ತುಂಗಾ ತೀರದಲ್ಲಿ ಟ್ರಯಲ್ ಬಾ*ಬ್ ಸ್ಫೋ*ಟ ಕೇಸ್ – ಇಬ್ಬರು ಆರೋಪಿಗಳಿಗೆ 6 ವರ್ಷ ಜೈಲು ಶಿಕ್ಷೆ

ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಸ್ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ.
ಇದನ್ನೂ ಓದಿ: ಸಸ್ಯಕಾಶಿ ಲಾಲ್ಬಾಗ್ನಲ್ಲಿ ಇನ್ಮುಂದೆ ಹೊಸ ರೂಲ್ಸ್! – ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಫೈನ್!
ಶಿವಮೊಗ್ಗ ಮೂಲದ ಜಬೀವುಲ್ಲಾ ಹಾಗೂ ನದೀಂ ಫೈಜಲ್ ಶಿಕ್ಷೆಗೊಳಗಾದವರು. ಎನ್ಐಎ ಕೋರ್ಟ್ 6 ವರ್ಷಗಳ ಜೈಲು ಶಿಕ್ಷೆ ಹಾಗೂ ಆರೋಪಿಗಳಿಗೆ ತಲಾ 59,000 ರೂ. ದಂಡ ಕೂಡ ವಿಧಿಸಲಾಗಿದೆ.
ಏನಿದು ಕೇಸ್?
ಕಳೆದ 4 ವರ್ಷಗಳ ಹಿಂದೆ ಜಬೀವುಲ್ಲಾ ಹಾಗೂ ನದೀಂ ಫೈಜಲ್ ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ನಡೆಸಿದ್ದರು. ಬಳಿಕ ಭಾರತದ ಧ್ವಜ ಸುಟ್ಟದ್ದಲ್ಲದೇ 2022ರ ಆ.15 ರಂದು ರಾಜಸ್ಥಾನ ಮೂಲದ ಪ್ರೇಮ್ ಸಿಂಗ್ ಎಂಬಾತನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ್ದರು. ಪ್ರಕರಣ ಸಂಬಂಧ ಇವರ ವಿರುದ್ಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬೆನ್ನಲ್ಲೇ ಪೊಲೀಸರು ಇಬ್ಬರನ್ನ ಬಂಧಿಸಿ, ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಜಬೀವುಲ್ಲಾ ಹಾಗೂ ನದೀಂ ಫೈಜಲ್ ತಪ್ಪೊಪ್ಪಿಕೊಂಡಿದ್ದರು. ಈ ಹಿನ್ನೆಲೆ ಆರೋಪಿಗಳಿಗೆ ಎನ್ಐಎ ವಿಶೇಷ ನ್ಯಾಯಾಲಯ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದೆ.

ನೋಡಿರಿ

