‘ಹನಿಟ್ರ್ಯಾಪ್ ಮಾಡಲೆಂದೇ ಸ್ಟುಡಿಯೋ.. ಸುತ್ತಮುತ್ತ ಬರೀ ಆಂಟಿಗಳೇ ಇರ್ತಾರೆ’ – ಶಾಸಕ ಮುನಿರತ್ನ ವಿರುದ್ಧ ಗಂಭೀರ ಆರೋಪ
ರಾಜಕೀಯದಲ್ಲಿ ಸೋಲು ಗೆಲುವಿಗಾಗಿ ನಾಯಕರು ಏನು ಬೇಕಾದರೂ ಮಾಡುತ್ತಾರೆ. ಇದೀಗ ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕುರಿತು ಗಂಭೀರ ಆರೋಪ ಕೇಳಿಬಂದಿದೆ. ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ಎಂಬುವವರೇ ಈ ಆರೋಪ ಮಾಡಿದ್ದಾರೆ.
ಆರ್.ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕುರಿತು ಆರೋಪ ಕೇಳಿಬಂದಿದೆ. ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ಎಂಬುವರು ಗಂಭೀರ ಆರೋಪ ಮಾಡಿದ್ದಾರೆ. ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಹನಿಟ್ರ್ಯಾಪ್ ಮಾಡಲೆಂದೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ ಎಂದು ಅವರ ಬೆಂಬಲಿಗ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಗಂಭೀರ ಆರೋಪ ಮಾಡಿದ್ದಾರೆ. ಶಾಸಕ ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ಬಿಜೆಪಿ ತೊರೆದು ಇದೀಗ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ವೇಳೆ ಮಾತನಾಡಿದ ವೇಲು ನಾಯ್ಕರ್, ಹನಿಟ್ರ್ಯಾಪ್ ಮಾಡಲು ಹೆದರಿಸಲು, ಜೆ.ಪಿ.ಪಾರ್ಕ್, ಡಾಲರ್ಸ್ ಕಾಲೋನಿಯಲ್ಲಿ ಇದಕ್ಕಾಗಿ ಸ್ಟುಡಿಯೋ ಇಟ್ಟಿದ್ದಾರೆ. ಅವರು ಸಿನಿಮಾ ನಿರ್ಮಾಪಕರಲ್ಲವೇ. ಹೀಗಾಗಿ ಹನಿಟ್ರ್ಯಾಪ್ ಮಾಡಿಸಿ ಹೆದರಿಸುತ್ತಾರೆ ಎಂದರು.
ಇದನ್ನೂ ಓದಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ 81ನೇ ಹುಟ್ಟುಹಬ್ಬ – ಕನ್ನಡಿಗನ ರಾಜಕೀಯ ಹಾದಿಯೇ ರೋಚಕ
ಮುನಿರತ್ನಗೆ ಚುನಾವಣೆ ಎದುರಿಸುವುದು ಹೇಗೆ ಎಂದು ಕೇಳಿದೆವು. ನಿಮ್ಮದು ಈಸ್ಟ್ಮನ್ ಕಲರ್ ಪಿಕ್ಚರ್ ಇದೆ ತೋರಿಸಲಾ? ಇಲ್ಲ ಕೆಲಸ ಮಾಡುತ್ತೀರಾ ಅಂತಾ ಮುನಿರತ್ನ ಹೆದರಿಸುತ್ತಿದ್ದರು. ಮುನಿರತ್ನ ನಿರ್ಮಾಪಕನಾಗಿ ಮಾಡಿದ ಮೊದಲ ಚಿತ್ರ ಆಂಟಿ ಪ್ರೀತ್ಸೆ. ಹೀಗಾಗಿ ಮುನಿರತ್ನ ಸಚಿವರಾದ ಮೇಲೂ ಬರೀ ಆಂಟಿಗಳೇ ಇರುತ್ತಿದ್ದರು. ವಿಕಾಸಸೌಧ, ವಿಧಾನಸೌಧ ಚೇಂಬರ್ನಲ್ಲೆಲ್ಲಾ ಬರೀ ಆಂಟಿಗಳೇ ಇರುತ್ತಿದ್ದರು ಎಂದು ಆರೋಪಿಸಿದರು. ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ ಸುರೇಶ್, ಆರ್.ಆರ್ ನಗರದ ಪಕ್ಷದ ಅಭ್ಯರ್ಥಿ ಕುಸುಮಾ ಹನುಮಂತ ರಾಯಪ್ಪ ಹಾಜರಿದ್ದರು.