ಪತ್ನಿ ಪಾರ್ವತಿ ಸಮಾಧಿ ಪಕ್ಕದಲ್ಲೇ ಮರೆಯಾದ ಶಾಮನೂರು ಶಿವಶಂಕರಪ್ಪ – ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ

ಪತ್ನಿ ಪಾರ್ವತಿ ಸಮಾಧಿ ಪಕ್ಕದಲ್ಲೇ ಮರೆಯಾದ ಶಾಮನೂರು ಶಿವಶಂಕರಪ್ಪ – ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿನ್ನೆ ವಿಧಿವಶರಾಗಿದ್ದಾರೆ. ಇಂದು ಅವರ ಅಂತ್ಯಕ್ರಿಯೆ ನೆರವೇರಿದೆ. ಸರ್ಕಾರಿ ಗೌರವಗಳೊಂದಿಗೆ, ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.  ಅವರ ಪತ್ನಿ ಪಾರ್ವತಮ್ಮ ಅವರ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ನೆರವೇರಿತು.

ಇದನ್ನೂ ಓದಿ: ಶೋರೂಂ ತಲುಪುವ ಮುನ್ನವೇ ಸುಟ್ಟು ಕರಕಲಾದ 40 ಬೈಕ್‌ಗಳು!

ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ದಾವಣಗೆರೆಯಲ್ಲಿರುವ ಶಾಮನೂರು ಒಡೆತನದ ಕಲ್ಲೇಶ್ವರ ಮಿಲ್ ಆವರಣದಲ್ಲಿ ನೆರವೇರಿಸಲಾಯಿತು. ಶಿವ-ಪಾರ್ವತಿ ಅನ್ನೋ ಪದ್ದತಿ ಮೂಲಕ ಅವರ ಧರ್ಮ ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಅಂತ್ಯ ಸಂಸ್ಕಾರ ನಡೆಸಲಾಗಿದೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರೆವೇರಿಸಲಾಯಿತು. ಪಂಚಪೀಠಾದೀಶ್ವರ ಪಾದೋದಕ ಮೂಲಕ ಪೂಜೆ ನಡೆಸಲಾಯ್ತು. ಮಣ್ಣು ಬಳಸದೇ ವಿಭೂತಿ ಬಳಸುವ ಕ್ರೀಯಾ ಸಮಾಧಿ ಬಳಿಕ ಪಾರ್ಥಿವ ಶರೀರಕ್ಕೆ ಅಭಿಷೇಕ ಮಾಡಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಇನ್ನು ಇದಕ್ಕೂ ಮುನ್ನ ದಾವಣಗೆರೆ ಹೃದಯ ಭಾಗವಾದ ಹೈಸ್ಕೂಲ್ ಮೈದಾನದಲ್ಲಿ ಸೋಮವಾರ ಸಂಜೆ 4 ಗಂಟೆವರೆಗೂ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು. ಅದಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಗಣ್ಯರು, ಸಾ‌ರ್ವಜನಿಕರು ಹಾಗೂ ಅಭಿಮಾನಿಗಳು ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಬಳಿಕ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡರು.  ಬಳಿಕ ಶಾಮನೂರು ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಗೌರವ ವಂದನೆ ಸಲ್ಲಿಸಲಾಯಿತು. ರಾಷ್ಟ್ರಗೀತೆ ಹಾಡುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು. ಪಾರ್ಥಿವ ಶರೀರದ ಮೇಲೆ ರಾಷ್ಟ್ರಧ್ವಜ ಹೊದಿಸಿ ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಗಾಳಿಯಲ್ಲಿ 3 ಸುತ್ತು ಗುಂಡು ಹಾರಿಸಿ ಅಂತಿಮ ನಮನ ಸಲ್ಲಿಸಲಾಯಿತು.

ಇದೇ ವೇಳೆ ಗೃಹ ಸಚಿವ ಜಿ.ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜ ಸಚಿವರಾದ ಎಸ್‌.ಎ.ರವೀಂದ್ರನಾಥ, ಎಂ.ಪಿ.ರೇಣುಕಾಚಾರ್ಯ, ಶಾಸಕ ಕೆ.ಎಸ್. ಬಸವಂತಪ್ಪ, ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅಂತಿಮ ದರ್ಶನ ಪಡೆದರು.

Shwetha M