ಶಿವಣ್ಣ ಬಳಿಕ ಗೀತಾ ಶಿವರಾಜ್ಕುಮಾರ್ಗೆ ಅನಾರೋಗ್ಯ! ಸರ್ಜರಿಗೆ ಒಳಗಾದ ಹ್ಯಾಟ್ರಿಕ್ ಹೀರೋ ಪತ್ನಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇತ್ತೀಚೆಗಷ್ಟೇ ಕ್ಯಾನ್ಸರ್‌ಗೆ ಶಸ್ತ್ರಚಿಕಿತ್ಸೆ ಪಡೆದುಕೊಂಡಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಈ ಹೊತ್ತಲ್ಲೇ ಶಿವಣ್ಣ ಫ್ಯಾನ್ಸ್ ಗೆ ಮತ್ತೊಂದು ಶಾಕಿಂಗ್ ಸುದ್ದಿಯಿದೆ. ಅಣ್ಣವ್ರ ಕುಟುಂಬದಲ್ಲಿ ಮತ್ತೊಬ್ಬರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.
ಇದನ್ನೂ ಓದಿ: ಪಂಜಾಬ್ ಪರ ಕ್ಯಾಪ್ಟನ್ ಅಯ್ಯರ್ ಭರ್ಜರಿ ಬ್ಯಾಟಿಂಗ್ – ಗುಜರಾತ್ ಟೈಟನ್ಸ್ ವಿರುದ್ಧ ಪಂಜಾಬ್‌ಗೆ 11 ರನ್‌ಗಳ ರೋಚಕ ಗೆಲುವು
ಶಿವರಾಜ್ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಇದೀಗ ಗೀತಾ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಕತ್ತಿನ ಭಾಗದಲ್ಲಿ ಶಸ್ತ್ರಚಿಕಿತ್ಸೆ ಆಗಿದೆ ಎಂದು ಅವರ ಆಪ್ತ ವಲಯದವರು ಮಾಹಿತಿ ನೀಡಿದ್ದಾರೆ. ಕುಟುಂಬದ ಕಡೆಯಿಂದ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬರಬೇಕಿದೆ.
ಗೀತಾ ಶಿವರಾಜ್ಕುಮಾರ್ ಅವರಿಗೆ ನರದ ಸಮಸ್ಯೆಯಿಂದ ಕತ್ತಿನ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಈ ಮೊದಲೇ ಅವರು ಇದಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿತ್ತು. ಆದರೆ ಅದು ಸಾಧ್ಯವಾಗಿರಲಿಲ್ಲ. ಈಗ ಗೀತಾ ಅವರು ಕತ್ತಿನ ಭಾಗದಲ್ಲಿ ಸರ್ಜರಿ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಅವರು ಬೇಗ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ್ದ ಗೀತಾ ಅವರ ಸಹೋದರ ಹಾಗೂ ಸಚಿವ ಮಧು ಬಂಗಾರಪ್ಪ, ಗೀತಕ್ಕ ಅವರಿಗೆ ಸರ್ಜರಿ ಆಗಿದೆ ಎನ್ನುವ ಮಾಹಿತಿ ನೀಡಿದ್ದರು. ಆದರೆ, ಸರ್ಜರಿಯ ಕಾರಣ ಏನು ಎಂಬುದನ್ನು ರಿವೀಲ್ ಮಾಡಿರಲಿಲ್ಲ. ಈಗ ಅವರ ಆಪ್ತ ಮೂಲಗಳಿಂದ ಸರ್ಜರಿ ಹಿಂದಿನ ಕಾರಣ ರಿವೀಲ್ ಆಗಿದೆ.