ಭಾರತದ ಪರ ಸಂಜು ಸ್ಯಾಮ್ಸನ್ ಹೊಸ ದಾಖಲೆ- ಈ ಸಾಧನೆ ಮಾಡಿದ ಟೀಮ್ ಇಂಡಿಯಾದ ಮೊದಲ ವಿಕೆಟ್ ಕೀಪರ್ ಇವರೇ

ನಿರ್ಣಾಯಕ ಪಂದ್ಯದಲ್ಲಿ ಆಡುವವನೇ ತಂಡದ ನಿಜವಾದ ಆಪತ್ಭಾಂಧವ. ಈ ರೀತಿ ಟೀಮ್ ಇಂಡಿಯಾಕ್ಕೆ ಆಪತ್ಭಾಂಧವರಾಗಿದ್ದು ಸಂಜು ಸ್ಯಾಮ್ಸನ್. ಟೀಂ ಇಂಡಿಯಾಗೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಸ್ಯಾಮ್ಸನ್ ಅವರು ಸ್ಫೋಟಕ ಬ್ಯಾಟಿಂಗ್ ಆಡಿದ್ದಾರೆ. ಜೊತೆಗೆ ಸಂಜು ಸ್ಯಾಮ್ಸನ್ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.
ಇದನ್ನೂ ಓದಿ:ಸಂಜು ಸೂಪರ್ ಡೂಪರ್ ಬ್ಯಾಟಿಂಗ್, ದಾಖಲೆಯ ಚೇಸಿಂಗ್ – ಟೀಮ್ ಇಂಡಿಯಾ ಸೆಮಿಫೈನಲ್ಗೆ ಎಂಟ್ರಿ
ವಿಂಡೀಸ್ ಮತ್ತು ಇಂಡಿಯಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಜೊತೆಗೆ ಸೆಮಿಫೈನಲ್ಗೂ ಎಂಟ್ರಿಕೊಟ್ಟಿದೆ. ವಿಂಡೀಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಅಮೋಘ 97 ರನ್ ಗೆಲುವಿಗೆ ಪ್ರಮುಖ ಕಾರಣ. ಇದರ ಜೊತೆಗೆ ಸಂಜು ಸ್ಯಾಮ್ಸನ್ ಅಂತಾರಾಷ್ಟ್ರೀಯ ಟಿ20ಯಲ್ಲಿ ಅರ್ಧಶತಕ ಬಾರಿಸಿದ ಭಾರತೀಯ ವಿಕೆಟ್ ಕೀಪರ್-ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಮೂರು ರನ್ಗಳಿಂದ ತಮ್ಮ ನಾಲ್ಕನೇ ಶತಕವನ್ನು ಮಿಸ್ ಮಾಡಿಕೊಂಡಿದ್ದರೂ ಕೂಡಾ ಹೊಸ ಸಾಧನೆ ಮಾಡಿದ್ದಾರೆ.
ಈ ಪಂದ್ಯದಲ್ಲಿ ಆರನೇ ಅರ್ಧಶತಕ ಬಾರಿಸಿದ ಸಂಜು ಸ್ಯಾಮ್ಸನ್, 20 ಓವರ್ಗಳ ಮಾದರಿಯ ಪಂದ್ಯಗಳಲ್ಲಿ ಭಾರತಕ್ಕಾಗಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ವಿಕೆಟ್ ಕೀಪರ್-ಬ್ಯಾಟರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಭಾರತ ಪರ ಇಶಾನ್ ಕಿಶನ್ ಐದು ಬಾರಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ 50 ರನ್ ಗಳಿಸಿದ್ದಾರೆ. ಆದರೆ ಕೆಎಲ್ ರಾಹುಲ್ ಟಿ20ಐ ಪಂದ್ಯಗಳಲ್ಲಿ ಭಾರತ ಪರ ಮೂರು ಅರ್ಧಶತಕಗಳನ್ನು ಬಾರಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಸ್ಯಾಮ್ಸನ್ ಗಳಿಸಿದ ಅರ್ಧಶತಕವು, ಇಶಾನ್ ಕಿಶನ್ ನಂತರ ಐಸಿಸಿ ಪುರುಷರ ಟಿ20 ವಿಶ್ವಕಪ್ನಲ್ಲಿ ಅರ್ಧಶತಕ ಬಾರಿಸಿದ ಎರಡನೇ ಭಾರತೀಯ ವಿಕೆಟ್ ಕೀಪರ್-ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತ ಪರ ಐಸಿಸಿ ಪುರುಷರ ಟಿ20 ವಿಶ್ವಕಪ್ನಲ್ಲಿ ವಿಕೆಟ್ ಕೀಪರ್-ಬ್ಯಾಟರ್ ಆಗಿ ಇಶಾನ್ ಎರಡು ಅರ್ಧಶತಕಗಳನ್ನು ಗಳಿಸಿದ್ದಾರೆ.

ನೋಡಿರಿ

