ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್‌! – ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ!

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್‌! – ತಿಮರೋಡಿ ಮನೆ ಮೇಲೆ ಎಸ್‌ಐಟಿ ದಾಳಿ!

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗುತ್ತಿದೆ. ಇದೀಗ ಮಾಸ್ಕ್‌ಮ್ಯಾನ್‌ ಚಿನ್ನಯ್ಯನಿಗೆ ಆಶ್ರಯ ನೀಡಿದ ಮಹೇಶ್‌ ಶೆಟ್ಟಿ ತಿಮರೋಡಿಗೆ ಸಂಕಷ್ಟ ಶುರುವಾಗಿದೆ. ಇದೀಗ ತಿಮರೋಡಿ ನಿವಾಸದ ಮೇಲೆ ವಿಶೇಷ ತನಿಖಾ ತಂಡ ದಾಳಿ ನಡೆಸಿದೆ.

ಇದನ್ನೂ ಓದಿ: ಸೆಪ್ಟೆಂಬರ್‌ 1 ರಂದು ಸಿಗೋಣವಾ…! –  ಅಭಿಮಾನಿಗಳಿಗೆ ಕಿಚ್ಚ ಸುದೀಪ್‌ ಸ್ಪೆಷಲ್‌ ಸಂದೇಶ!

ಧರ್ಮಸ್ಥಳದಲ್ಲಿ ಉಖ್ಖನನ ನಡೆಯುತ್ತಿದ್ದಾಗ ಈ ಗ್ಯಾಂಗ್‌ನ ಎಲ್ಲಾ ಸದಸ್ಯರು ತಿಮರೋಡಿ ಮನೆಯಲ್ಲೇ ತಂಗಿದ್ದರು. ಎಲ್ಲಾ ಪ್ಲ್ಯಾನ್‌ಗಳು ಇಲ್ಲೇ ಸಿದ್ಧವಾಗುತ್ತಿತ್ತು. ಎಸ್‌ಐಟಿ ವಿಚಾರಣೆ ವೇಳೆ ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಈ ಬಗ್ಗೆ ಬಾಯ್ಬಿಟ್ಟಿದ್ದಾನೆ. ಎಸ್‌ಐಟಿ ಉತ್ಕನನ ನಡೆಸಿದ ಬಳಿಕ ತಾನು ತಿಮರೋಡಿಯ ನಿವಾಸಕ್ಕೆ ಹೋಗುತ್ತಿದ್ದೆ. ಅಲ್ಲಿ ನನಗೆ ಒಂದು ಕೊಠಡಿಯನ್ನು ನೀಡಲಾಗಿತ್ತು. ಅಲ್ಲಿ ನಾನು ಬಟ್ಟೆ, ಬ್ಯಾಗ್ ಇಟ್ಟಿದ್ದೇನೆ. ನಾನು ಮೊಬೈಲ್‌ ಬಳಸುತ್ತಿರಲಿಲ್ಲ. ನನ್ನ ಮೊಬೈಲ್‌ ತಿಮರೋಡಿ ಕಡೆಯವರ ಜೊತೆ ಇತ್ತು ಎಂದು ಹೇಳಿದ್ದ. ಇದೀಗ ಚಿನ್ನಯ್ಯನ ಹೇಳಿಕೆಯಂತೆ ಇಂದು ಪೊಲೀಸರು  ಕೋರ್ಟ್‌ ಸರ್ಚ್‌ ವಾರಂಟ್‌ ಪಡೆದು ತಿಮರೋಡಿಗೆ ಆಗಮಿಸಿದ್ದಾರೆ.

ಚಿನ್ನಯ್ಯ ತಂಗಿದ್ದ ಕೊಠಡಿಯ ಮಹಜರು ಮತ್ತು ಮೊಬೈಲ್‌ ಸಂಗ್ರಹಿಸಲು ಪೊಲೀಸರು ತಿಮರೋಡಿ ನಿವಾಸಕ್ಕೆ ಆಗಮಿಸಿದ್ದಾರೆ. ಪೊಲೀಸ್‌ ವಾಹನಗಳ ಜೊತೆ ಮಾಧ್ಯಮಗಳ ವಾಹನಗಳು ತಿಮರೋಡಿಗೆ ತೆರಳಿತ್ತು. ಆದರೆ ಪೊಲೀಸರು ತಿಮರೋಡಿಗೆ ಹೋಗುವ ಮಾರ್ಗ ಮಧ್ಯೆಯೇ 1 ಕಿ.ಮೀ ದೂರದಲ್ಲಿ ಎಲ್ಲಾ ಮಾಧ್ಯಮಗಳ ವಾಹನಗಳನ್ನು ತಡೆದಿದ್ದಾರೆ ಎಂದು ವರದಿಯಾಗಿದೆ.

Shwetha M