ಸ್ನೇಹಿತನ ಉಳಿಸಲು ಹೋಗಿ ಬಾಲಕನ ಜೀವವೇ ಹೋಯ್ತು! – ಅನ್ಯಕೋಮಿನ ಬಾಲಕರಿಂದ SSLC ವಿದ್ಯಾರ್ಥಿಯ ಹ*ತ್ಯೆ!

ಶಿವಮೊಗ್ಗದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಅನ್ಯಕೋಮಿನ ಬಾಲಕರಿಂದ ಎಸ್ ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ ನಡೆದಿದೆ. ಸ್ನೇಹಿತನನ್ನು ಬಚಾವ್ ಮಾಡಲು ಹೋಗಿ ಬಾಲಕನೊಬ್ಬ ಅಸುನೀಗಿದ್ದಾನೆ.
ಇದನ್ನೂ ಓದಿ: ಉಸಿರಾಡುವ ಗಾಳಿಯೇ ವಿಷವಾಗುತ್ತಿದೆ! – ಬೆಂಗಳೂರು, ಉಡುಪಿಯಲ್ಲಿ ಏರ್ ಕ್ವಾಲಿಟಿ ಕಳಪೆ!
ಈ ಘಟನೆ ಶಿವಮೊಗ್ಗದ ಸೂಳೆಬೈಲು ಎಂಬಲ್ಲಿ ನಡೆದಿದೆ. ಸಂಕೇತ್ ಅನ್ಯಕೋಮಿನ ಬಾಲಕರಿಂದ ಕೊಲೆಯಾದ ಬಾಲಕ. ಗಿರೀಶ್ ಹಲ್ಲೆಗೊಳಗಾದ ಬಾಲಕ.
ಏನಿದು ಘಟನೆ?
ಸಂಕೇತ್ ಸೂಳೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ. ಪರೀಕ್ಷೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸ್ಪೆಶಲ್ ಕ್ಲಾಸ್ ತೆಗೆದುಕೊಳ್ಳಲಾಗುತ್ತಿತ್ತು. ಸೂಳೆಬೈಲು ಬಡಾವಣೆಯ ಸಂಕೇತ್ ಕ್ಲಾಸ್ ಮುಗಿಸಿಕೊಂಡು ವಾಪಸ್ ಮನೆಯತ್ತ ಹೋಗುತ್ತಿದ್ದ. ಈ ವೇಳೆ ಸಂಕೇತ್ ಸ್ನೇಹಿತ ಗಿರೀಶ್ ಮೇಲೆ ಅದೇ ಬಡಾವಣೆಯ ಐವರು ಬಾಲಕರು ಹಲ್ಲೆ ಮಾಡುತ್ತಿದ್ದುದನ್ನು ಕಂಡಿದ್ದಾನೆ. ಕೂಡಲೇ ಪ್ರಾಣ ಸ್ನೇಹಿತ ಗಿರೀಶ್ನನ್ನು ಕಾಪಾಡಲು ಹೋಗಿದ್ದಾನೆ. ಈ ವೇಳೆ ಐವರು ಬಾಲಕರು ಸಂಕೇತ್ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಸಂಕೇತ್ ಅಲ್ಲಿಯೇ ಕುಸಿದು ಬಿದ್ದಿದ್ದಾನೆ. ಸಂಕೇತ್ ಕುಸಿದು ಬೀಳುತ್ತಿದ್ದಂತೆಯೇ ಮೂವರು ಬಾಲಕರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇತ್ತ ಗಿರೀಶ್ ಅಲ್ಲಿಂತ ತಪ್ಪಿಸಿಕೊಂಡು ಬಂದು ತನ್ನ ಮನೆಯವರಿಗೆ ಮತ್ತು ಅಕ್ಕಪಕ್ಕದವರಿಗೆ ಗಲಾಟೆ ಬಗ್ಗೆ ಮಾಹಿತಿ ಕೊಟ್ಟಿದ್ದಾನೆ. ಅಕ್ಕಪಕ್ಕದವರು ಅಲ್ಲಿಗೆ ಹೋಗಿ ನೋಡಿದಾಗ ಹಲ್ಲೆಗೊಳಗಾದ ಸಂಕೇತ್ ಸ್ಥಿತಿ ಗಂಭೀರವಾಗಿತ್ತು. ಬಾಲಕರು ಎದೆ, ಮುಖ, ಹೊಟ್ಟೆ ಮೇಲೆ ಹೊಡೆದಿದ್ದಾರೆ. ಇದರಿಂದ ಸಂಕೇತ್ ಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆಗೆ ದಾಖಲಿಸುವ ಮೊದಲೇ ಅಸುನೀಗಿದ್ದಾನೆ.
ಇನ್ನು ಮಾಹಿತಿ ತಿಳಿಯುತ್ತಿದ್ದಂತೆ ತುಂಗಾ ನಗರ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಹಲ್ಲೆ ಮಾಡಿ ಕೊಲೆಗೆ ಕಾರಣವಾದ ಇಬ್ಬರು ಬಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಕುರಿತು ತನಿಖೆಯು ಚುರುಕುಗೊಂಡಿದೆ. ನಗರದಲ್ಲಿ ಕೋಮು ಗಲಭೆ ಆಗದಂತೆ ಜಿಲ್ಲಾ ಪೊಲೀಸರು ಎಲ್ಲ ರೀತಿಯ ಮುಂಜಾಗ್ರತೆ ವಹಿಸಿದ್ದಾರೆ. ಘಟನಾ ಸ್ಥಳ, ಮೆಗ್ಗಾನ್ ಜಿಲ್ಲಾಸ್ಪತ್ರೆ ಸೇರಿದಂತೆ ನಗರದಲ್ಲಿ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಗಿರೀಶ್ನ ಆರೋಗ್ಯ ವಿಚಾರಿಸಿ, ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ. ಏತನ್ಮಧ್ಯೆ, ಸಂಕೇತ್ ಸಾವಿನ ಕುರಿತು ಶಾಸಕರು ಸರಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಪೊಲೀಸ್ ಇಲಾಖೆ ಅಂದರೆ ಹಿಂದೂಗಳ ಹೆಣಹೊರುವ ಇಲಾಖೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಹಿಂದೂಗಳ ಜೀವ ಹೋಗಿದೆ. ಇದಕ್ಕೆ ಹೊಣೆ ಯಾರು ಎಂದು ಪ್ರಶ್ನೆ ಮಾಡಿದ್ಧಾರೆ.

ನೋಡಿರಿ

