ಸಾನಿಯಾ ಮಿರ್ಜಾ ದಾಂಪತ್ಯದಲ್ಲಿ ಬಿರುಕು ಸುದ್ದಿ ಬೆನ್ನಲ್ಲೇ ಶಾಕಿಂಗ್ ನ್ಯೂಸ್ – ಪಾಕಿಸ್ತಾನಿ ನಟಿ ಜೊತೆ ಶೋಯೆಬ್ ಮಲಿಕ್ ಮದುವೆ
ಭಾರತೀಯ ಮಾಜಿ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್, ಪಾಕ್‌ನ ನಟಿ ಸನಾ ಜಾವೇದ್ ಅವರನ್ನು ಮದುವೆಯಾಗಿದ್ದಾರೆ. ನಟಿ ಸನಾ ಜಾವೇದ್ ಅವರೊಂದಿಗೆ ವಿವಾಹವಾಗಿರುವ ಫೋಟೋಗಳನ್ನು ಸ್ವತಃ ಮಲಿಕ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಸಾನಿಯಾ ಮಿರ್ಜಾ ಗ್ರ್ಯಾಂಡ್ ಸ್ಲಾಮ್ ಪಯಣ ಅಂತ್ಯ – ಕೊನೇ ಪಂದ್ಯದ ಬಳಿಕ ಮೂಗುತಿ ಸುಂದರಿ ಭಾವುಕ
ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ಅವರ ಮದುವೆಯು 12 ಏಪ್ರಿಲ್ 2010 ರಂದು ನಡೆದಿತ್ತು. ಆದರೀಗ ಶೋಯೆಬ್ ಜನಪ್ರಿಯ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾಗಿದ್ದಾರೆ. ಮದುವೆಯ ಫೋಟೋವನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರಿಗೆ ಇದು ಮೂರನೇ ಮದುವೆ. ಶೋಯೆಬ್ ಮದುವೆಯಾಗಿರುವ ಸನಾ ಜಾವೇದ್ ಪಾಕಿಸ್ತಾನದ ಜನಪ್ರಿಯ ನಟಿ.
ಶೋಯೆಬ್ ಮತ್ತು ಸಾನಿಯಾ ಮಿರ್ಜಾ ಅವರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿ ಹರಿದಾಡಿತ್ತು. ಇಬ್ಬರು ಬೇರ್ಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಇವುಗಳ ನಡುವೆ ಶೋಯಬ್ ಮಲಿಕ್ ಅವರ ಮದುವೆಯ ಸುದ್ದಿ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆಯಷ್ಟೇ ಸಾನಿಯಾ ಮಿರ್ಜಾ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಅದರಲ್ಲಿ, ಮದುವೆ ಕಷ್ಟ. ವಿಚ್ಛೇದನ ಕಷ್ಟ. ನಿಮ್ಮ ಕಷ್ಟವನ್ನು ಆರಿಸಿ. ಬೊಜ್ಜು ಕಷ್ಟ. ಫಿಟ್ ಆಗಿ ಉಳಿಯುವುದು ಕಷ್ಟ. ನಿಮ್ಮ ಕಷ್ಟವನ್ನು ಆರಿಸಿ. ಸಾಲದಲ್ಲಿ ಉಳಿಯುವುದು ಕಷ್ಟ. ಆರ್ಥಿಕವಾಗಿ ಶಿಸ್ತುಬದ್ಧವಾಗಿರುವುದು ಕಷ್ಟ. ನಿಮ್ಮ ಕಷ್ಟವನ್ನು ಆರಿಸಿ. ಸಂವಹನ ಕಷ್ಟ. ಸಂವಹನ ಮಾಡದಿರುವುದು ಕಷ್ಟ. ನಿಮ್ಮ ಕಷ್ಟವನ್ನು ಆರಿಸಿ. ಜೀವನವು ಎಂದಿಗೂ ಸುಲಭವಾಗುವುದಿಲ್ಲ. ಇದು ಯಾವಾಗಲೂ ಕಷ್ಟಕರವಾಗಿರುತ್ತದೆ. ಆದರೆ ನಾವು ನಮ್ಮ ಕಠಿಣ ಆಯ್ಕೆ ಮಾಡಬಹುದು. ಬುದ್ಧಿವಂತಿಕೆಯಿಂದ ಆರಿಸಿ ಎಂಬ ಪೋಸ್ಟ್ ಶೇರ್ ಮಾಡಿಕೊಂಡಿದ್ದರು. ಈ ಮೂಲಕ ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ವಿಚ್ಛೇದನ ಪಡೆದಿದ್ದಾರೆ ಎಂಬ ಸೂಚನೆ ಸಿಕ್ಕಿದ್ದವು.
ಇವರಿಬ್ಬರ ವಿವಾಹದ ಬಗ್ಗೆ ಭಾರತದಲ್ಲಿ ಸಾಕಷ್ಟು ವಿವಾದಗಳು ನಡೆದವು. ಇಬ್ಬರೂ ಹೈದರಾಬಾದ್ನಲ್ಲಿ ಮದುವೆಯಾಗಿದ್ದರು. 2018 ರಲ್ಲಿ ಸಾನಿಯಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಕೊರೋನ ನಂತರ, ಇಬ್ಬರ ನಡುವೆ ಅಸಮಾಧಾನ ಉಂಟಾಗಿತ್ತು. ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಇನ್ನು 41 ವರ್ಷದ ಶೋಯೆಬ್ ಮಲಿಕ್ ಅವರನ್ನು ವಿವಾಹ ಆಗಿರುವ ಸನಾ ಜಾವೇದ್ ಅವರಿಗೆ ಕೂಡ ಇದು ಎರಡನೇ ಮದುವೆ. ಸನಾ ಈ ಹಿಂದೆ ಪಾಕಿಸ್ತಾನಿ ಗಾಯಕ ಉಮರ್ ಜಸ್ವಾಲ್ ಅವರನ್ನು ವಿವಾಹ ಆಗಿದ್ದರು. ಸದ್ಯ ಸನಾ ಮತ್ತು ಉಮರ್ ತಮ್ಮ ಹಳೆಯ ಫೋಟೋಗಳನ್ನು ಇನ್ಸ್ಟಾಗ್ರಾಮ್ನಿಂದ ಡಿಲೀಟ್ ಮಾಡಿದ್ದಾರೆ. ಸನಾ ಅವರ ಮೊದಲ ಮದುವೆ 2020 ರಲ್ಲಿ ನಡೆದಿದ್ದರೆ, ಈಗ ಅವರ ಎರಡನೇ ಮದುವೆ 2024 ರಲ್ಲಿ ಆಗಿದೆ.