ಶಿವಮೊಗ್ಗದಲ್ಲಿ ಹೃದಯಾಘಾತದಿಂದ 6 ವರ್ಷದ ಬಾಲಕ ಸಾ*ವು – ಕೋಲಾರದಲ್ಲಿ ಸಂಪ್‌ಗೆ ಮಗು ಬಲಿ

ಶಿವಮೊಗ್ಗದಲ್ಲಿ ಹೃದಯಾಘಾತದಿಂದ 6 ವರ್ಷದ ಬಾಲಕ ಸಾ*ವು – ಕೋಲಾರದಲ್ಲಿ ಸಂಪ್‌ಗೆ ಮಗು ಬಲಿ

ಹೃದಯಾಘಾತದಿಂದ 6 ವರ್ಷದ ಬಾಲಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ  ಸಾಗರ ತಾಲೂಕಿನ ಹಾಳಸಸಿ ಗ್ರಾಮದಲ್ಲಿ ನಡೆದಿದೆ. ತ್ರಿಲೋಕ್ ಜೈನ್ (6) ಮೃತ ಬಾಲಕ.

ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರನಾದ ತ್ರಿಲೋಕ್ ಜೈನ್, ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದ. ಶನಿವಾರ ಮಧ್ಯಾಹ್ನ ಶಾಲೆ ಮುಗಿಯುವ ಸಮಯದಲ್ಲಿ ಶಾಲಾ ಆವರಣದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದ. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಪುತ್ರನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ದೀಪ್ತಿ, ಸ್ಮೃತಿ ದಾಳಿಗೆ ಕಂಗೆಟ್ಟ ಪಾಕಿಸ್ತಾನ – ಪಾಕ್ ವಿರುದ್ಧ ಗೆದ್ದು ಬೀಗಿದ ಟೀಮ್ ಇಂಡಿಯಾ

ಇದು ಹೃದಯಾಘಾತದಿಂದ ಸಂಭವಿಸಿದ ಹಠಾತ್ ನಿಧನವೋ ಅಥವಾ ತ್ರಿಲೋಕ್‌ಗೆ ಈ ಹಿಂದೆ ಯಾವುದಾದರೂ ಹೃದಯ ಸಂಬಂಧಿ ಕಾಯಿಲೆ ಇತ್ತೇ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ

ಕೋಲಾರದಲ್ಲಿ ಸಂಪ್‌ಗೆ ಬಿದ್ದು ಮಗು ಸಾವು 

ಮನೆ ಬಳಿಯ ಸಂಪ್‌ಗೆ  ಬಿದ್ದು ಮಗು  ಸಾವನ್ನಪ್ಪಿದ ಘಟನೆ ಕೋಲಾರದ  ಕಾರಂಜಿಕಟ್ಟೆ ಬಡಾವಣೆಯ 10ನೇ ಕ್ರಾಸ್‌ನಲ್ಲಿ ನಡೆದಿದೆ. ನಗರದ ವಿಕಾಸ್ ಹಾಗೂ ಹಂಸ ದಂಪತಿ ಪುತ್ರ ಯಶಸ್ (3) ಮೃತಪಟ್ಟ ಮಗು. ಮಗು ಅಂಗಳದಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಸಂಪ್‌ಗೆ ಬಿದ್ದಿದೆ. ಈ ವೇಳೆ ತಕ್ಷಣ ನೀರಿನಿಂದ ಮಗುವನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಷ್ಟರಲ್ಲೇ ಮಗು ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Kishor KV

Leave a Reply

Your email address will not be published. Required fields are marked *