ಖಾಲಿ ಇರುವ ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹ – ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಹೋರಾಟ

ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಬಿಜೆಪಿ ನೇತೃತ್ವದಲ್ಲಿ ಧಾರವಾಡ ಶ್ರೀನಗರದಿಂದ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ. ರ್ಯಾಲಿಯು ಶ್ರೀನಗರದಿಂದ ಜಯನಗರ, ಮಿಚಗನ್ ಕಾಂಪೌಂಡ್ ಮಾರ್ಗವಾಗಿ ಜುಬಿಲಿ ವೃತ್ತವನ್ನು ತಲುಪಲಿದೆ. ಜಯನಗರದಲ್ಲಿ ವಿಧಾನಸಭೆ ವಿಪಕ್ಷದ ನಾಯಕ ಆರ್. ಅಶೋಕ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆ ವೇಳೆ ಸಚಿವರ ಫೋಟೋಗಳು ಸಹ ವಿದ್ಯಾರ್ಥಿಗಳು ಸುಟ್ಟು ಹಾಕಿ ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿಯೊಂದಿಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘವು ಪ್ರತಿಭಟನೆಗಿಳಿದಿದ್ದು, ಅನುಮತಿ ಇಲ್ಲದಿದ್ದರೂ ವಿದ್ಯಾರ್ಥಿ ಸಮೂಹ ಜಮಾಯಿಸಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನೆ ವೇಳೆ ವಿದ್ಯಾರ್ಥಿ ಸಮೂಹದ ಚೀರಾಟ, ಕೂಗಾಟ ನಿಯಂತ್ರಣಕ್ಕೆ ಬರುತ್ತಿಲ್ಲ. ಈ ವೇಳೆ ವಿದ್ಯಾರ್ಥಿಗಳಿಗೆ ಸಮಾಧಾನವಾಗಿ ಇರುವಂತೆ ಆರ್. ಅಶೋಕ ಅವರು ವಿನಂತಿಸಿದರೂ ವಿದ್ಯಾರ್ಥಿಗಳು ಮಾತ್ರ ಸುಮ್ಮನಾಗುತ್ತಿಲ್ಲ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ: ವೈಭವ್ ಸೂರ್ಯವಂಶಿಗೆ ಬಂಪರ್ ಬಹುಮಾನ –50 ಲಕ್ಷ ರೂಪಾಯಿ ಚೆಕ್, ಟಾಟಾ ಕರ್ವ್ SUV ಕಾರು
ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ರೂ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಬಿಜೆಪಿ ನಾಯಕರು ಸಾಥ್ ನೀಡಿದ್ರು.. ಇದುವರೆಗೆ ಸೈಲೆಂಟ್ ಆಗಿದ್ದ ಕಮಲ ನಾಯಕರು ಅಭ್ಯರ್ಥಿಗಳ ಅರಣ್ಯರೋಧನಕ್ಕೆ ದನಿಗೂಡಿಸಿದ್ರು.. ಸರ್ಕಾರದ ವಿವಿಧ ಇಲಾಖೆಗಳಲ್ಲಿ 2.80 ಲಕ್ಷ ಹುದ್ದೆಗಳು ಖಾಲಿ ಇದ್ದು ಭರ್ತಿ ಮಾಡದೇ ದಿನ ದೂಡುತ್ತಿರುವ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ರು..
ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಸಾಗ್ತಾ ಇದ್ದಂತೆ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕ ಅರವಿಂದ್ ಬೆಲ್ಲದ್ ಸಾಥ್ ನೀಡಿದ್ರು.. ಸಿಎಂ, ಡಿಸಿಎಂ ಸೇರಿ ಕಾಂಗ್ರೆಸ್ ನಾಯಕರ ಭಾವಚಿತ್ರಕ್ಕೆ ಚಪ್ಪಲಿಹಾರ ಹಾಕಿ, ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ರು.. ಇದೇ ವೇಳೆ ಉದ್ರಿಕ್ತರಿಂದ ಕಲ್ಲು ತೂರಾಟ ನಡೆದಿದ್ದು ವಿದ್ಯಾಗಿರಿ ಠಾಣೆ ಇನ್ಸಪೆಕ್ಟರ್ ರಫೀಕ್ ಹಾಗೂ ತಹಸೀಲ್ದಾರ್ ಗಾಯಗೊಂಡ್ರು.. ಹುಬ್ಬಳ್ಳೀ-ಧಾರವಾಡ ಪೊಲೀಸ್ ಕಮಿಷನರ್ ಶಶಿಕುಮಾರ್ ನೇತೃತ್ವದಲ್ಲಿ ಪ್ರತಿಭಟನಾನಿರತ ಅಭ್ಯರ್ಥಿಗಳ ಸಾಗರವನ್ನು ತಡೆಯಲು ಪೊಲೀಸರು ಸಾಕ್ ಸಾಕಾಗಿ ಹೋದ್ರು.

ನೋಡಿರಿ

