ಕೇಜ್ರಿವಾಲ್‌ಗೆ ಕಾನೂನು ಹೋರಾಟದಲ್ಲಿ ಹಿನ್ನಡೆ – ಭಾನುವಾರ ಜೈಲಿಗೆ
ಲೋಕಸಭಾ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನು ಶನಿವಾರಕ್ಕೆ ಮುಗಿದಿದ್ದು, ಭಾನುವಾರ ಮತ್ತೆ ತಿಹಾರ ಜೈಲಿಗೆ ಮರಳುವುದು ಖಚಿತವಾಗಿದೆ.
ಇದನ್ನೂ ಓದಿ: ವಿಶ್ವಕಪ್ ಫಸ್ಟ್ ಪಂದ್ಯಕ್ಕಿಲ್ಲ ಕೊಹ್ಲಿ – ರೋHIT ಗೆ ಕಾಡ್ತಿರೋ ಟೆನ್ಷನ್ ಏನು?
ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಜೂನ್ 5 ರವರೆಗೆ ಕಾಯ್ದಿರಿಸಿದೆ.
ಪ್ರಸ್ತುತ ಕೇಜ್ರಿವಾಲ್ ಜೂನ್ 1 ರವರೆಗೆ ಮಧ್ಯಂತರ ಜಾಮೀನಿನ ಮೇಲೆ ಇದ್ದಾರೆ. ಭಾನುವಾರ ದೆಹಲಿ ಸಿಎಂ ಶರಣಾಗಬೇಕು. ಮತ್ತೊಂದೆಡೆ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾದ ಅಕೌಂಟ್ಗಳನ್ನು ಫ್ರೀಜ್ ಮಾಡುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಮುಖ್ಯ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಅವರು ಆರ್ಬಿಎಲ್ ಬ್ಯಾಂಕ್ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ.