ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
ಆರೋಗ್ಯ ಸ್ಥಿತಿ ಇಂದು ಗಂಭೀರ

ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುಆರೋಗ್ಯ ಸ್ಥಿತಿ ಇಂದು ಗಂಭೀರ

ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕಳೆದ 4 ದಿನಗಳಿಂದ ಅವರು ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ನಟ ಸರಿಗಮ ವಿಜಯ್ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟನ ಆರೋಗ್ಯ ಸ್ಥಿತಿ ಇಂದು ಗಂಭೀರವಾಗಿದೆ ಎಂದು ಸರಿಗಮ ವಿಜಯ್ ಪುತ್ರ ರೋಹಿತ್ ಮಾಹಿತಿ ಹಂಚಿಕೊಂಡಿದ್ದಾರೆ.

ಅಂದಹಾಗೆ, 1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರಕ್ಕೆ ಸಣ್ಣ ಪಾತ್ರದಲ್ಲಿ ನಟಿಸುವುದರ ಮೂಲಕ ನಟನಾಗಿ ಗುರುತಿಸಿಕೊಂಡರು. ಆ ನಂತರ ಚಿತ್ರರಂಗದಲ್ಲಿ ತೊಡಗಿಕೊಂಡವರು. ಅದರ ಫಲವೇ 269 ಚಿತ್ರಗಳಲ್ಲಿ ನಟನೆ, 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. 2,400 ಧಾರಾವಾಹಿಗಳ ನಿರ್ದೇಶನದ ಜೊತೆಗೆ ನಟನೆ ಮಾಡಿದ್ದಾರೆ. ವಿಶೇಷ ಅಂದರೆ, ಇವರ ನಟನೆಯ ಚಿತ್ರಗಳ ಪಟ್ಟಿಯಲ್ಲಿ ಟೈಗರ್ ಪ್ರಭಾಕರ್ ಚಿತ್ರಗಳೇ ಹೆಚ್ಚಾಗಿದೆ. ಇನ್ನೂ ಅವರು ಸರಿಗಮ ವಿಜಿ ಎಂದೇ ಫೇಮಸ್ ಆಗಿದ್ದಾರೆ.

 

Kishor KV

Leave a Reply

Your email address will not be published. Required fields are marked *