5 ಲಕ್ಷ ಲಂಚ ಸ್ವೀಕರಿಸುವಾಗ ಲೋಕ ಬಲೆಗೆ ಬಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ

ರಸ್ತೆ ಕಾಮಗಾರಿ ಸಂಬಂಧಿಸಿ 5 ಲಕ್ಷ ಲಂಚ ಸ್ವೀಕರಿಸುವ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಶಾಸಕರ ಒಡೆತನದ ಬಾಲಾಜಿ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ.ಗುತ್ತಿಗೆದಾರ ವಿಜಯ ಪೂಜಾರ ಎಂಬುವರಿಂದ 5 ಲಕ್ಷ ಹಣ ಪಡೆಯುವ ವೇಳೆ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ತಂಡ ದಾಳಿ ನಡೆಸಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸಂಕಧಾಳ ಗ್ರಾಮದಲ್ಲಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಬದಿಯ ತಡೆಗೋಡೆ ನಿರ್ಮಾಣ ಕಾಮಗಾರಿ ಮಂಜೂರಾಗಿದೆ. ಇದಕ್ಕಾಗಿ ಗುತ್ತಿಗೆದಾರ ವಿಜಯ ಪೂಜಾರ ಎಂಬುವರ ಬಳಿ ಗುತ್ತಿಗೆಗೆ ಶಾಸಕ 11 ಲಕ್ಷ ಡೀಲ್ ಮಾಡಿಕೊಂಡಿದ್ದರು ಎನ್ನಲಾಗಿದೆ.ಇಂದು ಗುತ್ತಿಗೆದಾರ ವಿಜಯ ಪೂಜಾರ 5 ಲಕ್ಷ ಹಣ ಶಾಸಕರಿಗೆ ನೀಡುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ಶಾಸಕ ಚಂದ್ರ ಲಮಾಣಿ, ಅವರ ಸರ್ಕಾರಿ ಪಿಎ ಮಂಜುನಾಥ ವಾಲ್ಮೀಕಿ ಹಾಗೂ ಶಾಸಕರ ಖಾಸಗಿ ಪಿಎ ಗುರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಗೊಂಬೆಯಾದ್ರೂ ನೀನೇ ನನ್ನ ಅಮ್ಮ! – ಹೆತ್ತಮ್ಮ ದೂರ ಮಾಡಿದ್ದಕ್ಕೆ ಗೊಂಬೆಯನ್ನೇ ತಾಯಿ ಅಂದುಕೊಂಡಿರುವ ಕೋತಿ ಮರಿ!
ಶಾಸಕ ಲಮಾಣಿ ಅವರೊಂದಿಗೆ ಅವರ ಸರ್ಕಾರಿ ಪಿಎ ವಾಲ್ಮೀಕಿ ಮತ್ತು ಖಾಸಗಿ ಪಿಎ ಮಂಜುನಾಥ್ ಹಾಗೂ ಗುರು ಲಮಾಣಿ ಎಂಬ ಇಬ್ಬರು ಸಹಾಯಕರು ಸಹ ಲೋಕಾಯುಕ್ತರ ವಶದಲ್ಲಿದ್ದಾರೆ. ಒಟ್ಟು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಗುತ್ತಿಗೆದಾರರೊಬ್ಬರಿಂದ 5 ಲಕ್ಷ ರೂ. ಕಮಿಷನ್ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಏಕಾಏಕಿ ದಾಳಿ ನಡೆಸಿದರು. ರಸ್ತೆ ಪಕ್ಕದಲ್ಲಿ ಒಂದು ಕೋಟಿ ರೂಪಾಯಿ ಮೊತ್ತದ ವಾಲ್ ನಿರ್ಮಾಣ ಮಾಡುವ ಕೆಲಸಕ್ಕೆ ಶಾಸಕರು 12 ಪರ್ಸೆಂಟ್ ಕಮಿಷನ್ ಕೇಳಿದ್ದರು. ನಂತರ 11 ಪರ್ಸೆಂಟ್ ಗೆ ವ್ಯವಹಾರ ಕುದುರಿತ್ತು ಎನ್ನಲಾಗಿದೆ. ಈ ಹಣವನ್ನು ಅವರ ಪಿಎ ಮೂಲಕ ಸ್ವೀಕರಿಸಲು ಸೂಚಿಸಿದಾಗ, ಲೋಕಾಯುಕ್ತರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ನೋಡಿರಿ

