ರಾಹುಲ್ ಗಾಂಧಿ ನೇತೃತ್ವದ ಪ್ರತಿಭಟನಾ ರ್ಯಾಲಿ ಆ.8ಕ್ಕೆ ಮುಂದೂಡಿಕೆ!

ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತ ಕಳ್ಳತನ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಟೋಟಕ ಹೇಳಿಕೆ ನೀಡಿದ್ರು. ಈ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಗಸ್ಟ್ 5ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಉದ್ದೇಶಿಸಿತ್ತು. ಆದ್ರೀಗ ಪ್ರತಿಭಟನಾ ದಿನಾಂಕವನ್ನ ಮುಂದೂಡಿಕೆ ಮಾಡಲಾಗಿದೆ.
ಇದನ್ನೂ ಓದಿ: ENGಗೆ 35 ರನ್.. INDಗೆ 4 ವಿಕೆಟ್ – 5ನೇ ಪಂದ್ಯ.. 5ನೇ ದಿನ.. ಗೆಲ್ಲೋದ್ಯಾರು?
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪೋಟಕ ಹೇಳಿಕೆ ಬೆನ್ನಲ್ಲೇ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಗಸ್ಟ್ 5ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಉದ್ದೇಶಿಸಿತ್ತು. ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ ಎಂಬ ಧ್ಯೇಯದಡಿ ಹಮ್ಮಿಕೊಂಡ ಪ್ರತಿಭಟನಾ ಸಮಾವೇಶಕ್ಕೆ ಎಲ್ಲ ರೀತಿಯ ಸಿದ್ಧತೆಗಳು ಕೂಡ ನಡೆದಿದ್ದವು. ಖುದ್ದು ರಣದೀಪ್ ಸುರ್ಜೇವಾಲ ಹಾಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಿದ್ಧತೆಗಳನ್ನು ಮಾಡಲಾಗಿತ್ತು. ಆರಂಭದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿವರೆಗೆ ಪಾದಯಾತ್ರೆಗೆ ಚಿಂತನೆ ನಡೆಸಲಾಗಿತ್ತು. ಆದರೆ, ನಂತರದಲ್ಲಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನಾ ಸಮಾವೇಶಕ್ಕೆ ನಿರ್ಧರಿಸಲಾಗಿತ್ತು. ಆದರೆ ಈಗ ಅಂತಿಮ ಕ್ಷಣದಲ್ಲಿ ಸಮಾವೇಶವನ್ನು ಮುಂದೂಡಲಾಗಿದೆ. ಹಿರಿಯ ನಾಯಕನ ನಿಧನದ ಕಾರಣ ಮುಂದೂಡಿಕೆ ಆಗಿದೆ.
ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ನಿಧನ ಹೊಂದಿದ್ದು, ಅವರಿಗೆ ಅಂತಿಮ ನಮನ ಸಲ್ಲಿಸಲು ಹಿರಿಯ ನಾಯಕರು ತೆರಳುತ್ತಿದ್ದಾರೆ. ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಾರ್ಖಂಡ್ಗೆ ತೆರಳುತ್ತಿದ್ದಾರೆ. ಹೀಗಾಗಿ ನಾಳೆ ನಿಗದಿಯಾಗಿದ್ದ ಪ್ರತಿಭಟನಾ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಸುರ್ಜೇವಾಲ ಹೇಳಿದ್ದಾರೆ. ನಾಳೆಯ ಬದಲು ಆಗಸ್ಟ್ 8ಕ್ಕೆ ಪ್ರತಿಭಟನೆ ಮುಂದೂಡಿದ್ದೇವೆ. ಪಕ್ಷದ ವತಿಯಿಂದ ಶಿಬು ಸೊರೇನ್ಗೆ ಅಂತಿಮ ನಮನ ಸಲ್ಲಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ನೋಡಿರಿ

