‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ – ಸೆಪ್ಟೆಂಬರ್ 1ಕ್ಕೆ ಸಿನಿಮಾ ಬಿಡುಗಡೆ

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ – ಸೆಪ್ಟೆಂಬರ್ 1ಕ್ಕೆ ಸಿನಿಮಾ ಬಿಡುಗಡೆ

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷೆಯ ಸಿನಿಮಾ ‘ಸಪ್ತ ಸಾಗರದಾಚೆ ಎಲ್ಲೋ’ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಸಪ್ತ ಸಾಗರದಾಚೆ ಎಲ್ಲೋ ಚಿತ್ರ ಎರಡು ಭಾಗದಲ್ಲಿ ಬರುತ್ತಿದೆ. ಮೊದಲ ಭಾಗ ಸೆಪ್ಟೆಂಬರ್ 1ಕ್ಕೆ ರಿಲೀಸ್ ಆದರೆ, ಎರಡನೇ ಭಾಗ ಅಕ್ಟೋಬರ್ 20ಕ್ಕೆ ತೆರೆಗೆ ಬರಲಿದೆ.

ಇದನ್ನೂ ಓದಿ: ರಕ್ಷಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ಗಿಫ್ಟ್ – ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್

ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಆ ಬಳಿಕ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡರು. ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಸಾಕಷ್ಟು ಸಮಯ ತೆಗೆದುಕೊಂಡಿದ್ದರು. ಈ ಸಿನಿಮಾ ಎರಡು ಭಾಗಗಳಲ್ಲಿ ತೆರೆ ಕಾಣುತಿದ್ದು, ಮೊದಲ ಭಾಗ ಸೆಪ್ಟೆಂಬರ್ 1ಕ್ಕೆ ರಿಲೀಸ್ ಆದರೆ, ಎರಡನೇ ಭಾಗ ಅಕ್ಟೋಬರ್ 20ಕ್ಕೆ ತೆರೆಗೆ ಬರಲಿದೆ. ಈ ಬಗ್ಗೆ ರಕ್ಷಿತ್ ಶೆಟ್ಟಿ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾ ಕಥೆಯನ್ನು 20 ವರ್ಷದ ಹಿಂದೆಯೇ ಬರೆದಿದ್ದೆ. ಇದು ನನ್ನ ಹೃದಯಕ್ಕೆ ಹತ್ತಿರವಾದ ಕಥೆ. ಸಮಯಕ್ಕೆ ತಕ್ಕಂತೆ ಈ ಕಥೆಯಲ್ಲಿ ವಿಕಸನ ಆಗಿದೆ. ಈ ಕಥೆಯನ್ನು ಜಗತ್ತಿನೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಸೈಡ್ ಎ ಸೆಪ್ಟೆಂಬರ್ 1, ಸೈಡ್ ಬಿ ಅಕ್ಟೋಬರ್ 20ರಂದು ರಿಲೀಸ್ ಆಗಲಿದೆ. ಶೀಘ್ರದಲ್ಲೇ ಸಿಗೋಣ’ ಎಂದು ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ. ಈ ಸಿನಿಮಾದ ಮೂಲಕ ಒಂದು ಗಂಭೀರವಾದ ಪ್ರೇಮಕತೆಯನ್ನು ನಿರ್ದೇಶಕ ಹೇಮಂತ್ ರಾವ್ ಹೇಳಲಿದ್ದಾರೆ. ರಕ್ಷಿತ್ ಶೆಟ್ಟಿಗೆ ಜೊತೆಯಾಗಿ ರುಕ್ಮಿಣಿ ವಸಂತ್ ನಟಿಸಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ಇದೆ.

suddiyaana