ಜೂನ್‌ 11 ರಂದು ಶಕ್ತಿ ಯೋಜನೆಗೆ ಚಾಲನೆ – ಟಿಕೆಟ್‌.. ಟಿಕೆಟ್.. ಎಂದು ಕಂಡಕ್ಟರ್‌ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!

ಜೂನ್‌ 11 ರಂದು ಶಕ್ತಿ ಯೋಜನೆಗೆ ಚಾಲನೆ – ಟಿಕೆಟ್‌.. ಟಿಕೆಟ್.. ಎಂದು ಕಂಡಕ್ಟರ್‌ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಮೂರನ್ನು ಪ್ರಾರಂಭಿಸಲು ಸಿದ್ದವಾಗಿದೆ. ಅದರಂತೆ ಜೂನ್ 11 ರಂದು ಬೆಂಗಳೂರಿನಲ್ಲಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಲಿದ್ದಾರೆ.

ಇದನ್ನೂ ಓದಿ: ದಂಡ ಹಾಕಿದ್ದೂ ಸಾರ್ಥಕ ಆಯ್ತು – ಕೆಎಸ್ಆರ್‌ಟಿಸಿಗೆ ಹರಿದು ಬಂತು ಲಕ್ಷ ಲಕ್ಷ ಆದಾಯ..!

ಚುನಾವಣೆಗೂ ಮುನ್ನ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಉಚಿತ ಗ್ಯಾರಂಟಿ ಯೋಜನೆಗಳನ್ನು ವಿಭಿನ್ನವಾಗಿ ಜಾರಿಗೆ ತರಲು ಸರ್ಕಾರ ಮುಂದಾಗಿದ್ದು, ಜೂ. 11ರಂದು ಮೊದಲ ಯೋಜನೆಗೆ ವಿಧಾನಸೌಧ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ದೊರೆಯಲಿದೆ. ಅಂದು ಸಿಎಂ ಸಿದ್ದರಾಮಯ್ಯ ಅವರು ಕೆಲ ಕಾಲ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ಇದೇ ಭಾನುವಾರ ‘ಶಕ್ತಿ’ ಯೋಜನೆ ಉದ್ಘಾಟನೆಗೊಳ್ಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಜೆಸ್ಟಿಕ್‌ನಿಂದ ನಾಡಿನ ಶಕ್ತಿಕೇಂದ್ರವಾದ ವಿಧಾನಸೌಧಕ್ಕೆ ತೆರಳುವ ರೂಟ್‌ ನಂ.43 ಬಸ್‌ನಲ್ಲಿ ಕಂಡಕ್ಟರ್‌ ರೀತಿ ಟಿಕೆಟ್‌ ವಿತರಿಸುವ ಮೂಲಕ ಈ ಮಹಾತ್ವಾಕಾಂಕ್ಷಿ ಯೋಜನೆಗೆ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಲಿದ್ದಾರೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ (ಎ.ಸಿ. ಬಸ್ ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

suddiyaana