ಆರ್‌ಆರ್ ತಂಡದ ನಾಯಕ ಸಂಜು ಸ್ಯಾಮ್ಸನ್‌ಗೆ ದಂಡ ಹಾಕಿದ BCCI – 24 ಲಕ್ಷ ರೂಪಾಯಿ ಫೈನ್

ಆರ್‌ಆರ್ ತಂಡದ ನಾಯಕ ಸಂಜು ಸ್ಯಾಮ್ಸನ್‌ಗೆ ದಂಡ ಹಾಕಿದ BCCI – 24 ಲಕ್ಷ ರೂಪಾಯಿ ಫೈನ್ ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ 2025ನೇ ಆವೃತ್ತಿಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 58 ರನ್‌ಗಳ ಹೀನಾಯ ಸೋಲು ಕಂಡಿದೆ. ಈ ಬೆನ್ನಲ್ಲೇ ಆರ್‌ಆರ್ ತಂಡದ ನಾಯಕ ಸಂಜು ಸ್ಯಾಮ್ಸನ್‌ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದಂಡ ವಿಧಿಸಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಸಂಜು ಸ್ಯಾಮ್ಸನ್ ಅವರಿಗೆ 24 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಸ್ಯಾಮ್ಸನ್‌ಗೆ ದಂಡ ವಿಧಿಸಲಾಗಿದ್ದು, ರಾಜಸ್ಥಾನ್ ರಾಯಲ್ಸ್ ತಂಡ ಈ ಹಿಂದೆಯೂ ನೀತಿ ಸಂಹಿತೆಯನ್ನು ಉಲ್ಲಂಘಿಸಿತ್ತು.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ನಂತರ, ತಂಡದ ತಾತ್ಕಾಲಿಕ ನಾಯಕರಾಗಿದ್ದ ರಿಯಾನ್ ಪರಾಗ್ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಯಿತು. ‘ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಪ್ಲೇಯಿಂಗ್11 ನ ಉಳಿದ ಸದಸ್ಯರಿಗೆ ಆರು ಲಕ್ಷ ರೂ. ಅಥವಾ ಅವರ ಪಂದ್ಯ ಶುಲ್ಕದ ಶೇ 25ರಷ್ಟು ದಂಡ ವಿಧಿಸಲಾಗುವುದು. ಯಾವುದು ಕಡಿಮೆಯೋ ಅದು’ ಎಂದು ಐಪಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.