ಹೊಸ ಇನ್ನಿಂಗ್ಸ್ ಆರಂಭಿಸಿದ ಶಿಖರ್ ಧವನ್- ಮೈ ಲವ್ ಪೋಸ್ಟ್ ಹಾಕಿ ಗಾಳಿ ಸುದ್ದಿಗೆ ತೆರೆ ಎಳೆದ ಗಬ್ಬರ್ ಸಿಂಗ್

ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಆಯೇಷಾ ಮುಖರ್ಜಿಯಿಂದ ವಿಚ್ಛೇದನ ಪಡೆದ ಎರಡು ವರ್ಷಗಳಾಗಿವೆ. ಇದೀಗ ಗಬ್ಬರ್ ಸಿಂಗ್ ಎರಡನೇ ಇನ್ನಿಂಗ್ಸ್ ಶುರುವಾಗಿದೆ. ಶಿಖರ್ ಧವನ್ ಮತ್ತೆ ಪ್ರೀತಿಯಲ್ಲಿ ಬಿದ್ದಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಅನೌನ್ಸ್ ಮಾಡಿದ್ದಾರೆ.
ಇದನ್ನೂ ಓದಿ: RR ವಿರುದ್ಧ ಗೆದ್ದು ಮೊದಲ ಸ್ಥಾನಕ್ಕೆ ಜಿಗಿದ ಮುಂಬೈ- ಲೀಗ್ನಿಂದ ಹೊರಬಿದ್ದ ರಾಜಸ್ಥಾನ್
2 ವರ್ಷದ ಹಿಂದೆ ತಮ್ಮ ಮಡದಿಯಿಂದ ವಿಚ್ಛೇದನ ಪಡೆದು ಏಕಾಂಗಿಯಾಗಿದ್ದ ಶಿಖರ್ ಧವನ್ ಜೀವನಕ್ಕೆ ಹೊಸ ಗೆಳತಿಯ ಆಗಮನವಾಗಿದೆ. ಶಿಖರ್ ಧವನ್ ಗುರುವಾರ ಇನ್ಸ್ಟಾಗ್ರಾಮ್ನಲ್ಲಿ ಒಂದು ಪೋಸ್ಟ್ ಮಾಡಿದ್ದು, ಅದರಲ್ಲಿ ಅವರು ತಮ್ಮ ಮತ್ತು ಸೋಫಿ ಶೈನ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ‘ನನ್ನ ಪ್ರೀತಿ’ ಎಂದು ಶೀರ್ಷಿಕೆ ನೀಡಲಾಗಿದ್ದು, ಈ ಇಬ್ಬರ ನಡುವಿನ ಸಂಬಂಧಕ್ಕೆ ಅಧಿಕೃತ ಮುದ್ರೆ ಬಿದ್ದಿದೆ.
ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಪ್ರಸ್ತುತ ಐರ್ಲೆಂಡ್ ಮೂಲದ ಸೋಫಿ ಶೈನ್ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಾರೆ. ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಫೋಟೋ ಪೋಸ್ಟ್ ಮಾಡುವ ಮೂಲಕ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಸಮಯದಲ್ಲಿ ಶಿಖರ್ ಧವನ್ ಸೋಫಿ ಜೊತೆ ಕಾಣಿಸಿಕೊಂಡಿದ್ದರು. ಸೋಫಿ ಟೀಂ ಇಂಡಿಯಾ ಪಂದ್ಯಗಳನ್ನು ವೀಕ್ಷಿಸಲು ಧವನ್ ಜೊತೆಗೆ ಬಂದಿದ್ದು ಮಾತ್ರವಲ್ಲದೆ, ಇಬ್ಬರಿಬ್ಬರು ಜೊತೆ ಜೊತೆಯಾಗಿ ಮದುವೆ ಸಮಾರಂಭಗಳಲ್ಲೂ ಕಾಣಿಸಿಕೊಂಡಿದ್ದರು.
ಇದಕ್ಕೂ ಮೊದಲು, ಶಿಖರ್ ಧವನ್ ಮತ್ತು ಸೋಫಿ ಕಳೆದ ವರ್ಷ ಒಟ್ಟಿಗೆ ಕಾಣಿಸಿಕೊಂಡಿದ್ದರು. ನವೆಂಬರ್ 2024 ರಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಮುಂಚೆಯೇ, ಇಬ್ಬರೂ ವಿಮಾನ ನಿಲ್ದಾಣದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇವರಿಬ್ಬರ ನಡುವೆ ಏನೋ ನಡೆಯುತ್ತಿದೆ ಎಂಬ ಊಹಪೋಹಗಳಿಗೆ ರೆಕ್ಕೆ ಸಿಕ್ಕಿದ್ದು ಇಲ್ಲಿಂದಲೆ. ಇದೀಗ ಶಿಖರ್ ಧವನ್ ಇಬ್ಬರು ಪ್ರೀತಿಯಲ್ಲಿ ಬಿದ್ದಿರುವುದನ್ನು ಖಚಿತಪಡಿಸಿದ್ದಾರೆ. ಸೋಫಿ ಮೂಲತಃ ಐರ್ಲೆಂಡ್‌ನವರಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿದ್ದಾರೆ. ಸೋಫಿ 44 ಸಾವಿರಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ.