ಖಾಸಗಿ ಮತ್ತು ಸರ್ಕಾರಿ ಶಾಲೆಯಲ್ಲೇ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್‌ ನೀಡಿ : ಸುಪ್ರೀಂ ಕೋರ್ಟ್

ಖಾಸಗಿ ಮತ್ತು ಸರ್ಕಾರಿ ಶಾಲೆಯಲ್ಲೇ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್‌ ನೀಡಿ : ಸುಪ್ರೀಂ ಕೋರ್ಟ್

ಖಾಸಗಿ ಮತ್ತು ಸರ್ಕಾರಿ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಜೈವಿಕ ವಿಘಟನೀಯ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್  ನಿರ್ದೇಶನ ನೀಡಿದೆ. ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದಲ್ಲಿ ಹೇಳಲಾಗಿರುವ ಬದುಕುವ ಮೂಲಭೂತ ಹಕ್ಕಿನ ಭಾಗವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಆರ್ ಮಹದೇವನ್ ಅವರನ್ನೊಳಗೊಂಡ ನ್ಯಾಯ ಪೀಠ, ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.ಅಲ್ಲದೇ, ಸರ್ಕಾರಿ ಅಥವಾ ಖಾಸಗಿ ಶಾಲೆಗಳಲ್ಲಿ ವಿಶೇಷಚೇತನರ ಸ್ನೇಹಿ ಶೌಚಾಲಯ ಒದಗಿಸಬೇಕು ಎಂದು ಹೇಳಿದೆ.

ಇದನ್ನೂ ಓದಿ: ಬಾಲಕನಿಗೆ ಮನಬಂದಂತೆ ಥಳಿಸಿದ ಶಿಕ್ಷಕಿ! – ಮನೆಯಲ್ಲಿ ಹೇಳಿದ್ರೆ ಕುತ್ತಿಗೆ ಹಿಸುಕುತ್ತೇನೆ ಎಂದು ಧಮ್ಕಿ!

“ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದ 21 ನೇ ವಿಧಿಯಡಿ ನೀಡಲಾಗಿರುವ ಬದುಕುವ ಹಕ್ಕಿನ ಭಾಗವಾಗಿದೆ. ಖಾಸಗಿ ಶಾಲೆಗಳು ಈ ಸೌಲಭ್ಯ ಒದಗಿಸಲು ವಿಫಲವಾದರೆ, ಮಾನ್ಯತೆ ರದ್ದುಗೊಳಿಸಲಾಗುವುದು. ಹೆಣ್ಣು ಮಕ್ಕಳಿಗೆ ಶೌಚಾಲಯ ಮತ್ತು ಉಚಿತ ಸ್ಯಾನಿಟರಿ ಪ್ಯಾಡ್‌ ಒದಗಿಸಲು ಸರ್ಕಾರಗಳು ವಿಫಲವಾದರೆ ಅದನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ನ್ಯಾಯ ಪೀಠ ಹೇಳಿದೆ.

ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 6 ರಿಂದ 12 ನೇ ತರಗತಿಯ ಹದಿಹರೆಯದ ಬಾಲಕಿಯರಿಗೆ ಕೇಂದ್ರ ಸರ್ಕಾರ ಮುಟ್ಟಿನ ನೈರ್ಮಲ್ಯ ನೀತಿ ಜಾರಿಗೆ ತರಬೇಕು ಎಂದು ಕೋರಿ ಜಯಾ ಠಾಕೂರ್ ಅವರು ಡಿಸೆಂಬರ್ 10, 2024 ರಂದು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ

Kishor KV