ತಾಯಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ಅಪ್ರಾಪ್ತೆ ಮೇಲೆ ಲೈಂ*ಗಿಕ ದೌರ್ಜನ್ಯ – ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯಿಂದಲೇ ಹೀನ ಕೃತ್ಯ

ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿವೆ. ಈಗ ವಿಜಯನಗರ ಜಿಲ್ಲೆಯಲ್ಲಿ ಇಡೀ ಸಮಾಜವೇ ತಲೆ ತಗ್ಗಿಸುವಂಥ ಹೀನ ಕೃತ್ಯ ನಡೆದಿದೆ. ಅದೂ ಕೂಡ ಸರ್ಕಾರಿ ಆಸ್ಪತ್ರೆಯಲ್ಲಿ. ತಾಯಿಯ ಅನಾರೋಗ್ಯ ಚಿಕಿತ್ಸೆಗೆಂದು ಕರೆದುಕೊಂಡು ಬಂದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಗ್ರೂ ಡಿ ನೌಕರ ಈ ಕೃತ್ಯ ಎಸಗಿದ್ದು ಸರ್ಕಾರಿ ಆಸ್ಪತ್ರೆಗಳಲ್ಲೂ ಮಹಿಳೆಯರಿಗೆ ರಕ್ಷಣೆ ಇಲ್ವಾ ಎನ್ನುವಂಥ ಪ್ರಶ್ನೆಗಳು ಮೂಡಿವೆ.
ಇದನ್ನೂ ಓದಿ : ಆಗ HERO.. ಈಗ VILLAIN! – RCBಗೆ ಜಿತೇಶ್ & ಶೆಫರ್ಡ್ ಭಾರ
ವಿಜಯನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯಿಂದ ಇಂತಹ ಹೀನಾಯ ಕೃತ್ಯ ನಡೆದಿದೆ. ಅಪ್ರಾಪ್ತ ಬಾಲಕಿಗೆ ಲೈ*ಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. 16 ವರ್ಷದ ಅಪ್ರಾಪ್ತ ಬಾಲಕಿ ತನ್ನ ತಾಯಿಯನ್ನು ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ಕರೆತರುತ್ತಿದ್ದಳು. ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ, ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅಜಯ್ ಮದಕರಿ (37) ಎಂಬ ವ್ಯಕ್ತಿ ಬಾಲಕಿಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದಾನೆ. ಕಳೆದ ಎರಡು ತಿಂಗಳಿನಿಂದ ಬಾಲಕಿ ತಾಯಿಯನ್ನು ಆಸ್ಪತ್ರೆಗೆ ಕರೆತರುತ್ತಿದ್ದ ಸಂದರ್ಭದಲ್ಲಿ ಈ ಪರಿಚಯ ಹೆಚ್ಚಾಗಿತ್ತು. ಆರೋಪಿ ಅಲ್ಲಿ ನೌಕರ ಆಗಿದ್ದರಿಂದ ಬಾಲಕಿ ಕೂಡ ಹೆಚ್ಚಿನ ಮಾಹಿತಿಗಾಗಿ ಆತನ ಬಳಿ ಹೆಚ್ಚೆಚ್ಚು ಮಾತನಾಡುತ್ತಿದ್ದಳು. ಆದರೆ ಆರೋಪಿ ಇದೇ ಸಲುಗೆಯನ್ನು ಬಳಸಿಕೊಂಡು ಪಾಪದ ಕೆಲಸ ಮಾಡಿದ್ದಾನೆ.
ಬಾಗಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರೂಪ್ ಡಿ ನೌಕರನಾಗಿ ಕಾರ್ಯನಿರ್ವಹಿಸುತ್ತಿರುವ ಆರೋಪಿ ಬಾಲಕಿಯ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾನೆ. ಘಟನೆ ನಡೆದ ದಿನ, ಬಾಲಕಿಯನ್ನು ಪುಸಲಾಯಿಸಿ ಆಸ್ಪತ್ರೆಯ ಕ್ವಾರ್ಟರ್ಸ್‌ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿಗೆ ಕರೆದೊಯ್ದ ಬಳಿಕ, ಅವಳಿಗೆ ಮತ್ತು ಬರುವ ಔಷಧಿ ನೀಡಿದ್ದು, ನಂತರ ಅವಳ ಮೇಲೆ ಲೈ*ಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸಂತ್ರಸ್ತ ಬಾಲಕಿಯ ಕುಟುಂಬಸ್ಥರು ಹೊಸಪೇಟೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಮಕ್ಕಳ ಮೇಲೆ ಲೈ*ಗಿಕ ಅಪರಾಧಗಳಿಂದ ರಕ್ಷಣೆಯ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಘಟನೆ ಬಳಿಕ ವಿಜಯನಗರ ಜಿಲ್ಲೆಯಲ್ಲಿ ರಕ್ಷಣೆಯ ಪ್ರಶ್ನೆಗಳು ಮೂಡಿವೆ.

ನೋಡಿರಿ

