ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ಸೂ*ಸೈ*ಡ್

ನಟಿ ಕೃಷಿ ತಾಪಂಡಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರೋ ಸ್ಯಾಂಡಲ್‌ವುಡ್ ನಟಿಯಾದ ಕೃಷಿ ತಾಪಂಡ ಅಪಾರ್ಟ್‌ಮೆಂಟ್‌ನಲ್ಲೇ ಉದ್ಯಮಿ ಸೂಸೈಡ್ ಮಾಡಿಕೊಂಡಿದ್ದಾರೆ. ಈ ಘಟನೆ ಈಗ ಸಂಚಲನ ಮೂಡಿಸಿದ್ದು, ಸಾಕಷ್ಟು ಊಹಪೋಹಗಳಿಗೆ ಸಾಕ್ಷಿಯಾಗಿದೆ.
ಇದನ್ನೂ ಓದಿ: ಮುತ್ತತ್ತಿಯಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿ ಪಾಲು – ಡೇಂಜರ್ ಅಂತಾ ಗೊತ್ತಿದ್ದರೂ ಯಾಕೆ ನೀರಿಗಿಳಿದಿದ್ದು ಯಾಕೆ?
ಅಂದಹಾಗೇ ಆರ್.ಆರ್. ನಗರದ ಪ್ರತಿಷ್ಠಿತ ‘ಎಲಿಗಂಟ್ಸ್ ಅಪಾರ್ಟ್‌ಮೆಂಟ್’ ನಲ್ಲಿ ಈ ಘಟನೆ ನಡೆದಿದೆ.ನಿನ್ನೆ ರಾತ್ರಿ ನಟಿ ಕೃಷಿ ತಾಪಂಡ ಫ್ಲಾಟ್‌ಗೆ ಬಂದಿದ್ದ45 ವರ್ಷದ ಉದ್ಯಮಿ ವೈಶಾಕ್, ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿಕೊಂಡು ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ನಟಿ ಕೃಷಿ ತಾಪಂಡ ಮನೆಯಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ವೈಶಾಕ್ ಸಾವಿನ ವಿಷಯ ತಿಳಿಯುತ್ತಿದ್ದಂತೆ ಅಪಾರ್ಟ್‌ಮೆಂಟ್‌ಗೆ ಹೋದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. ಸದ್ಯ ವೈಶಾಕ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸಾವಿಗೆ ನಿಖರವಾದ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ.

ನೋಡಿರಿ

