ಳುತ್ತವೆ ಹಾಗೂ ರಕ್ತದಲ್ಲಿಯೂ ಆಮ್ಲಜನಕದ ಪ್ರಮಾಣ ಹೆಚ್ಚಾಗುತ್ತದೆ. ಚರ್ಮವು ಶುಷ್ಕವಾಗಿ ಬಿಳಿಚಿಕೊಳ್ಳುವುದರಿಂದ ರಕ್ಷಿಸುತ್ತದೆ. ರಕ್ತದಲ್ಲಿ ಆಮ್ಲಜನಕ ಪ್ರಮಾಣ ಹೆಚ್ಚಾಗುವುದರಿಂದ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಶ್ವಾಸಕೋಶದ ಸೋಂಕುಗಳು ನಿವಾರಣೆಯಾಗುತ್ತದೆ. ಗಾಯಗಳು, ನೋವುಗಳು ಬೇಗನೆ ಮಾಯಲು, ವಾಸಿಯಾಗಲು ಪ್ರಾರಂಭವಾಗುತ್ತವೆ.

suddiyaana