ವಿನಯ್ ಸೇಡಿಗೆ ಆಸ್ಪತ್ರೆ ಸೇರಿದರಾ ಸಂಗೀತಾ, ಡ್ರೋನ್ ಪ್ರತಾಪ್ – ಬಿಗ್‌ಬಾಸ್ ಮನೆಯಲ್ಲಿ ಏನಾಗುತ್ತಿದೆ?
ಬಿಗ್‌ಬಾಸ್ ಮನೆಯಲ್ಲಿ ಏನಾಗುತ್ತಿದೆ. ಬರೀ ಜಗಳ, ಸೇಡು ಸ್ಪರ್ಧಿಗಳ ಅಜೆಂಡಾ ಆದರೆ ಇದು ರಿಯಾಲಿಟಿ ಶೋ ಹೇಗಾಗುತ್ತದೆ. ಯಾಕೆ ಬಿಗ್ ಬಾಸ್ ಇದಕ್ಕೆಲ್ಲಾ ಕಡಿವಾಣ ಹಾಕುತ್ತಿಲ್ಲ. ಮೊನ್ನೆ ಮೊನ್ನೆಯಷ್ಟೇ ತುಕಾಲಿ ಸಂತೋಷ್, ತನಿಷಾ ಆಸ್ಪತ್ರೆಗೆ ಹೋಗಿ ಬಂದಿದ್ದರು. ಇದೀಗ ಮತ್ತೊಂದು ಅನಾಹುತ ನಡೆದಿದೆ. ವಿನಯ್ ಮತ್ತು ಅವರ ಟೀಮ್‌ನ ಸೇಡಿಗೆ ಬಲಿಯಾದ ಸಂಗೀತಾ ಮತ್ತು ಡ್ರೋನ್ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಇದನ್ನೂ ಓದಿ: ಬಿಗ್‌ಬಾಸ್ ಮನೆಯಲ್ಲಿ ಮತ್ತೆ ಹೊತ್ತಿದ ದ್ವೇಷದ ಬೆಂಕಿ – ಜಗಳ, ಸೇಡು ನೋಡಿ ನೋಡಿ ವೀಕ್ಷಕರಿಗೂ ಕಿರಿಕಿರಿ
ಬಿಗ್‌ಬಾಸ್ ಮನೆಯಲ್ಲಿ ರಾಕ್ಷಸರು ಮತ್ತು ಗಂಧರ್ವರ ಗುಂಪುಗಳ ನಡುವೆ ಭಾರೀ ಕದನವೇ ನಡೆಯುತ್ತಿದೆ. ಇದು ಬಿಗ್‌ಬಾಸ್ ಮನೆಯಲ್ಲಿ ನಡೆಯುತ್ತಿರುವುದು ಆಟವೇ, ವೈಯಕ್ತಿಕ ಸೇಡೇ ಎಂಬ ಅನುಮಾನ ಶುರುವಾಗಿದೆ. ಅದರಲ್ಲೂ ಸಂಗೀತಾ ಮತ್ತು ವಿನಯ್ ಮಧ್ಯೆ, ಕಾರ್ತಿಕ್ ಮತ್ತು ವಿನಯ್ ಮಧ್ಯೆ, ಸಂಗೀತಾ ಮತ್ತು ನಮ್ರತಾ ಮಧ್ಯ ಹೀಗೆ ವೈಯಕ್ತಿಕವಾಗಿ ಆಟಗಳನ್ನು ಆಡುತ್ತಿದ್ದಾರೆ. ಒಬ್ಬರಿಗೊಬ್ಬರನ್ನು ಕೆಣಕುತ್ತಿದ್ದಾರೆ. ಇದು ಮುಂದೊಂದು ದಿನಕ್ಕೆ ಅನಾಹುತ ಉಂಟು ಮಾಡಲಿದೆ ಎಂದು ಅಂದಾಜಿಸಲಾಗಿತ್ತು. ಈಗ ಅದೇ ಆಗಿದೆ.
ಬಿಗ್‌ಬಾಸ್ ಮನೆಯಿಂದ ಡ್ರೋನ್ ಪ್ರತಾಪ್ ಮತ್ತು ಸಂಗೀತಾ ಶೃಂಗೇರಿ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ಟಾಸ್ಕ್ ವೊಂದರಲ್ಲಿ ಅವರ ಮುಖಕ್ಕೆ ಕೆಮಿಕಲ್ ನೀರು ಹಾಕಿದ ಕಾರಣದಿಂದಾಗಿ ಅವರು ಅಸ್ವಸ್ಥಗೊಂಡಿದ್ದರು ಎಂದು ಹೇಳಲಾಗುತ್ತಿದೆ. ಕಣ್ಣಿಗೆ ಮತ್ತು ಮೂಗು, ಬಾಯಿಗೆ ನೀರು ಬಿದ್ದ ಪರಿಣಾಮದಿಂದ ಡ್ರೋನ್ ಮತ್ತು ಸಂಗೀತಾ ಒದ್ದಾಡಿದ್ದಾರೆ ಎನ್ನುವ ಮಾಹಿತಿ ಇದೆ. ಅವರೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಎರಡು ದಿನಗಳಿಂದ ಗಂಧರ್ವರು ಮತ್ತು ರಾಕ್ಷಸರು ಎಂದು ಎರಡು ಗುಂಪುಗಳಾನ್ನಾಗಿ ಮಾಡಿ, ಹಲವು ಟಾಸ್ಕ್ ಗಳನ್ನು ನೀಡಲಾಗಿದೆ. ಈ ಟಾಸ್ಕ್ ನಲ್ಲಿ ಡ್ರೋನ್ ಮತ್ತು ಸಂಗೀತಾ ಗಾಯ ಮಾಡಿಕೊಂಡಿದ್ದಾರೆ. ಈ ವಿಷಯದ ಕುರಿತಂತೆ ವಾಹಿನಿಯಾಗಲಿ ಅಥವಾ ಸಂಬಂಧಿಸಿದವರಾಗಲಿ ಯಾವುದೇ ಮಾಹಿತಿ ನೀಡಿಲ್ಲ.
ಕೆಮಿಕಲ್ ನೀರಿನ ಪರಿಣಾಮದಿಂದಾಗಿ ಸದ್ಯಕ್ಕೆ ಡ್ರೋನ್ ಮತ್ತು ಸಂಗೀತಾರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಂಗೀತಾ ಅವರ ಮೂಗು, ಬಾಯಿಗೆ ನೀರು ಬಿದ್ದಿದೆ ಎನ್ನಲಾಗುತ್ತಿದೆ. ಈ ಹಿಂದೆ ತನಿಷಾರನ್ನು ಹೀಗೆಯೇ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಆನಂತರ ಬಿಗ್ ಬಾಸ್ ಮನೆಗೆ ಕರೆತರಲಾಗಿತ್ತು. ಇದಕ್ಕೂ ಮೊದಲು ತುಕಾಲಿ ಸಂತೋಷ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದಿದ್ರು. ಈ ಇಬ್ಬರನ್ನೂ ಹಾಗೆಯೇ ಮಾಡುವ ಸಾಧ್ಯತೆ ಇದೆ.
ಕಳೆದ ಕೆಲವು ದಿನಗಳಿಂದ ಬಿಗ್‌ಬಾಸ್ ಮನೆಯಲ್ಲಿ ಟಾಸ್ಕ್ ಭರಾಟೆ ಬಲು ಜೋರಾಗಿಯೇ ನಡೆಯುತ್ತಿದೆ. ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಜಗಳ, ಕಿತ್ತಾಟ, ಮಾರಾಮಾರಿಗಳು ನಡೆದಿವೆ. ಈ ಮೂಲಕವೇ ಬಿಗ್‌ಬಾಸ್ ಟಿಆರ್‌ಪಿ ರೇಟ್ ಹೆಚ್ಚಿಸಿಕೊಳ್ಳಲು ಮುಂದಾಗಿದೆ. ಆದರೆ, ಬಿಗ್‌ಬಾಸ್ ಶೋನಲ್ಲಿ ಬರುವ ಕಿತ್ತಾಟ, ಸೇಡು, ಜಗಳವನ್ನು ಫ್ಯಾಮಿಲಿ ಸಮೇತ ನೋಡಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ಕೆಲ ವೀಕ್ಷಕರು ಕೂಡಾ ಹೇಳುತ್ತಿದ್ದಾರೆ. ಟಾಸ್ಕ್ ಹೆಸರಲ್ಲಿ ಸೇಡು ತೀರಿಸಿಕೊಳ್ಳುವ ಈ ಕಾರ್ಯಕ್ರಮದಿಂದ ಯಾರಿಗೆ ಏನು ಸಂದೇಶ ಸಿಗುತ್ತಿದೆ ಎಂಬ ಪ್ರಶ್ನೆಯೂ ಎದುರಾಗಿದೆ.