ಬಾಲಿವುಡ್ ಅಂಗಳಕ್ಕೆ ಹಾರಿದ ಕಾಂತಾರ ಸಿನಿಮಾದ ‘ಸಿಂಗಾರ ಸಿರಿ’ – ವಿವೇಕ್ ಅಗ್ನಿಹೋತ್ರಿ ಸಿನಿಮಾದಲ್ಲಿ ಸಪ್ತಮಿ ಗೌಡ
‘ದಿ ವ್ಯಾಕ್ಸಿನ್ ವಾರ್’ ಚಿತ್ರದಲ್ಲಿ ಕನ್ನಡದ ನಟಿ ಸಪ್ತಮಿ ಗೌಡ ನಟನೆ

ಕಾಂತಾರ ಸಿನಿಮಾದ ಯಶಸ್ಸಿನಿಂದ ಬೀಗುತ್ತಿರುವ ಸಿಂಗಾರ ಸಿರಿ ಸಪ್ತಮಿ ಗೌಡ ಈಗ ಬಾಲಿವುಡ್ ಅಂಗಳಕ್ಕೂ ಕಾಲಿಡುತ್ತಿದ್ದಾರೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ವ್ಯಾಕ್ಸಿನ್ ವಾರ್’ ಚಿತ್ರದಲ್ಲಿ ಕನ್ನಡದ ನಟಿ ಸಪ್ತಮಿ ಗೌಡ ನಟಿಸಲಿದ್ದಾರೆ. ಕಾಂತಾರ ಚಿತ್ರದ ನಂತರ ಸಪ್ತಮಿ ಗೌಡ ಮುಂದೆ ಯಾವ ಚಿತ್ರ ಒಪ್ಪಿಕೊಳ್ತಾರೆ ಅನ್ನೋ ವಿಚಾರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲವಿತ್ತು. ಹೀಗಿರುವಾಗಲೇ ಸ್ಯಾಂಡಲ್‌ವುಡ್ ಬೆಡಗಿ ಬಾಲಿವುಡ್ ಅಂಗಳಕ್ಕೆ ಕಾಲಿಡುತ್ತಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶನ ಮಾಡಿದ್ದ ವಿವೇಕ್ ಅಗ್ನಿಹೋತ್ರಿ ಅವರ ಹೊಸ ಚಿತ್ರದಲ್ಲಿ ಸಪ್ತಮಿ ಗೌಡ ನಟಿಸಲಿದ್ದಾರೆ. ಈ ಚಿತ್ರಕ್ಕೆ ‘ದಿ ವ್ಯಾಕ್ಸಿನ್ ವಾರ್’ ಎಂದು ಹೆಸರು ಇಡಲಾಗಿದೆ.
ಇದನ್ನೂ ಓದಿ: ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪಡೆದ ‘ಆರ್‌ಆರ್‌ಆರ್’ – ಪ್ರತಿಷ್ಠಿತ ಪ್ರಶಸ್ತಿ ಪಡೆದ ತಂಡಕ್ಕೆ ಮೋದಿ ಅಭಿನಂದನೆ
‘ದಿ ವ್ಯಾಕ್ಸಿನ್ ವಾರ್’ ಚಿತ್ರದ ಶೂಟಿಂಗ್ ಈಗಾಗಲೇ ಆರಂಭವಾಗಿದೆ. ಹೈದರಾಬಾದ್ನಲ್ಲಿ ನಡೆಯಲಿರುವ ಚಿತ್ರೀಕರಣದಲ್ಲಿ ಸಪ್ತಮಿ ಗೌಡ ಸೇರಿಕೊಳ್ಳಲಿದ್ದಾರೆ. ಕಾಂತಾರ ಚಿತ್ರದ ನಂತರ ಸಪ್ತಮಿಗೌಡ, ಅಭಿಷೇಕ್ ಅಂಬರೀಷ್ ನಾಯಕನಾಗಿ ನಟಿಸಲಿರುವ ‘ಕಾಳಿ’ ಸಿನಿಮಾ ಒಪ್ಪಿಕೊಂಡಿದ್ದರು. ಇದಾದ ನಂತರ ನೇರವಾಗಿ ಬಾಲಿವುಡ್ ಗೆ ಹಾರಿದ್ದಾರೆ. ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದ ಮೇಲೆ ಸಿನಿಪ್ರಿಯರಿಗೆ ಸಾಕಷ್ಟು ನಿರೀಕ್ಷೆ ಇದೆ. ಕೊವಿಡ್ ಸಂದರ್ಭದಲ್ಲಿನ ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರ ತಯಾರಾಗುತ್ತಿದೆ. ಇದರಲ್ಲಿ ಸಪ್ತಮಿ ಗೌಡ ಪಾತ್ರ ಹೇಗಿರಲಿದೆ ಎಂಬ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.