ಕನ್ನಡ ಸೇರಿ ಪ್ರದೇಶಿಕ ಬಾಷೆಯಲ್ಲೇ ವ್ಯವಹಾರ- ಅಮಿತ್ ಶಾ ಘೋಷಣೆ

ಕನ್ನಡ ಸೇರಿ ಪ್ರದೇಶಿಕ ಬಾಷೆಯಲ್ಲೇ ವ್ಯವಹಾರ-  ಅಮಿತ್ ಶಾ ಘೋಷಣೆ

ಹಿಂದಿ ಹೇರಿಕೆ  ಮಾಡಲಾಗುತ್ತಿದೆ ಎಂದು ಆರೋಪಿಸುವವರಿಗೆ ಕೇಂದ್ರ ಗೃಹ ಸಚಿವ ಅಮಿತ್   ಶುಕ್ರವಾರ ರಾಜ್ಯಸಭೆಯಲ್ಲಿ ತೀಕ್ಷ್ಣ ತಿರುಗೇಟು ನೀಡಿದ್ದಾರೆ. ಭಾಷೆಯ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಕೆಲಸ ಮಾಡಬಾರದು ಎಂದ ಅವರು, ಪ್ರಾದೇಶಿಕ ಭಾಷೆಗಳ  ಉತ್ತೇಜನಕ್ಕಾಗಿ ಡಿಸೆಂಬರ್​​ನಿಂದ ರಾಜ್ಯಗಳ ಜತೆ ಅಲ್ಲಿನ ಪ್ರಾದೇಶಿಕ ಭಾಷೆಯಲ್ಲೇ ಪತ್ರ ವ್ಯವಹಾರ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಅದರಂತೆ, ಕರ್ನಾಟಕ ಸರ್ಕಾರದ   ತೆ ಕನ್ನಡದಲ್ಲಿ, ತಮಿಳುನಾಡು ಸರ್ಕಾರದ ಜತೆ ತಮಿಳು ಹಾಗೂ ಇತರ ರಾಜ್ಯಗಳ ಜತೆ ಅಲ್ಲಿನ ಭಾಷೆಯಲ್ಲೇ ಅಮಿತ್ ಶಾ ಪತ್ರ ವ್ಯವಹಾರ ನಡೆಯಲಿದೆ.

ಡಿಸೆಂಬರ್ ನಂತರ ನಾಗರಿಕರು, ಮುಖ್ಯಮಂತ್ರಿಗಳು, ಸಚಿವರು ಮತ್ತು ಸಂಸತ್ ಸದಸ್ಯರೊಂದಿಗೆ ಅವರದೇ ಭಾಷೆಯಲ್ಲಿ ಪತ್ರವ್ಯವಹಾರ ಮಾಡುತ್ತೇನೆ. ತಮ್ಮ ಭ್ರಷ್ಟಾಚಾರವನ್ನು ಮರೆಮಾಚಲು ಭಾಷೆಯ ಹೆಸರಿನಲ್ಲಿ ರಾಜಕೀಯ ನಡೆಸುವವರಿಗೆ ಇದು ಬಲವಾದ ಪ್ರತ್ಯುತ್ತರವಾಗಿದೆ ಎಂದು ಅಮಿತ್ ಶಾ ಹೇಳಿದರು. ಬಿಜೆಪಿ ದಕ್ಷಿಣ ಭಾರತದ ಭಾಷೆಗಳನ್ನು ವಿರೋಧಿಸುತ್ತದೆ ಎಂಬ ಆರೋಪಗಳನ್ನು ತಿರಸ್ಕರಿಸಿದ ಅಮಿತ್ ಶಾ, ‘ಅವರು ಏನು ಹೇಳುತ್ತಿದ್ದಾರೆ? ನಾವು ದಕ್ಷಿಣದ ಭಾಷೆಗಳನ್ನು ವಿರೋಧಿಸುತ್ತೇವೆಯೇ? ಇದು ಹೇಗೆ ಸಾಧ್ಯ? ನಾನು ಗುಜರಾತ್‌ನಿಂದ ಬಂದವನು. ನಿರ್ಮಲಾ ಸೀತಾರಾಮನ್ ತಮಿಳುನಾಡಿನವರು. ಹೀಗಿದ್ದಾಗ ನಾವು ಪ್ರಾದೇಶಿಕ ಭಾಷೆಗಳನ್ನು ಹೇಗೆ ವಿರೋಧಿಸಬಹುದು’ ಎಂದು ಪ್ರಶ್ನಿಸಿದರು.

Kishor KV

Leave a Reply

Your email address will not be published. Required fields are marked *