ಕಾಂಗ್ರೆಸ್ ಹಿರಿಯ ಶಾಸಕ ಹೆಚ್. ವೈ. ಮೇಟಿ ಇನ್ನಿಲ್ಲ – ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮಂತ್ರಿ ವಿಧಿವಶ

ಕಾಂಗ್ರೆಸ್ ಹಿರಿಯ ಶಾಸಕ ಹೆಚ್. ವೈ. ಮೇಟಿ ಇನ್ನಿಲ್ಲ – ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮಂತ್ರಿ ವಿಧಿವಶ

ಕಾಂಗ್ರೆಸ್​ ಹಿರಿಯ ಶಾಸಕ ಹೆಚ್​. ವೈ. ಮೇಟಿ ವಿಧಿವಶರಾಗಿದ್ದಾರೆ.  ಬೆಂಗಳೂರಿನ  ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಎಚ್ .ವೈ ಮೇಟಿ  ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಶಾಸಕ ಹೆಚ್. ವೈ ಮೇಟಿಯವರಿಗೆ 79 ವರ್ಷ ವಯಸ್ಸಾಗಿತ್ತು.

ಇದನ್ನೂ ಓದಿ;ರಾಜವಂಶದ ಪ್ರಭಾವವು ರಾಜಕೀಯದ ಜನ್ಮಸಿದ್ಧ ಹಕ್ಕು ಎಂಬ ಕಲ್ಪನೆಯನ್ನುಗಟ್ಟಿಗೊಳಿಸಿದೆ – ಶಶಿ ತರೂರ್

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​. ವೈ. ಮೇಟಿ ನಿಧನರಾಗಿದ್ದಾರೆ. ಹೆಚ್, ವೈ ಮೇಟಿ ಬಾಗಲಕೋಟೆ ಕಾಂಗ್ರೆಸ್​ ಶಾಸಕರಾಗಿದ್ದರು. ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೇಟಿಯವರು ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ಹೆಚ್​.ವೈ. ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಇದೀಗ ಮೇಟಿಯವರ ಅಂತಿಮ ದರ್ಶನ ಪಡೆಯಲು ಮೈಸೂರಿನಿಂದ ನೇರವಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದರು.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ H​.Y. ಮೇಟಿ, ಜಿಲ್ಲೆಯ ತಿಮ್ಮಾಪುರದಲ್ಲಿ 1946 ಅಕ್ಟೋಬರ್ 9ರಂದು ಜನಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ H​.Y.ಮೇಟಿ, 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್​ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ  ಗೆದ್ದಿದ್ದರು. 2008ರಲ್ಲಿ ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರಿದ್ದ ಇವರು 2008ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ 2013ರಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಮೇಟಿ, ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಹೆಚ್​.ವೈ.ಮೇಟಿ, 2023ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್​ನಿಂದ ಸ್ಫರ್ಧಿಸಿ ಗೆಲುವಿನ ನಗೆ ಬೀರಿದ್ದರು.

ಹೆಚ್​.ವೈ. ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಹುಟ್ಟೂರಾದ ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ಬುಧವಾರ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್​ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ.

Sulekha