ನಟಿ ಶಿಲ್ಪಾ ಶೆಟ್ಟಿ, ರಾಜ್‌ಕುಂದ್ರಾಗೆ ಬಿಗ್‌ ಶಾಕ್‌ – ಬರೋಬ್ಬರಿ 97 ಕೋಟಿ ಮೌಲ್ಯದ ಆಸ್ತಿ ಜಪ್ತಿ!

ನಟಿ ಶಿಲ್ಪಾ ಶೆಟ್ಟಿ, ರಾಜ್‌ಕುಂದ್ರಾಗೆ ಬಿಗ್‌ ಶಾಕ್‌ – ಬರೋಬ್ಬರಿ 97 ಕೋಟಿ ಮೌಲ್ಯದ ಆಸ್ತಿ ಜಪ್ತಿ!

ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ಉದ್ಯಮಿ ರಾಜ್ ಕುಂದ್ರಾಗೆ ಜಾರಿ ನಿರ್ದೇಶನಾಲಯ ಶಾಕ್‌ ನೀಡಿದೆ. ಬಿಟ್‌ಕಾಯಿನ್ ಪೊಂಜಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಂಪತಿಗೆ ಸೇರಿದ 98 ಕೋಟಿ ರೂಪಾಯಿ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಗಳನ್ನು ಇಡಿ ಅಧಿಕಾರಿಗಳು ವಶಪಡೆದಿದ್ದಾರೆ.

ಇದನ್ನೂ ಓದಿ: ಸೌಜನ್ಯಗಾಗಿ ನೋಟಾ ಅಭಿಯಾನ! – ಎರಡು ಲಕ್ಷ ನೋಟಾ ಮತ ಬರುವ ನಿರೀಕ್ಷೆ!

2017ರಲ್ಲಿ 6600 ಕೋಟಿ ರೂಪಾಯಿಯನ್ನು ರಾಜ್​ ಕುಂದ್ರಾ ಹಾಗೂ ಅವರ ಸಂಗಡಿಗರು ಬಿಟ್​ಕಾಯಿನ್ ಮೂಲಕ ಸಂಪಾದಿಸಿದ್ದರು. ಜೊತೆಗೆ ತಿಂಗಳಿಗೆ ಶೇ. 10 ಪಾವತಿಸುವುದಾಗಿ ಜನರಿಗೆ ಆಮಿಷ ಒಡ್ಡಿದ್ದರು. ಇದನ್ನು ಬೃಹತ್ ಬಿಟ್‌ಕಾಯಿನ್ ಹಗರಣ ಎಂದು ಆರೋಪಿಸಲಾಗಿದೆ. ಬಿಟ್‌ಕಾಯಿನ್ ಪ್ರಕರಣದಿಂದ ರಾಜ್ ಕುಂದ್ರಾ ಪ್ರಸ್ತುತ 150 ಕೋಟಿ ಲಾಭ ಗಳಿಸುತ್ತಿದ್ದಾರೆ ಎಂದು ಇಡಿ ವರದಿಯಲ್ಲಿ ಬಹಿರಂಗವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಹುದಲ್ಲಿರುವ ಅವರ ಫ್ಲ್ಯಾಟ್, ಪುಣೆಯಲ್ಲಿರುವ ಬಂಗಲೆ, ರಾಜ್ ಕುಂದ್ರಾ ಹೆಸರಲ್ಲಿರುವ ಶೇರುಗಳನ್ನು ಜಪ್ತಿ ಮಾಡಲಾಗಿದೆ.

ಬಿಟ್‌ಕಾಯಿನ್ ಹಗರಣದಲ್ಲಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಅವರ ಹೆಸರಿತ್ತು. ಇದು ಸಾವಿರಾರು ಕೋಟಿ ರೂಪಾಯಿ ಹಗರಣ ಎನ್ನಲಾಗಿದೆ. ಈ ಪ್ರಕರಣದಲ್ಲಿ ಇಬ್ಬರಿಗೂ ಇಡಿ 2018ರಲ್ಲಿ ಸಮನ್ಸ್ ನೀಡಿತ್ತು. ಅವರನ್ನೂ ಪ್ರಶ್ನಿಸಲಾಯಿತು. ಆಗ ಈ ಪ್ರಕರಣದ ಪ್ರಮುಖ ಆರೋಪಿ ಅಮಿತ್ ಭಾರದ್ವಾಜ್ ಅವರನ್ನು  ಬಂಧಿಸಲಾಗಿತ್ತು. ಈ ಹಗರಣವು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ ಎಂದು ಹೇಳಲಾಗಿದೆ. gatbitcoin.com ಎಂಬ ವೆಬ್‌ಸೈಟ್‌ನಿಂದ ಕೋಟ್ಯಂತರ ರೂಪಾಯಿ ವಂಚಿಸಲಾಗಿದೆ. ಈ ಪ್ರಕರಣ ಕುಂದ್ರಾಗೆ ಸಂಬಂಧಿಸಿದ್ದು. ಹೀಗಾಗಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಈ ಪ್ರಕರಣದಲ್ಲಿ ಕುಂದ್ರಾ ಅಪರಾಧಿಯೇ ಅಥವಾ ಹೂಡಿಕೆದಾರನೇ ಎಂಬುದು ಸ್ಪಷ್ಟವಾಗಿಲ್ಲ.

Shwetha M