ಫ್ರೀ ಬಸ್ ಪ್ರಯಾಣಕ್ಕೆ ಹೊಸ ರೂಲ್ಸ್ – ವೋಟರ್ ಐಡಿ ಇದ್ರೆ ಮಾತ್ರ ಸ್ಮಾರ್ಟ್ ಕಾರ್ಡ್

ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರ ಉಚಿತ ಬಸ್ ಪ್ರಯಾಣದ ‘ಶಕ್ತಿ’ ಯೋಜನ ಸಾರಿಗೆ ಇಲಾಖೆಯು ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಯೋಜನೆಯ ದುರ್ಬಳಕೆಯನ್ನು ತಡೆಯಲ ಮತ್ತು ಕೇವಲ ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ಸಿಗುವಂತೆ ಮಾಡಲು ಇನ್ನುಮುಂದೆ ಸ್ಮಾರ್ಟ್ ಕಾರ್ಡ್‌ಗಳನ್ನು ಕಡ್ಡಾಯಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ.
ಯೋಜನೆ ಜಾರಿಯಾದಾಗಿನಿಂದಲೂ ನಕಲಿ ಆಧಾರ್ ಕಾರ್ಡ್ ಅಥವಾ ಇತರ ದಾಖಲೆಗಳನ್ನು ಬಳಸಿ ಅರ್ಹರಲ್ಲದವರು ಉಚಿತವಾಗಿ ಪ್ರಯಾಣಿಸುತ್ತಿರುವ ದೂರುಗಳು ಕೇಳಿಬಂದಿದ್ದವು. ಇದರಿಂದ ಸಾರಿಗೆ ನಿಗಮಗಳಿಗೆ ಉಂಟಾಗುತ್ತಿರುವ ಆರ್ಥಿಕ ನಷ್ಟವನ್ನು ತಪ್ಪಿಸಲು, ಕೇವಲ ಕರ್ನಾಟಕದ ಮೂಲ ನಿವಾಸಿಗಳಿಗೆ ಮಾತ್ರ ಸೌಲಭ್ಯ ಸಿಗುವಂತೆ ಮಾಡಲು ಯೋಜಿಸಲಾಗುತ್ತಿದೆ. ಇದಕ್ಕಾಗಿ ಸ್ಮಾರ್ಟ್ ಕಾರ್ಡ್ ಪಡೆಯಲು ರಾಜ್ಯದ ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸುವ ಪ್ರಕ್ರಿಯೆ ಜಾರಿಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರಿಗೆ ಲಕ್ಷ್ಮಣ ರೇಖೆ – ನಿಯಮ ಮೀರಿದರೆ ದಂಡದ ಜೊತೆ ಕಾನೂನು ಕ್ರಮ
ಈ ಹೊಸ ಸ್ಮಾರ್ಟ್ ಕಾರ್ಡ್‌ಲ್ಲಿ ಪ್ರಯಾಣಿಕರ ಹೆಸರು, ಫೋಟೋ, ಆಧಾರ್ ಸಂಖ್ಯೆ ಹಾಗೂ ವಿಳಾಸದ ಸಂಪೂರ್ಣ ಮಾಹಿತಿ ಇರಲಿದೆ. ಈ ಕಾರ್ಡ್ ಅನ್ನು ಯಾವುದೇ ಕಾರಣಕ್ಕೂ ಇತರರಿಗೆ ವರ್ಗಾಯಿಸಲು ಸಾಧ್ಯವಿರುವುದಿಲ್ಲ. ಸಾರಿಗೆ ಇಲಾಖೆಯು ಇವುಗಳನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ವಿನ್ಯಾಸಗೊಳಿಸುತ್ತಿದ್ದು, ಬಸ್‌ಗಳ ಇಟಿಎಂ ಯಂತ್ರಗಳಲ್ಲಿ ಸುಲಭವಾಗಿ ಸ್ಕ್ಯಾನ್ ಮಾಡಬಹುದಾಗಿದೆ. ಮೊದಲ ಹಂತದಲ್ಲಿ ಬೆಂಗಳೂರಿನ ಬಿಎಂಟಿಸಿ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿ, ನಂತರ ರಾಜ್ಯಾದ್ಯಂತ ವಿಸ್ತರಿಸಲು ಇಲಾಖೆ ತೀರ್ಮಾನಿಸಿದೆ.
ಅರ್ಹ ಮಹಿಳೆಯರು ಹಾಗೂ ತೃತೀಯ ಲಿಂಗಿಗಳಿಗೆ ಈ ಸ್ಮಾರ್ಟ್ ಕಾರ್ಡ್‌ಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಸಾರ್ವಜನಿಕರು ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಅಥವಾ ಪ್ರಮುಖ ಬಸ್ ನಿಲ್ದಾಣಗಳಲ್ಲಿ ತೆರೆಯಲಾಗುವ ವಿಶೇಷ ಕೌಂಟರ್‌ಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಕಾರ್ಡ್‌ಗಳನ್ನು ಪಡೆದುಕೊಳ್ಳಬಹುದು. ಈ ನಿಯಮದಿಂದಾಗಿ ಉಚಿತ ಪ್ರಯಾಣದ ವ್ಯವಸ್ಥೆಯಲ್ಲಿ ಪಾರದರ್ಶಕತೆ ಬರಲಿದೆ ಎಂದು ಸಾರಿಗೆ ಇಲಾಖೆಯ ಮೂಲಗಳು ತಿಳಿಸಿವೆ.

ನೋಡಿರಿ

