‘ಜೈಲರ್’ ಶೂಟಿಂಗ್‌ನಲ್ಲಿ ರಜನಿಗೆ ಶಿವಣ್ಣ ಸಾಥ್- ಸಿನಿ ದಿಗ್ಗಜರನ್ನು ಒಟ್ಟಿಗೆ ನೋಡಿ ಖುಷಿಯಾದ ಫ್ಯಾನ್ಸ್

‘ಜೈಲರ್’ ಶೂಟಿಂಗ್‌ನಲ್ಲಿ ರಜನಿಗೆ ಶಿವಣ್ಣ ಸಾಥ್-  ಸಿನಿ ದಿಗ್ಗಜರನ್ನು ಒಟ್ಟಿಗೆ ನೋಡಿ ಖುಷಿಯಾದ ಫ್ಯಾನ್ಸ್

ಸೂಪರ್ ಸ್ಟಾರ್ ರಜನಿಕಾಂತ್ ಈಗ ‘ಜೈಲರ್’ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಸ್ಟೈಲ್‌ಕಿಂಗ್ ಗೆ ಈಗ ಹ್ಯಾಟ್ರಿಕ್ ಹೀರೋ ಶಿವಣ್ಣ ಜೊತೆಯಾಗಿದ್ದಾರೆ. ಮಂಗಳೂರಿನಲ್ಲಿ ಜೈಲರ್ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಶಿವಣ್ಣ ಮತ್ತು ರಜನಿಕಾಂತ್ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಇದು ರಜನಿಕಾಂತ್ ನಟನೆಯ 169ನೇ ಸಿನಿಮಾ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ‘ಜೈಲರ್’ ಸಿನಿಮಾ ಸೆಟ್ಟೇರಿದೆ. ಖ್ಯಾತ ನಿರ್ಮಾಣ ಸಂಸ್ಥೆ ‘ಸನ್ ಪಿಕ್ಚರ್ಸ್’ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ರಜನಿಕಾಂತ್ ಅವರ ಫಸ್ಟ್ ಲುಕ್ ಪೋಸ್ಟರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಇದನ್ನೂ ಓದಿ:  ‘ಪಾರು’ ಪ್ರೀತು ಜೊತೆ  ಅದಿತಿ ‘ಗಟ್ಟಿಮೇಳ’- ಮದುವೆಯಲ್ಲಿ ಯಾರೆಲ್ಲಾ ಭಾಗಿಯಾಗಿದ್ರು ಗೊತ್ತಾ?

‘ಜೈಲರ್’ ಚಿತ್ರದಲ್ಲಿ ಶಿವರಾಜ್ ಕುಮಾರ್ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದಲ್ಲಿ ಶಿವಣ್ಣನ ಲುಕ್ ಹೇಗಿರಲಿದೆ ಅನ್ನೋದನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ‘ಜೈಲರ್’ ಚಿತ್ರದಲ್ಲಿ ರಜನಿಕಾಂತ್ ಎದುರು ಶಿವಣ್ಣ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇದೀಗ ಇಬ್ಬರೂ ಸಿನಿ ದಿಗ್ಗಜರು ಕರಾವಳಿಯಲ್ಲಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಅಭಿಮಾನಿಗಳಂತೂ ಇಬ್ಬರನ್ನೂ ಜೊತೆಯಲ್ಲೇ ಕಣ್ತುಂಬಿಕೊಳ್ಳುತ್ತಿದ್ದಾರೆ.

ಖ್ಯಾತ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಅವರು ಈ ಮೊದಲು ದಳಪತಿ ವಿಜಯ್ ನಟನೆಯ ‘ಬೀಸ್ಟ್’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದರು. ಜನಪ್ರಿಯ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ತಮನ್ನಾ ಈ ಚಿತ್ರಕ್ಕೆ ನಾಯಕಿ.

suddiyaana