ಇರುಮುಡಿ ಹೊತ್ತು ಸಾಗಿದ ಶಿವಣ್ಣ – ಅಯ್ಯಪ್ಪ ಸ್ವಾಮಿಯ ಮೆರವಣಿಗೆಯಲ್ಲಿ ಪತ್ನಿ ಗೀತಾ ಶಿವರಾಜ್ ಕುಮಾರ್ ಸಾಥ್

ಇರುಮುಡಿ ಹೊತ್ತು ಸಾಗಿದ ಶಿವಣ್ಣ – ಅಯ್ಯಪ್ಪ ಸ್ವಾಮಿಯ ಮೆರವಣಿಗೆಯಲ್ಲಿ ಪತ್ನಿ ಗೀತಾ ಶಿವರಾಜ್ ಕುಮಾರ್ ಸಾಥ್

ಮಕರ ಸಂಕ್ರಾಂತಿ ಹಬ್ಬದ ದಿನ ದೊಡ್ಮನೆ ದೊರೆ ಇರುಮುಡಿ ಹೊತ್ತು ಸಾಗಿದ್ದಾರೆ.  ನಟ ಶಿವರಾಜ್ ಕುಮಾರ್ ಪ್ರತಿವರ್ಷದಂತೆ ಈ ವರ್ಷ ಕೂಡಾ ಇರುಮುಡಿ ಹೊತ್ತಿದ್ದಾರೆ.

ಇದನ್ನೂ ಓದಿ:ತಿರುಪತಿ ಆಯ್ತು.. ಈಗ ಶಬರಿಮಲೆ ತುಪ್ಪದಲ್ಲೂ ಗೋಲ್ ಮಾಲ್! – ತನಿಖೆಗೆ ಆದೇಶಿಸಿದ ಕೇರಳ ಹೈಕೋರ್ಟ್!

ಸ್ಯಾಂಡಲ್‌ವುಡ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಯ್ಯಪ್ಪ ಸ್ವಾಮಿಯ ಭಕ್ತರು. ಪ್ರತಿ ವರ್ಷದಂತೆ ಈ ಬಾರಿಯೂ ಕೂಡಾ ಶಿವಣ್ಣ ಅಯ್ಯಪ್ಪ ಮಾಲೆ ಧರಿಸಿದರು. ಜೊತೆಗೆ ಮಾಲೆ ಧರಿಸಿ ಇರುಮುಡಿ  ಹೊತ್ತಿದ್ದಾರೆ. ಈ ಸಂದರ್ಭದಲ್ಲಿ ಶಿವಣ್ಣನ ಜೊತೆ ಪತ್ನಿ ಗೀತಾ ಕೂಡ ಸಾಥ್ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಶ್ರೀಕ್ಷೇತ್ರ ಬೆಜ್ಜವಳ್ಳಿ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಸಂಪ್ರದಾಯದಂತೆ ಶಿವಣ್ಣ ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿಗೆ ಪವಿತ್ರ ಅಭಿಷೇಕ ಮಾಡಿದರು. ವಿಶ್ವ ಸಂತೋಷ ಭಾರತಿ ಗುರೂಜಿ ನೇತೃತ್ವದಲ್ಲಿ ಮೆರವಣಿಗೆ ನಡೆದಿದೆ. ಮಕರ ಸಂಕ್ರಮಣದ ಅಂಗವಾಗಿ ಅಯ್ಯಪ್ಪನ ಪೂಜೆಗೂ ಮುನ್ನ ಮೆರವಣಿಗೆ ಮಾಡಲಾಗಿದೆ. ವಿವಿಧ ಆಭರಣಗಳ ಸಮೇತ, ಉತ್ಸವ ಮೂರ್ತಿಯನ್ನ ದೇವಸ್ಥಾನಕ್ಕೆ ಮೆರವಣಿಗೆ ಮೂಲಕ ತರಲಾಗಿದೆ. ಬೆಜ್ಜವಳ್ಳಿ ಅಯ್ಯಪ್ಪನ ಉತ್ಸವ ಪ್ರತಿವರ್ಷವೂ ವಿಜೃಂಭಣೆಯಿಂದ ನಡೆಯುತ್ತದೆ.

Sulekha